Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾರಾಯಣಗುರುಗಳ ವಿವಾದ ಕೆಣಕಿದರೆ ನಾವು...

ನಾರಾಯಣಗುರುಗಳ ವಿವಾದ ಕೆಣಕಿದರೆ ನಾವು ಬಿಡುವುದಿಲ್ಲ: ಹರಿಕೃಷ್ಣ ಬಂಟ್ವಾಳ್

ವಾರ್ತಾಭಾರತಿವಾರ್ತಾಭಾರತಿ22 Jan 2022 2:22 PM IST
share
ನಾರಾಯಣಗುರುಗಳ ವಿವಾದ ಕೆಣಕಿದರೆ ನಾವು ಬಿಡುವುದಿಲ್ಲ: ಹರಿಕೃಷ್ಣ ಬಂಟ್ವಾಳ್

ಮಂಗಳೂರು, ಜ.22: ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಕೇಂದ್ರ ಸರಕಾರ ಅವಕಾಶ ನೀಡಿಲ್ಲ ಎಂಬ ವಿವಾದ ಸೃಷ್ಟಿ ಕಮುನಿಷ್ಟ್ ಹಾಗೂ ಕಾಂಗ್ರೆಸ್ ಪಕ್ಷದ ಕುತಂತ್ರವಾಗಿದ್ದು, ವಿವಾದವನ್ನು ಕೆಣಕಿದರೆ ನಾವು ಬಿಡುವುದಿಲ್ಲ ಎಂದು ಬಿಜೆಪಿ ನಾಯಕ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.

ನಗರದ ಅಟಲ್ ಸೇವಾ ಕೇಂದ್ರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ವಿವಾದ ಸೃಷ್ಟಿಯಿಂದ ಹಲವರ ಮುಖವಾಡ ಬಯಲಾಗಿದೆ. ಈ ವಿವಾದ ಸೃಷ್ಟಿಯಾಗಿದ್ದು, ನಾರಾಯಣಗುರಗಳ ಕೇಂದ್ರ ಸ್ಥಳ ಶಿವಗಿರಿಯಿಂದ ಅಲ್ಲ ಬದಲವಾಗಿ ಕುತಂತ್ರಿ ಕಮ್ಯುನಿಸ್ಟರ ಗರ್ಭಗುಡಿಯಿಂದ ಹಾಗೂ ಅತಂತ್ರ, ಪರತಂತ್ರ ಕಾಂಗ್ರೆಸ್‌ನ ಷಡ್ಯಂತ್ರದಿಂದ ಎಂದು ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಪಕ್ಷಕ್ಕೆ ಧಮ್ ಇದ್ದಲ್ಲಿ ಕೇಂದ್ರ ಸರಕಾರ ನಾರಾಯಣ ಗುರುಗಳ ಸ್ತಬ್ಧ ಚಿತ್ರದ ಬದಲಿಗೆ ಶಂಕಾರಾಚಾರ್ಯರ ಸ್ತಬ್ಧಚಿತ್ರವನ್ನು ಮಾಡುವಂತೆ ಹೇಳಿದ್ದರ ಲಿಖಿತ ಪ್ರತಿಯನ್ನು ತೋರಿಸಬೇಕು ಎಂದು ಅವರು ಸವಾಲು ಹಾಕಿದರು.

ಕೇರಳದಲ್ಲಿ ಓಟಿಗಾಗಿ ಕಮ್ಯುನಿಷ್ಟರು ಎಬ್ಬಿಸಿರುವ ವಿವಾದ ಇದಾಗಿದ್ದು, ನಾರಾಯಣಗುರುಗಳ ಮೇಲಿನ ಭಕ್ತಿ, ಗೌರವ ಅಥವಾ ಅವರ ವಿಚಾರವನ್ನು ಜಗತ್ತಿಗೆ ತೋರಿಸಬೇಕೆಂಬ ಕಾಳಜಿಯಿಂದ ಅಲ್ಲ. ಈ ಬಗ್ಗೆ ಕೇರಳದ ಕಾಂಗ್ರೆಸ್ ನಾಯಕರಾರೂ ಚಕಾರ ಎತ್ತಿಲ್ಲ ಎಂದರು.

2016ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ಧರಾಮಯ್ಯನವರು ಮಂಗಳೂರಿಗೆ ಭೇಟಿ ನೀಡಿದಾಗ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ನವೀಕರಣದ ರುವಾರಿ ಜನಾರ್ದನ ಪೂಜಾರಿಯವರು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದರು. ಆದರೆ ಅಂದು ಸಿದ್ಧರಾಮಯ್ಯನವರು ಐವನ್ ಡಿಸೋಜಾರ ಮನೆಯಲ್ಲಿ ಹಂದಿ ಮಾಂಸ ತಿಂದು, ಕೆಂಪು ನೀರು ಕುಡಿದು ವಾಪಾಸು ಹೋಗಿದ್ದರು. ಆ ಸಂದರ್ಭ ಜನಾರ್ದನ ಪೂಜಾರಿಯವರು ಸಿದ್ಧರಾಮಯ್ಯಗೆ ನಾರಾಯಣ ಗುರುಗಳು ಬುದ್ಧಿಕಲಿಸುತ್ತಾರೆ ಎಂದಿದ್ದರು. ಅಂದು ಸಿದ್ಧರಾಮಯ್ಯ ಕುದ್ರೋಳಿ ಕ್ಷೇತ್ರಕ್ಕೆ ಮಾಡಿದ್ದು ಅವಮಾನವಲ್ಲವೇ? ಅವರ ಮಾಧ್ಯಮದ ಪ್ರಮುಖರಾಗಿದ್ದ ದಿನೇಶ್ ಅಮೀನ್ ಮಟ್ಟು ಅವರು ಇಲ್ಲಿ ಕಾರ್ಯಕ್ರಮವೊಂದರಲ್ಲಿ ಕುದ್ರೋಳಿ ಕ್ಷೇತ್ರವನ್ನು ಜನಾರ್ದನ ಪೂಜಾರಿಯವರು ನಾರಾಯಣ ಗುರುಗಳಿಗೆ ಕಟ್ಟಿದ ಗೋರಿ ಎಂದು ಹೇಳಿದ್ದರು. ಲೇಡಿಹಿಲ್ ವೃತ್ತಕ್ಕೆ ನಾರಾಯಣಗುರುಗಳ ಹೆಸರನ್ನು ಮನಪಾ ಸಭೆಯಲ್ಲಿ ನಿರ್ಣಯಿಸಿದಾಗ ಕಾಂಗ್ರೆಸ್‌ನ ನಾಯಕರು ಆಕ್ಷೇಪಿಸಿದ್ದರು. ಆವಾಗ ನಾರಾಯಣ ಗುರುಗಳಿಗೆ ಅವಮಾನ ಆಗಿಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಪ್ರತಿದಿನ ನಾರಾಯಣಗುರುಗಳ ಸ್ತ್ರೋತ್ರವನ್ನು ಸ್ಮರಿಸುತ್ತಾರೆ. ಅವರು ನಾರಾಯಣಗುರುಗಳ ಬಗ್ಗೆ ಅಧ್ಯಯನ ಮಾಡಿದಷ್ಟು ಕಾಂಗ್ರೆಸ್‌ನ ಯಾರೊಬ್ಬರೂ ಮಾಡಿಲ್ಲ. ಸೋನಿಯಾಗಾಂಧಿ, ರಾಹುಲ್ ಗಾಂಧಿ, ಡಿಕೆಶಿಯವರು ಸ್ಮರಿಸುತ್ತಾರೆಯೇ? ಸಂಸದ ನಳಿನ್, ನನ್ನ ಮನೆ ಸೇರಿದಂತೆ ಬಿಜೆಪಿಯ ಅನೇಕ ನಾಯಕರ ಮನೆಯಲ್ಲಿ ನಾರಾಯಣಗಳ ಫೋಟೋವನ್ನಿಟ್ಟು ಆರಾಧಿಸಲಾಗುತ್ತದೆ ಎಂದು ಹರಿಕೃಷ್ಣ ಬಂಟ್ವಾಳ್ ಕಾಂಗ್ರೆಸ್ ಹಾಗೂ ಕಮ್ಯುನಿಷ್ಟ್ ಪಕ್ಷದ ವಿರುದ್ಧ ಆರೋಪಗಳ ಸುರಿಮಳೆಗೈದರು.

ಜನಾರ್ದನ ಪೂಜಾರಿಯವರ ನಾರಾಯಣಗುರುಗಳ ಸ್ತಬ್ಧಚಿತ್ರ ಮೆರವಣಿಗೆಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ. ಆದರೆ ಮೆರವಣಿಗೆಯಲ್ಲಿ ನಾರಾಯಣ ಗುರುಗಳ ಬಾವುಟ ಹಾರಾಡಬೇಕು. ಪೂಜಾರಿಯವರು 40 ವರ್ಷ ರಾಜಕೀಯದಲ್ಲಿದ್ದವರು. ಆಗಿನಿಂದಲೂ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಪೆರೇಡ್‌ಗೆ ಕೊಂಡು ಹೋಗಲು ಆಗಿಲ್ಲ. ಹಾಗಾಗಿ ಇದೀಗ ಯಾರೋ ಕುಮ್ಮಕ್ಕು ನೀಡಿ ಅವರನ್ನು ಈ ಮೆರವಣಿಗೆಗೆ ಪ್ರೇರೇಪಿಸಿದ್ದಾರೆ. ಕಾಂಗ್ರೆಸ್‌ನ ಅಸ್ತಿತ್ವ ಮುಗಿಯುತ್ತಾ ಬಂದಿರುವ ಕಾರಣ ಇದೀಗ ನಾರಾಯಣಗುರುಗಳನ್ನು ಮುಂದಿಟ್ಟು ರಾಜಕೀಯ ಮಾಡಿ ಮತ ಗಿಟ್ಟಿಸುವ ಯತ್ನವನ್ನು ಮಾಡುತ್ತಿದೆ. ಆದರೆ ಆ ಕಾರ್ಯಕ್ಕೆ ನಾರಾಯಣ ಗುರುಗಳೇ ಬೆಂಕಿ ಹಾಕುತ್ತಾರೆ. ಹಿಂದೆ ಲಿಂಗಾಯಿತ ಸಮುದಾಯ ಒಡೆಯಲು ಹೋದಾಗ ಅದೇ ಪರಿಸ್ಥಿತಿ ಆಗಿದೆ. ಇದೀಗ ನಾರಾಯಣ ಗುರುಗಳೇ ಕಾಂಗ್ರೆಸನ್ನು ಸುಡಲಿದ್ದಾರೆ ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರವಿಶಂಕರ ಮಿಜಾರು, ಜಗದೀಶ ಶೇಣವ, ರಾಧಾಕೃಷ್ಣ, ವಿಜಯ ಕುಮಾರ್ ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿ ಜತೆ ಈಗಾಗಲೇ ಮಾತುಕತೆ ನಡೆದಿದ್ದು, 2023ರ ದೇಶದ ಗಣರಾಜ್ಯೋತ್ಸವ ಪೆರೇಡ್‌ಗೆ ರಾಜ್ಯದಿಂದ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಕಳುಹಿಸುವ ನಿರ್ಣಯಕ್ಕೆ ಬಂದಿದ್ದಾರೆ. ಇಂದೇ ಹೋಗಿ ಪೆರೇಡ್‌ನಲ್ಲಿ ಅವಕಾಶ ನೀಡಬೇಕೆಂದರೆ ಅದು ದಸರಾ ಕಾರ್ಯಕ್ರಮ ಅಲ್ಲ ಎಂದು ಹರಿಕೃಷ್ಣ ಬಂಟ್ವಾಳ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X