Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾರಾಯಣ ಗುರುಗಳ ಸ್ತಬ್ಧಚಿತ್ರ ವಿಚಾರ;...

ನಾರಾಯಣ ಗುರುಗಳ ಸ್ತಬ್ಧಚಿತ್ರ ವಿಚಾರ; ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನಾಯಕರಿಂದ ಹೇಳಿಕೆ: ಸಚಿವ ಸುನೀಲ್‍ಕುಮಾರ್

ವಾರ್ತಾಭಾರತಿವಾರ್ತಾಭಾರತಿ19 Jan 2022 7:53 PM IST
share
ನಾರಾಯಣ ಗುರುಗಳ ಸ್ತಬ್ಧಚಿತ್ರ ವಿಚಾರ; ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನಾಯಕರಿಂದ ಹೇಳಿಕೆ: ಸಚಿವ ಸುನೀಲ್‍ಕುಮಾರ್

ಬೆಂಗಳೂರು, ಜ. 19: `ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇರಳ ಕಳುಹಿಸಿದೆ ಎಂಬ ಕಾರಣಕ್ಕೆ ಕೇಂದ್ರ ಸರಕಾರ ತಿರಸ್ಕರಿಸಿಲ್ಲ. ನಾರಾಯಣ ಗುರುಗಳ ವಿಷಯದಲ್ಲಿ ಪ್ರಧಾನಿ ಮೋದಿಯವರಿಗೆ ಮತ್ತು ಬಿಜೆಪಿಗೆ ಅತಿ ಹೆಚ್ಚು ಗೌರವವಿದೆ' ಎಂದು ಕನ್ನಡ ಮತ್ತು ಸಂಸ್ಕೃತಿ ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಪ್ರಧಾನಿಯಾದ ಬಳಿಕ 2015ರ ಡಿಸೆಂಬರ್ 15ರಂದು ನಾರಾಯಣ ಗುರುಗಳ ಸಂಕಲ್ಪ ಕೇಂದ್ರವಾದ ಶಿವಗಿರಿಗೆ ಮೋದಿಯವರು ಭೇಟಿ ಕೊಟ್ಟಿದ್ದರು. `ಒಂದು ಕಾಲದಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಕೇರಳದಲ್ಲಿ ಮೇಲು-ಕೀಳು, ಜಾತಿ-ಧರ್ಮಗಳ ತಾರತಮ್ಯದ ನೆಲೆವೀಡಾಗಿದ್ದ ನೆಲದಲ್ಲಿ, ನಾರಾಯಣ ಗುರುಗಳು ತಂದ ಸಾಮಾಜಿಕ ಪರಿವರ್ತನೆಯಿಂದಾಗಿ ಕೇರಳವಿಂದು ಸಮಾನತೆಯ ಸಂದೇಶ ಸಾರುವ ನಾಡಾಗಿದೆ. ನಾರಾಯಣ ಗುರುಗಳ ಆದರ್ಶವು ಜಗತ್ತಿಗೇ ಬೆಳಕು ನೀಡಬಲ್ಲದು' ಎಂದು ಹೇಳಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರ ಅನಾವರಣ ಮಾಡಿದ್ದರು ಎಂದು ಅವರು ಸ್ಮರಿಸಿದ್ದಾರೆ.

ಈ ಹಿಂದೆ ಯಾವ ಕಮ್ಯೂನಿಸ್ಟ್ ಪಾರ್ಟಿ ನಾರಾಯಣ ಗುರುಗಳ ಮೂರ್ತಿಯನ್ನು ಭಗ್ನಗೊಳಿಸಿತ್ತೋ ಅವರೇ ಈಗ ರಾಜಕೀಯ ಕಾರಣಕ್ಕಾಗಿ ನಾರಾಯಣ ಗುರುಗಳ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಪೂರ್ಣ ವಿಷಯ ತಿಳಿದು ಹೇಳಿಕೆ ನೀಡಬೇಕು. ಅದನ್ನು ಬಿಟ್ಟು ಬೆಂಕಿ ಹಚ್ಚುವ ಕೆಲಸ ಮಾಡುವುದು ಸರಿಯಲ್ಲ. ರಾಜ್ಯದಲ್ಲಿರುವ ನಾರಾಯಣ ಗುರುಗಳ ಭಕ್ತರ ಮತ್ತು ಅನುಯಾಯಿಗಳಿಗೆ ತಪ್ಪು ಸಂದೇಶ ನೀಡಲಾಗಿದೆ ಎಂದು ಸುನೀಲ್ ಕುಮಾರ್ ಆಕ್ಷೇಪಿಸಿದ್ದಾರೆ.

ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಮೊದಲೇ ಇದರ ವಿರುದ್ಧ ತಪ್ಪು ಮಾಹಿತಿ ನೀಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲು ರಕ್ಷಣಾ ಸಚಿವಾಲಯದ ಪರಿಣತರ ಸಮಿತಿ ಇದೆ. ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕರಿಸಿ ಶಂಕರಾಚಾರ್ಯರ ಸ್ತಬ್ಧಚಿತ್ರವನ್ನು ಕಳುಹಿಸುವಂತೆ ಕೇಂದ್ರ ಹೇಳಿದೆ ಎಂಬುದು ಶುದ್ಧ ಸುಳ್ಳು. ಸಿದ್ದರಾಮಯ್ಯ ಕೊಳಕು ರಾಜಕೀಯ ಷಡ್ಯಂತ್ರವನ್ನು ಮಾಡುತ್ತಿದ್ದಾರೆ ಎಂದಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರಕಾರವು ಶಂಕರಾಚಾರ್ಯರ ಸ್ತಬ್ಧಚಿತ್ರ ಕಳುಹಿಸಲು ಸೂಚಿಸಿದೆ ಎನ್ನುವುದು ಸುಳ್ಳು. ಈ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಗಣರಾಜ್ಯೋತ್ಸವ ಪರೇಡ್‍ನಲ್ಲಿ ಭಾಗವಹಿಸುವ ಸ್ತಬ್ಧಚಿತ್ರ ಮೆರವಣಿಗೆಗೆ ಕೆಲವು ಅಲಿಖಿತ ನಿಯಮಗಳಿವೆ. ಕೇರಳ ಸರಕಾರವು ಈಗಾಗಲೇ ಒಮ್ಮೆ ಸ್ತಬ್ಧಚಿತ್ರ ನೀಡಿದೆ. ಇತರ ರಾಜ್ಯಗಳಿಗೆ ಅವಕಾಶ ನೀಡಬೇಕು. ಅಲ್ಲದೆ, ಸ್ತಬ್ಧಚಿತ್ರದ ಕೆಲವು ಮಾರ್ಗಸೂಚಿಗಳನ್ನು ಪಾಲಿಸಿಲ್ಲ. ಈ ಕಾರಣಕ್ಕೆ ಕೇರಳದ ಸ್ತಬ್ಧಚಿತ್ರ ಬೇಡ ಎಂದು ತಿಳಿಸಿದೆ ಎಂದು ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ಸ್ಪಷ್ಟಣೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X