ಕುಸಿದು ಬಿದ್ದು ಕೆಎಸ್‌ಆರ್‌ಟಿಸಿ ನೌಕರ ಮೃತ್ಯು
ಕೋಟ, ಜ.16: ಕೆಎಸ್‌ಆರ್‌ಟಿಸಿ ನೌಕರರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಜ.16ರಂದು ಬೆಳಗ್ಗೆ ಮೊಳಹಳ್ಳಿ ಗ್ರಾಮದ ಹುಲ್ಕಲ್‌ಕೆರೆ ಎಂಬಲ್ಲಿ ನಡೆದಿದೆ.
ಮೃತರನ್ನು ಹುಲ್ಕಲ್‌ಕೆರೆ ನಿವಾಸಿ ಹೆರಿಯಣ್ಣ ಕುಲಾಲ್ (50) ಎಂದು ಗುರುತಿಸಲಾಗಿದೆ. ಇವರು ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಸುಮಾರು 20 ವರ್ಷಗಳಿಂದ ಚಾಲಕ/ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು. ಇವರು ಕೆಲಸಕ್ಕೆ ಹೋಗಲು ಮನೆಯಿಂದ ಸ್ವಲ್ಪ ಮುಂದೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





