Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಸುಲ್ತಾನ್ ರನ್ನು ಹಾಡಿ ಹೊಗಳಿ...

ಟಿಪ್ಪು ಸುಲ್ತಾನ್ ರನ್ನು ಹಾಡಿ ಹೊಗಳಿ ದೊಡ್ಡ ಗ್ರಂಥ ರಚಿಸಿದ್ದು ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಸಚಿವ ಸುನೀಲ್ ಕುಮಾರ್ ಗೆ ತಿರುಗೇಟು ನೀಡಿದ ಮಾಜಿ ಸಿಎಂ

ವಾರ್ತಾಭಾರತಿವಾರ್ತಾಭಾರತಿ21 Jan 2022 6:18 PM IST
share
ಟಿಪ್ಪು ಸುಲ್ತಾನ್ ರನ್ನು ಹಾಡಿ ಹೊಗಳಿ ದೊಡ್ಡ ಗ್ರಂಥ ರಚಿಸಿದ್ದು ಬಿಜೆಪಿ ಸರ್ಕಾರ: ಸಿದ್ದರಾಮಯ್ಯ

ಬೆಂಗಳೂರು: ''ನಾನು ಮುಖ್ಯಮಂತ್ರಿಯಾಗಿದ್ದಾಗ 2014ರಲ್ಲಿ ಗಣರಾಜ್ಯೋತ್ಸವದ ಪರೇಡ್ ಗೆ ಟಿಪ್ಪು ಸುಲ್ತಾನ್ ಸ್ತಬ್ಧಚಿತ್ರ ಕಳಿಸಿದ್ದು ನಿಜ. ಆ ಟಿಪ್ಪು ಸ್ತಬ್ಧ ಚಿತ್ರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿದ್ದು ಕೂಡಾ ನಿಜ. ಸುನೀಲ್ ಕುಮಾರ್ ಅವರಂತಹ ಟಿಪ್ಪು ವಿರೋಧಿಗಳು ಯಾಕೆ ಆಗ ಅದನ್ನು ವಿರೋಧಿಸಲಿಲ್ಲ?'' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ಟಿಪ್ಪು ಸುಲ್ತಾನ್ ಅವರನ್ನು ಹಾಡಿ ಹೊಗಳಿ ದೊಡ್ಡ ಗ್ರಂಥವನ್ನೇ ರಚಿಸಿದ್ದು ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ. ಅದನ್ನು ಪ್ರಕಟಿಸಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಬೇರೆಯವರ ಮೇಲೆ ಆರೋಪಿಸಲು ದೊಡ್ಡಬಾಯಿ ಬಿಡುವ ಸುನೀಲ್ ಕುಮಾರ್ ಆಗ ಬಾಯಿ ಮುಚ್ಚಿಟ್ಟುಕೊಂಡಿದ್ದು ಯಾಕೆ?'' ಎಂದು ಪ್ರಶ್ನಿಸಿದ್ದಾರೆ. 

ಬಿಜೆಪಿ ಸರ್ಕಾರವೇ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್ ಕುರಿತ ಗ್ರಂಥ ಈಗಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗ್ರಂಥಾಲಯದಲ್ಲಿದೆ.  ಈ ಗ್ರಂಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈಗ ಸಚಿವರಾಗಿರುವ ಸುನೀಲ್ ಕುಮಾರ್ ಗಮನಕ್ಕೆ ಇನ್ನೂ ಬಂದಿಲ್ಲವೇ? ಯಾಕೆ ಈ ಆತ್ಮವಂಚನೆ? ಎಂದು ಕಿಡಿಗಾರಿದ್ದಾರೆ. 

''2017ರಲ್ಲಿ ಕರ್ನಾಟಕ ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟಿಪ್ಪು ಸುಲ್ತಾನ್ ಅವರನ್ನು ಸ್ವಾತಂತ್ರ್ಯಯೋಧ ಎಂದು ಹಾಡಿ ಹೊಗಳಿದ್ದಾಗ ಸುನೀಲ್ ಕುಮಾರ್ ಮತ್ತು ಬಿಜೆಪಿ ನಾಯಕರು ಎಲ್ಲಿ ಅಡಗಿಕೊಂಡಿದ್ದರು? ನಾರಾಯಣ ಗುರು ಸ್ತಬ್ಧಚಿತ್ರದ ವಿವಾದ ಹುಟ್ಟಿಕೊಂಡ ದಿನದಿಂದ ನರೇಂದ್ರ ಮೋದಿ ಅವರ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸುಳ್ಳುಗಳ ಮೂಟೆ ಉರುಳಿಸುತ್ತಿರುವ ಸುನೀಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಪ್ರಹ್ಲಾದ ಜೋಷಿಯಂತಹವರು ನಾರಾಯಣ ಗುರುಗಳನ್ನು ತಾವು ಒಪ್ಪುವುದಿಲ್ಲ ಎಂಬ ಒಂದು ಸತ್ಯವನ್ನು ಯಾಕೆ ಹೇಳಬಾರದು'' ಎಂದರು.

''ನಾರಾಯಣ ಗುರುಗಳು ನನ್ನ ಸೈದ್ಧಾಂತಿಕ ಗುರುಗಳು. ಆ ಗೌರವದ ಕಾರಣಕ್ಕಾಗಿಯೇ ನಾನು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರವೇ ಅಧಿಕೃತವಾಗಿ ಆಚರಿಸುವ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದೆ. ಇದರಿಂದಾಗಿ ಗುರುಗಳ ಸಂದೇಶ ಮನೆಮನೆಗಳನ್ನು ಮುಟ್ಟುವಂತಾಗಿದೆ'' ಎಂದು ತಿಳಿಸಿದರು.

ಟಿಪ್ಪು ಸುಲ್ತಾನ್ ಮಾತ್ರವಲ್ಲ ಸಮಸಮಾಜಕ್ಕಾಗಿ ಹೋರಾಟ ನಡೆಸಿದ್ದ ಮನುಷ್ಯಪ್ರೇಮಿಗಳೆಲ್ಲರೂ ನನಗೆ ಆದರ್ಶಪ್ರಾಯರು. ಮುಖ್ಯಮಂತ್ರಿಯಾಗಿ ನಾನು ಈ ಮಹಾಪುರುಷರ ಚಿಂತನೆಗೆ ಸರ್ಕಾರದ ಯೋಜನೆಗಳ ರೂಪಕೊಟ್ಟು ಅನುಷ್ಠಾನಗೊಳಿಸಿದ್ದೆ. ನಾನು ಬಿಜೆಪಿ ನಾಯಕರಂತೆ ಆತ್ಮವಂಚಕನಲ್ಲ ಎಂದು ಹೇಳಿದರು.

ಈ ಹಿಂದೆ @BJP4Karnataka ಸರ್ಕಾರವೇ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್ ಕುರಿತ ಗ್ರಂಥ ಈಗಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗ್ರಂಥಾಲಯದಲ್ಲಿದೆ. ಈ ಗ್ರಂಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಈಗ ಸಚಿವರಾಗಿರುವ @karkalasunil ಗಮನಕ್ಕೆ ಇನ್ನೂ ಬಂದಿಲ್ಲವೇ? ಯಾಕೆ ಈ ಆತ್ಮವಂಚನೆ?
4/8#BJPHatesNarayanaguru pic.twitter.com/3oSs0r1AHr

— Siddaramaiah (@siddaramaiah) January 21, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X