ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ: ಕರಡು ಮತದಾರರ ಪಟ್ಟಿ ಪ್ರಕಟ
ಉಡುಪಿ, ಜ.19: ಉಡುಪಿ, ಕಾರ್ಕಳ ಹಾಗೂ ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಜ.18ರಂದು ಸಹಾಯಕ ಕಮಿನರ್ ಕಚೇರಿ ಕುಂದಾಪುರ ಅಲ್ಲದೇ ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಬ್ರಹ್ಮಾವರ, ಹೆಬ್ರಿ ತಾಲೂಕು ತಹಶೀಲ್ದಾರರ ಕಛೇರಿ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಕಛೇರಿಯಲ್ಲಿ ಹಾಗೂ ವೆಬ್‌ಸೈಟ್ -Udupi.nic.in-ನಲ್ಲಿ ಪ್ರಕಟಿಸಿದೆ.
ಸಾರ್ವಜನಿಕರು ಆಕ್ಷೇಪಣೆ ಅಥವಾ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ವೀಕೃತವಾದ ಅರ್ಜಿಗಳ ಇತ್ಯರ್ಥವನ್ನು ಫೆ.3ರಿಂದ 6ರವರೆಗೆ ತೀರ್ಮಾನಿಸಿ, ಫೆಬ್ರವರಿ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸ ಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Next Story