Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಸಲ್ಲಿ ಡೀಲ್ಸ್’, ‘ಬುಲ್ಲಿ ಬಾಯ್’...

‘ಸಲ್ಲಿ ಡೀಲ್ಸ್’, ‘ಬುಲ್ಲಿ ಬಾಯ್’ ಪ್ರಕರಣ: ಪ್ರಮುಖ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳಿಂದ ಪ್ರಧಾನಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ19 Jan 2022 11:22 PM IST
share
‘ಸಲ್ಲಿ ಡೀಲ್ಸ್’, ‘ಬುಲ್ಲಿ ಬಾಯ್’ ಪ್ರಕರಣ: ಪ್ರಮುಖ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳಿಂದ ಪ್ರಧಾನಿಗೆ ಪತ್ರ

ಹೊಸದಿಲ್ಲಿ, ಜ. 19: ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅಪರಾಧ ಪ್ರಕರಣಗಳು ಏರಿಕೆಯಾಗುತ್ತಿರುವ ಕುರಿತು ವಿವಿಧ ಪ್ರಮುಖ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ ಹಾಗೂ ಸಂಸದರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.

ಇಂತಹ ಪ್ರಕರಣಗಳನ್ನು ಖಂಡಿಸುವಂತೆ ಹಾಗೂ ಎಲ್ಲ ಮಹಿಳೆಯರ ಹಕ್ಕು ಹಾಗೂ ಗೌರವವನ್ನು ರಕ್ಷಿಸಲು ಕ್ರಮ ಕೈಗೊಳ್ಳುವಂತೆ ಅವರು ನಾಯಕರನ್ನು ಆಗ್ರಹಿಸಿದ್ದಾರೆ.

ಇತ್ತೀಚೆಗಿನ ‘ಸಲ್ಲಿ ಡೀಲ್ಸ್’ ಹಾಗೂ ‘ಬುಲ್ಲಿ ಬಾಯ್’ಯಂತಹ ಘಟನೆಗಳ ಹಿನ್ನೆಲೆಯಲ್ಲಿ ಅವರು ಈ ಪತ್ರ ಬರೆದಿದ್ದಾರೆ.

‘‘ತಮ್ಮ ಮೇಲಾಗುತ್ತಿರುವ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಲು ಧೈರ್ಯ ಮಾಡಿದ ಮಹಿಳೆಯರನ್ನು ಗುರಿಯಾಗಿರಿಸುವ ಸಂಸ್ಕೃತಿಯ ಅಭಿವ್ಯಕ್ತಿಗಳು ಇದು’’ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

   ವಿವಿಧ ಸ್ಥಳಗಳಲ್ಲಿ ಮಹಿಳೆಯರಿಗೆ ಬೆದರಿಕೆ ಹಾಗೂ ಕಿರುಕುಳದ ಘಟನೆಗಳು ಹೆಚ್ಚುತ್ತಿವೆ ಎಂದು ಪತ್ರ ಹೇಳಿದೆ. ಭಾರತದಲ್ಲಿ ಮಹಿಳೆಯರು ಆನ್‌ಲೈನ್ ಹಾಗೂ ಆಫ್‌ಲೈನ್‌ನಲ್ಲಿ ಈ ಹಿಂದಿಗಿಂತ ಈಗ ಹೆಚ್ಚು ಅಸುರಕ್ಷಿತರಾಗಿದ್ದಾರೆ. ದೈಹಿಕ ಹಲ್ಲೆ, ಲೈಂಗಿಕ ಹಿಂಸಾಚಾರದ ಬೆದರಿಕೆ ಹಾಗೂ ಗೌರವ, ಹಕ್ಕುಗಳ ಸಾರಾಸಗಟು ಉಲ್ಲಂಘನೆ ಆನ್‌ಲೈನ್‌ನಲ್ಲಿ ನಡೆಯುತ್ತಿದೆ. ಇದು ರಾಜಕೀಯ ನಾಯಕರಿಗೆ ಗಮನಕ್ಕೆ ಬರದೇ ಇರಲಾರದಷ್ಟು ಸಾಮಾನ್ಯವಾಗಿದೆ ಎಂದು ಪತ್ರ ಹೇಳಿದೆ.

 ಮಹಿಳೆಯ ಅಸುರಕ್ಷೆಯ ಬಗ್ಗೆ ತಮ್ಮ ಮೌನ ಹಾಗೂ ನಿರಾಸಕ್ತಿಯಿಂದ ಹೊರಬರುವಂತೆ ನಾಯಕರನ್ನು ಪತ್ರ ಆಗ್ರಹಿಸಿದೆ. ‘‘ಈ ರೀತಿಯ ಮೌನದ ವಾತಾವರಣ ಅಪರಾಧಿ ಭಯವಿಲ್ಲದೆ ಮತ್ತೆ ಮತ್ತೆ ಇಂತಹ ಅಪರಾಧವನ್ನು ಎಸಗುವಂತೆ ಪ್ರೇರೇಪಿಸುತ್ತದೆ. ಅಲ್ಲದೆ, ದೇಶದಲ್ಲಿ ದ್ವೇಷ ಹಾಗೂ ವಿಭಜನೀಯ ವಾತಾವರಣ ಹೆಚ್ಚುತ್ತಿರುವುದು ಅವರಲ್ಲಿ ಇನ್ನಷ್ಟು ಧೈರ್ಯ ತುಂಬುತ್ತದೆ ಹಾಗೂ ಅವರು ಸ್ತ್ರೀದ್ವೇಷದ ಅಪರಾಧಗಳಿಗೆ ಯಾವುದೇ ಪಶ್ಚಾತ್ತಾಪ ತೋರಿಸುವುದಿಲ್ಲ’’ ಎಂದು ಪತ್ರ ಹೇಳಿದೆ.

 ಐಆರ್‌ಎಂಎಯ ಹಳೆ ವಿದ್ಯಾರ್ಥಿಗಳು ಗುಂಪು ಆರಂಭಿಸಿದ ಈ ಬಹಿರಂಗ ಪತ್ರಕ್ಕೆ ದೇಶಾದ್ಯಂತದ ಶಿಕ್ಷಣ ಸಂಸ್ಥ್ಥೆಗಳ ಸಮಾನ ಮನಸ್ಕ ಹಳೆ ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ.  250ಕ್ಕೂ ಅಧಿಕ ಹಳೆ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ.

ಈ ಪತ್ರವನ್ನು ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್‌ಮೆಂಟ್, ಆನಂದ (ಐಆರ್‌ಎಂಎ)ಯ ಹಳೆ ವಿದ್ಯಾರ್ಥಿಗಳು ಬರೆದಿದ್ದಾರೆ. ಇತರ ಪ್ರಮುಖ ಶಿಕ್ಷಣ ಸಂಸ್ಥೆಗಳಾದ ಲೇಡಿ ಶ್ರೀರಾಮ್ ಕಾಲೇಜು, ಐಐಟಿ ಬಾಂಬೆ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಡಿಸೈನ್ (ಎನ್‌ಐಡಿ), ಎಕ್ಸ್‌ಎಲ್‌ಆರ್‌ಐ, ಮಿರಾಂಡಾ ಹೌಸ್ ಮೊದಲಾದ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಗಳು ಕೈ ಜೋಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X