Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತಿಂಗಳಾಂತ್ಯದಲ್ಲಿ ಕೋವಿಡ್ ಮೊದಲ ಡೋಸ್...

ತಿಂಗಳಾಂತ್ಯದಲ್ಲಿ ಕೋವಿಡ್ ಮೊದಲ ಡೋಸ್ ಪೂರ್ಣಗೊಳಿಸಲು ಸಿಎಂ ಕಟ್ಟುನಿಟ್ಟಿನ ಸೂಚನೆ; ದ.ಕ.ಡಿಸಿ ಜೊತೆ ವರ್ಚುವಲ್ ಸಭೆ

ವಾರ್ತಾಭಾರತಿವಾರ್ತಾಭಾರತಿ18 Jan 2022 8:59 PM IST
share
ತಿಂಗಳಾಂತ್ಯದಲ್ಲಿ ಕೋವಿಡ್ ಮೊದಲ ಡೋಸ್ ಪೂರ್ಣಗೊಳಿಸಲು ಸಿಎಂ ಕಟ್ಟುನಿಟ್ಟಿನ ಸೂಚನೆ; ದ.ಕ.ಡಿಸಿ ಜೊತೆ ವರ್ಚುವಲ್ ಸಭೆ

ಮಂಗಳೂರು, ಜ.18: ಉಳ್ಳಾಲ, ಕೋಟೆಕಾರು, ಸೋಮೇಶ್ವರ ಸಹಿತ ಜಿಲ್ಲೆಯ ವಿವಿಧೆಡೆ ಈವರೆಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆಯದೇ ಬಾಕಿ ಉಳಿದಿರುವ ಪ್ರದೇಶಗಳಲ್ಲಿ ವಿಶೇಷ ಅಭಿಯಾನ ಹಮ್ಮಿಕೊಂಡು ಈ ತಿಂಗಳ ಅಂತ್ಯದೊಳಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬೆಂಗಳೂರಿನಿಂದ ವರ್ಚುವಲ್ ಮಾಧ್ಯಮದ ಮೂಲಕ ಮಂಗಳವಾರ ರಾಜ್ಯದ 18 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒ ಅವರೊಂದಿಗೆ ಕೋವಿಡ್-19 ಲಸಿಕಾ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.

ಕೋವಿಡ್ ವ್ಯಾಕ್ಸಿನ್‌ನ ಮೊದಲ ಡೋಸ್ ನೀಡಿಕೆಯಲ್ಲಿ ದ.ಕ.ಜಿಲ್ಲೆಯಲ್ಲಿ ಈವರೆಗೆ ಶೇ.96ರಷ್ಟು ಪ್ರಗತಿ ಸಾಧಿಸಿದೆ, ಬಾಕಿ ಉಳಿದ ವ್ಯಾಕ್ಸಿನ್ ನೀಡಿಕೆಯಲ್ಲಿ ವಿಳಂಬವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಕೋವಿಡ್ ಲಸಿಕೆ ನೀಡುವುದು ರಾಷ್ಟ್ರೀಯ ಕಾರ್ಯಕ್ರಮವಾಗಿದೆ, ಅದು ಸಂಪೂರ್ಣವಾಗಲೇಬೇಕು. ಅದರ ಶೇ.100ರಷ್ಟು ಪ್ರಗತಿಗೆ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲೇಬೇಕು, ಪ್ರಮುಖವಾಗಿ ಉಳ್ಳಾಲ, ಕೋಟೆಕಾರು, ಸೋಮೇಶ್ವರ ಸಹಿತ ಮೊದಲ ಡೋಸ್ ಬಾಕಿ ಉಳಿದ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಅಲ್ಲಿನ ಸ್ಥಳೀಯ ಮುಖಂಡರು, ಸಮುದಾಯಗಳ ಮುಖ್ಯಸ್ಥರು ಮತ್ತು ಶಾಸಕರ ಸಹಕಾರದೊಂದಿಗೆ ಮೊದಲ ಡೋಸ್ ಲಸಿಕೆಯನ್ನು ಪೂರ್ಣಗೊಳಿಸಬೇಕು, ಅದಕ್ಕಾಗಿ ವಿಶೇಷ ಅಭಿಯಾನಗಳನ್ನು, ಸೃಜನಾತ್ಮಕ ವಿಧಾನಗಳನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

ಇತರೆ ಜಿಲ್ಲೆಗಳಲ್ಲಿ ಕೋವಿಡ್ ವ್ಯಾಕ್ಸಿನ್ ನೀಡಿಕೆಯಲ್ಲಿ ಗಣನೀಯ ಪ್ರಗತಿ ಸಾಧಿಸಲಾಗುತ್ತಿದೆ, ಆದರೆ ಸುಶಿಕ್ಷಿತ ಜಿಲ್ಲೆಯೆಂಬ ಹೆಗ್ಗಳಿಕೆ ಪಡೆದಿರುವ ದ.ಕ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಕೂಡ ಪೂರ್ಣವಾಗದ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರಾಶೆ ವ್ಯಕ್ತಪಡಿಸಿದರು.

ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮೊದಲ ಡೋಸ್ ಪಡೆಯದವರನ್ನು ಪತ್ತೆ ಮಾಡಬೇಕು. ಅವರ ಮನೆಗಳಿಗೆ ಭೇಟಿ ನೀಡಬೇಕು, ಆದಷ್ಟು ಶೀಘ್ರವಾಗಿ ಕೋವಿಡ್‌ನ ಮೊದಲ ಡೋಸ್ ಪೂರ್ಣಗೊಳಿಸಬೇಕು, ಲಸಿಕೆ ಪಡೆಯದವರಲ್ಲಿ ಅದರ ಮಹತ್ವವನ್ನು ತಿಳಿಸಿಕೊಡಬೇಕು ಎಂದು ಸೂಚಿಸಿದ ಮುಖ್ಯಮಂತ್ರಿ ಜಿಲ್ಲೆಯಲ್ಲಿ ಎರಡನೇ ಡೋಸ್ ಶೇ.81ರಷ್ಟಾಗಿದ್ದು, ಅದರ ಪ್ರಗತಿಯ ಕಡೆಗೂ ಆದ್ಯತೆ ನೀಡಬೇಕು ಎಂದು ಹೇಳಿದರು.

ಆರೋಗ್ಯ ಸಚಿವ ಡಾ.ಸುಧಾಕರ್, ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ವರ್ಚುವಲ್ ಮಾಧ್ಯಮದ ಮೂಲಕ ಸಂಪರ್ಕದಲ್ಲಿದ್ದರು.

ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಿ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X