ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಎಸ್ಡಿಎಂ ವಿದ್ಯಾರ್ಥಿನಿ ಆಯ್ಕೆ

ಉಡುಪಿ, ಜ.22: ಜನವರಿ 26ರಂದು ಬೆಂಗಳೂರಿನ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉದ್ಯಾವರ ಕುತ್ಪಾಡಿ ಎಸ್.ಡಿ.ಎಮ್. ಆಯುರ್ವೇದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿ ಅನನ್ಯ ಎನ್. ಶೆಟ್ಟಿ ಆಯ್ಕೆಯಾಗಿದ್ದಾರೆ.
ಪಥಸಂಚಲನದ ತರಬೇತಿ ಶಿಬಿರ ಬೆಂಗಳೂರಿನ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದ್ದು, ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಅನನ್ಯ ಎನ್. ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Next Story