Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಹಿಜಾಬ್ ವಿವಾದ; ಪ್ರಾಂಶುಪಾಲರ...

ಉಡುಪಿ ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ಧ ಹೈಕೋರ್ಟ್‌ಗೆ ರಿಟ್ : ನ್ಯಾಯವಾದಿ ಶಿವಣ್ಣ

ಕಾನೂನು ಹೋರಾಟಕ್ಕೆ ಎನ್‌ಎಸ್‌ಯುಐ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ21 Jan 2022 6:56 PM IST
share
ಉಡುಪಿ ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ಧ ಹೈಕೋರ್ಟ್‌ಗೆ ರಿಟ್ : ನ್ಯಾಯವಾದಿ ಶಿವಣ್ಣ

ಉಡುಪಿ, ಜ.21: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸ್ಕಾರ್ಫ್ (ಹಿಜಾಬ್) ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲು ರಾಜ್ಯ ಎನ್‌ಎಸ್‌ಯುಐ ನಿರ್ಧರಿಸಿದ್ದು, ಕಾಲೇಜಿನ ಪ್ರಾಂಶುಪಾಲರ ವಿರುದ್ಧ ರಿಟ್ ಅರ್ಜಿಯನ್ನು ಸಲ್ಲಿಸಲಿದೆ ಎಂದು ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಹೈಕೋರ್ಟ್‌ನ ನ್ಯಾಯವಾದಿ ಶತ್‌ಬಿ ಶಿವಣ್ಣ ತಿಳಿಸಿದ್ದಾರೆ.

ಸ್ಕಾರ್ಫ್ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸದೇ ಎಂಟು ಮಂದಿ ವಿದ್ಯಾರ್ಥಿನಿಯರ ಶೈಕ್ಷಣಿಕ ಬದುಕಿನೊಂದಿಗೆ ಆಟವಾಡುತ್ತಿರುವ ಪ್ರಾಂಶುಪಾಲರ ವಿರುದ್ಧ ಎನ್‌ಎಸ್‌ಯುಐ ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಲಿದೆ ಎಂದವರು ಎಚ್ಚರಿಸಿದರು.

ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಕಾಲೇಜಿನ ಪ್ರಾಂಶುಪಾಲರೊಂದಿಗೆ ಚರ್ಚಿಸಿ ವಿಷಯ ಮನದಟ್ಟು ಮಾಡುವ ಉದ್ದೇಶದಿಂದ ಮೊದಲೇ ಸೂಚನೆ ನೀಡಿ ಬೆಂಗಳೂರಿನಿಂದ ಎನ್‌ಎಸ್‌ಯುಐ ನಿಯೋಗದೊಂದಿಗೆ ತಾವು ಇಂದು ಕಾಲೇಜಿಗೆ ಆಗಮಿಸಿದ್ದು, ಆದರೆ ನಮ್ಮ ಭೇಟಿಯನ್ನು ತಪ್ಪಿಸಲು ಕಾಲೇಜಿಗೆ ರಜೆ ನೀಡಿ ಬೀಗ ಹಾಕಲಾಗಿದೆ. ನಾವೀಗ ಮಣಿಪಾಲಕ್ಕೆ ತೆರಳಿ ಜಿಲ್ಲಾಧಿಕಾರಿ ಯವರಿಗೆ ಮನವಿ ಸಲ್ಲಿಸಲಿದ್ದೇವೆ ಎಂದು ಅವರು ಕಾಲೇಜು ಆವರಣದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಕಳೆದ 3-4ವಾರಗಳಿಂದ ಕಾಲೇಜಿನ 6ರಿಂದ 8 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದುದರಿಂದ ಅವರಿಗೆ ಕಾಲೇಜು ಪ್ರವೇಶವನ್ನು ನಿರಾಕರಿಸಲಾಗಿದೆ. ಕಾಲೇಜು ಪ್ರಾಂಶುಪಾಲರು ಹಾಗೂ ಕಾಲೇಜು ಆಡಳಿತ ಮಂಡಳಿಯ ಈ ಕ್ರಮ ಸಂವಿಧಾನ ಹಾಗೂ ಈಗಿರುವ ಕಾನೂನಿಗೆ ವಿರುದ್ಧವಾದುದು. ದೇಶದ ಸಂವಿಧಾನದ ಪ್ರಕಾರ ಮುಸ್ಲಿಂ ಮಹಿಳೆಯೊಬ್ಬರಿಗೆ ಹಿಜಾಬ್ ಧರಿಸಲು ಸಂಪೂರ್ಣ ಅವಕಾಶವಿದೆ. ಅದೊಂದು ಅವರ ಮೂಲಭೂತ ಹಕ್ಕು ಆಗಿದೆ ಎಂದು ಶಿವಣ್ಣ ವಿವರಿಸಿದರು.

ಮುಸ್ಲಿಂ ಮಹಿಳೆಯ ಈ ಹಕ್ಕನ್ನು ಕಾಪಾಡಲು ನಮ್ಮ ಸಂವಿಧಾನದಡಿ ರಕ್ಷಣೆ ಯನ್ನೂ ನೀಡಲಾಗಿದೆ. ಆದರೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಈ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ನಿಲ್ಲಿಸಿ ತಾರತಮ್ಯ ಧೋರಣೆ ತಳೆದಿದ್ದಾರೆ. ಈ ಮೂಲಕ ಕೇವಲ ಅವರ ಧರ್ಮವನ್ನು ಅನುಸರಿಸುವ ಹಕ್ಕನ್ನು ಮಾತ್ರವಲ್ಲದೇ ಅವರ ಶಿಕ್ಷಣದ ಹಕ್ಕಿಗೂ ಧಕ್ಕೆಯುಂಟು ಮಾಡುತಿದ್ದಾರೆ. ಈಗಾಗಲೇ ಕೊರೋನದಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ತೊಂದರೆಯಾಗಿದೆ. ಇಂಥ ಸಂದರ್ಭದಲ್ಲಿ ಹಿಜಾಬ್ ನೆಪದಲ್ಲಿ ಅವರನ್ನು ತರಗತಿಯಿಂದ ಆಚೆ ನಿಲ್ಲಿಸುವುದು ಎಷ್ಟರ ಮಟ್ಟಿಗೆ ಸರಿ ಎಂದವರು ಪ್ರಶ್ನಿಸಿದರು.

ಕಾಲೇಜು ಆಡಳಿತ ಮಂಡಳಿಯ ಕ್ರಮದ ಕುರಿತಂತೆ ಎನ್‌ಎಸ್‌ಯುಐ ಉಗ್ರ ಹೋರಾಟ ನಡೆಸಲಿದೆ. ಕಾನೂನು ರೀತಿಯಲ್ಲಿ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಕಾನೂನು ಕ್ರಮದ ಜೊತೆ ಜೊತೆಗೆ ಬೀದಿಗಿಳಿದು ಹೋರಾಟ ನಡೆಸುವುದಕ್ಕೂ ನಾವು ಸಿದ್ಧರಿದ್ದೇವೆ ಎಂದರು.

ಇಂಥ ಹಲವು ಪ್ರಕರಣಗಳು ಸುಪ್ರೀಂ ಕೋರ್ಟ್, ಕೇರಳ ಹೈಕೋರ್ಟ್ ಹಾಗೂ ಇತರ ಹೈಕೋರ್ಟ್‌ಗಳ ಮುಂದೆ ಬಂದಿದ್ದು, ಈ ಬಗ್ಗೆ ಆದೇಶವಾಗಿದೆ. ಹಿಜಾಬ್ ಧರಿಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ದೇಶದಲ್ಲಿ ಕಾನೂನಿದೆ. ಯಾರೂ ಇದನ್ನು ತಡೆಯಲು ಸಾಧ್ಯವಿಲ್ಲ. ನಾವು ಸಹ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಾರವೇ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸುತ್ತೇವೆ. ಈಗ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ ಎಂದು ಶತ್‌ಬಿ ಶಿವಣ್ಣ ನುಡಿದರು.

ಎನ್‌ಎಸ್‌ಯುಐನ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಾಬೀ ಮಾತನಾಡಿ, ಕಾಲೇಜಿನ ಪ್ರಾಂಶುಪಾಲರೇ ಶೈಕ್ಷಣಿಕ ಸಂಸ್ಥೆಯಲ್ಲಿ ವಿದ್ಯಾರ್ಥಿನಿಯರ ನಡುವೆ ಜಾತಿ, ಧರ್ಮದ ವಿಷಬೀಜ ಬಿತ್ತಿ ಕರಾವಳಿಯಲ್ಲಿ ಕೋಮು ಸಾಮರಸ್ಯಕ್ಕೆ ಚ್ಯುತಿ ತರುವ ಕೆಲಸ ಮಾಡುತಿದ್ದಾರೆ. ವಿದ್ಯಾದೇಗುಲದಲ್ಲಿ ಕೋಮುಭಾವನೆ ಕೆರಳಿಸುವ ಪ್ರಾಂಶುಪಾಲರು ಹಾಗೂ ಈ ಕೃತ್ಯದ ಹಿಂದಿರುವ ಕಾಣದ ಕೈಗಳ ವಿರುದ್ಧ ನಮ್ಮ ಹೋರಾಟ ನೆಯಲಿದೆ ಎಂದರು.

''ರಾಜ್ಯ ಸರಕಾರಕ್ಕೆ ಕಣ್ಣು ಕಾಣುತ್ತಿಲ್ಲವೆ ? ಹಿಜಾಬ್ ವಿವಾದವನ್ನು ವಾರಗಳಿಂದ ಬಗೆಹರಿಸದೇ ರಾಜಕೀಯ ಮಾಡಲಾಗುತ್ತಿದೆ. ವಿದ್ಯಾರ್ಥಿನಿಯರ ಪೋಷಕರಿಗೆ ಒತ್ತಡ ಹಾಕುವುದು, ಬೆದರಿಕೆವೊಡ್ಡುವುದು, ವ್ಯಾಪಾರ ಸ್ಥಳದಲ್ಲಿ ಸಮಸ್ಯೆ ಸೃಷ್ಟಿಸುವ ಕೆಲಸವಾಗುತ್ತಿದೆ. ಒಂದು ಕೋಮಿನ ವಿರುದ್ಧ ತಾರತಮ್ಯ ಧೋರಣೆ ತಳೆಯಲಾಗುತ್ತಿದೆ. ರಾಜಕೀಯ ಶಕ್ತಿಗಳು ಪ್ರಾಂಶುಪಾಲರ ಹಿಂದಿನಿಂದ ತಮ್ಮ ಬೆಳೆಬೇಯಿಸಿಕೊಳ್ಳುವ ಹುನ್ನಾರ ನಡೆಸುತ್ತಿವೆ''.
-ಸುಹಾನ್ ಆಳ್ವ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌ಎಸ್‌ಯುಐ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X