Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಅತಿಥಿ ಉಪನ್ಯಾಸಕರಿಂದ...

ತುಮಕೂರು: ಅತಿಥಿ ಉಪನ್ಯಾಸಕರಿಂದ ರಾಷ್ಟ್ರಪತಿಗಳಿಗೆ ದಯಾಮರಣಕ್ಕೆ ಆರ್ಜಿ

ವಾರ್ತಾಭಾರತಿವಾರ್ತಾಭಾರತಿ17 Jan 2022 11:36 PM IST
share
ತುಮಕೂರು: ಅತಿಥಿ ಉಪನ್ಯಾಸಕರಿಂದ ರಾಷ್ಟ್ರಪತಿಗಳಿಗೆ ದಯಾಮರಣಕ್ಕೆ ಆರ್ಜಿ

ತುಮಕೂರು.ಜ.17:ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನವನ್ನು ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ, ಸರಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನು ಸಾವಿನ ದವಡೆಗೆ ತಳ್ಳಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕ ರಲ್ಲಿ ಒಡೆದು ಆಳುವ ನೀತಿಯನ್ನು ರಾಜ್ಯ ಸರಕಾರ ಸಮಸ್ಯೆ ಪರಿಹಾರದ ನೆಪದಲ್ಲಿ,ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.ಇದುವರೆಗೂ ಇದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಸುಮಾರು 7500 ಸಾವಿರ ಅತಿಥಿ ಉಪನ್ಯಾಸಕಗೆ ಕೆಲಸವಿಲ್ಲದಂತೆ ಮಾಡಿದ್ದಾರೆ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು.

ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಅವರು, ಏಕಾಎಕಿ ಸುದ್ದಿಗೋಷ್ಠಿ ನಡೆಸಿ,ಡಾ.ಕುಮಾರನಾಯ್ಕ್ ವರದಿ ಆಧರಿಸಿ,ಅತಿಥಿ ಉಪನ್ಯಾಸಕರ ವೇತನವನ್ನು ಈಗ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8 ಗಂಟೆಯಿಂದ 15 ಗಂಟೆಗಳಿಗೆ ನಿಗಧಿಗೊಳಿಸಿರುವುದಾಗಿ ತಿಳಿಸಿದ್ದಾರೆ. ಸರಕಾರಕ್ಕೆ ಒಂದು ಆಯೋಗ ವರದಿ ಸಲ್ಲಿಸಿದ ನಂತರ, ಅದು ಅಧಿವೇಶನದಲ್ಲಿ ಚರ್ಚೆಯಾಗಬೇಕು.ಸಂಬಂಧಪಟ್ಟವರ ಜೊತೆ ಸಾಧಕ, ಭಾಧಕಗಳ ಕುರಿತು ಚರ್ಚೆ ನಡೆಸಬೇಕು.ಆದರೆ ಇದ್ಯಾವುದನ್ನು ಮಾಡದೆ ಏಕಾಎಕಿ ಹೇಳಿಕೆ ನೀಡಿರುವುದರ ಹಿಂದೆ 7500 ಜನ ಅತಿಥಿ ಉಪನ್ಯಾಸಕರನ್ನು ಮನೆಗೆ ಕಳುಹಿಸುವ ಕೆಟ್ಟ ಹುನ್ನಾರವಿದೆ.ಹಾಗಾಗಿ ಅತಿಥಿ ಉಪನ್ಯಾಸಕರು ಸರಕಾರದ ಈ ಪರಿಹಾರವನ್ನು ಒಪ್ಪಲು ಸಾಧ್ಯವಿಲ್ಲ.ವೇತನ ಹೆಚ್ಚಳದ ಜೊತೆಗೆ,ಕಾರ್ಯಾಭಾರವನ್ನು ಈ ಹಿಂದಿನಂತೆಯೇ 8 ಗಂಟೆಗೆ ನಿಗಧಿಗೊಳಿಸಬೇಕು ಹಾಗೂ ಹೊಸದಾಗಿ ಅನ್‍ಲೈನ್ ಮೂಲಕ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಕೈಬಿಡಬೇಕೆಂದು ಆಗ್ರಹಿಸುವುದಾಗಿ ತಿಳಿಸಿದರು.

ಉನ್ನತ ಶಿಕ್ಷಣ ಸಚಿವ ಆಶ್ವಥನಾರಾಯಣ ಅವರು ಸುದ್ದಿಗೋಷ್ಠಿಯ ವೇಳೆ ನಾನು ಯಾವುದೇ ಒತ್ತಡಕ್ಕೆ ಬಗ್ಗುವುದಿಲ್ಲ ಎಂದಿದ್ದಾರೆ.ಪ್ರಜಾಸತಾತ್ಮಕ ಹೋರಾಟಗಳಿಗೆ ಮಣಿಯದ ಸರಕಾರಗಳೇ ಇಲ್ಲ.ನಮ್ಮ ಮುಂದೆಯೇ ಹಲವಾರು ಉದಾಹರಣ ಗಳಿವೆ.ಅಲ್ಲದೆ ಅತಿಥಿ ಉಪನ್ಯಾಸಕರು ತಮ್ಮ ಶಕ್ತಿ ಪ್ರದರ್ಶನಕ್ಕೆ ಬಂದಿಲ್ಲ. ನ್ಯಾಯಯುತ ಬೇಡಿಕೆಗಳಿಗಾಗಿ ಧರಣಿ ನಡೆಸುತ್ತಿದ್ದೇವೆ. ಸರಕಾರ ಕೂಡಲೇ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುವಂತಹ ಹೋರಾಟಕ್ಕೂ ನಾವು ಹಿಂಜರಿಯುವುದಿಲ್ಲ ಎಂಬುದನ್ನು ಸರಕಾರ ಅರಿತುಕೊಳ್ಳಬೇಕಿದೆ ಎಂದು ಜಿ.ಕೆ.ನಾಗಣ್ಣ ತಿಳಿಸಿದರು.

ಹೋರಾಟವನ್ನು ಬೆಂಬಲಿಸಿ ಮಾತನಾಡಿದ ಎಸ್.ಡಿ.ಪಿ.ಐ ಮುಖಂಡ ಭಾಸ್ಕರಪ್ರಸಾದ್,ರಾಜ್ಯ ಸರಕಾರಕ್ಕೆ ನಿಜವಾಗಿಯೂ ಅತಿಥಿ ಉಪನ್ಯಾಸಕರ ಬಗ್ಗೆ ಕಾಳಜಿಯಿಲ್ಲ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 14460 ಜನರನ್ನು ಖಾಯಂ ಮಾಡುವುದರಿಂದ ಸರಕಾರಕ್ಕೆ ವಾರ್ಷಿಕ 800-900ಕೋಟಿ ರೂಗಳ ಹೆಚ್ಚುವರಿಯಾಗಬಹುದು.2.60 ಲಕ್ಷ ಕೋಟಿ ಬಜೆಟ್‍ನಲ್ಲಿ 1 ಸಾವಿರ ಕೋಟಿ ದೊಡ್ಡದಲ್ಲ. ಸರಕಾರ ಕೂಡಲೇ ಇವರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಡಾ.ಶಿವಣ್ಣ ತಿಮ್ಮಲಾಪುರ,ಮಂಜಣ್ಣ,ಡಾ.ಕುಮಾರ್,ರಂಗಧಾಮಯ್ಯ,ಗಂಗಾಂಭಿಕೆ,ಗುಡ್ಡಣ್ಣ,ಅಂಬಿಕಾ, ಸುನಿಲ್, ಹರೀಶ್,ಸುನಿಲ್ ಕುಮಾರ್, ಡಾ.ರಮೇಶ್,ಮೂರ್ತಿ, ರಾಧಾಮಣಿ, ಪುಷ್ಪಲತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಬರೆದ ಪತ್ರವನ್ನು ಅಂಚೆ ಕಚೇರಿಯಲ್ಲಿ ಪೋಸ್ಟ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X