Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.25ರಂದು ಖಮರಿಯಾ ವಿಮೆನ್ಸ್ ಅಕಾಡಮಿಯಿಂದ...

ಜ.25ರಂದು ಖಮರಿಯಾ ವಿಮೆನ್ಸ್ ಅಕಾಡಮಿಯಿಂದ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Jan 2022 9:51 AM IST
share
ಜ.25ರಂದು ಖಮರಿಯಾ ವಿಮೆನ್ಸ್ ಅಕಾಡಮಿಯಿಂದ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ

ಮಂಗಳೂರು : ಡಾ. ಎಂಎಸ್ಎಂ ಝೈನೀ ಕಾಮಿಲ್ ಸಾರಥ್ಯದ 'ವಿಮೆನ್ಸ್ ಇಸ್ಲಾಮಿಕ್ ಎಜುಕೇಶನ್ ಕೌನ್ಸಿಲ್‌'ನ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ 'ಖಮರಿಯಾ ವಿಮೆನ್ಸ್ ಅಕಾಡಮಿ' ವತಿಯಿಂದ ಒಂದೂವರೆ ವರ್ಷಗಳ ಆನ್ಲೈನ್ ಶರೀಅತ್ ಕೋರ್ಸ್‌ ಮುಗಿಸಿದ 47 ಮಹಿಳೆಯರಿಗೆ 'ಅಲ್ ಖಮರಿಯಾ' ಹಾಗೂ ಶರೀಅತ್ ಪದವೀಧರ ಮಹಿಳೆಯರಿಗಾಗಿ ಏರ್ಪಡಿಸಿದ ಎರಡು ತಿಂಗಳ ಡಿಸ್ಟೆನ್ಸ್ ತಜ್‌ವೀದ್ ಟ್ರೈನರ್ಸ್ ಕೋರ್ಸ್‌‌ ಮುಗಿಸಿದ 36 ಮಹಿಳೆಯರಿಗೆ  'ಅಲ್ ಮುಜವ್ವಿದ' ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮವು ಮಾಣಿ- ನೇರಳಕಟ್ಟೆಯ ಇಂಡಿಯನ್ ಆಡಿಟೋರಿಯಂನಲ್ಲಿ‌ ಜ.25ರಂದು ಬೆಳಗ್ಗೆ ನಡೆಯಲಿದೆ.

2020 ಆಗಸ್ಟ್‌ ನಲ್ಲಿ ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದ್ ಉದ್ಘಾಟಿಸಿದ 'ಖಮರಿಯಾ' ಹದಿನೆಂಟು ತಿಂಗಳ ಕೋರ್ಸ್‌ ಆಗಿದ್ದು ಇದರಲ್ಲಿ ಖುರ್‌ಆನ್, ಹದೀಸ್, ಫಿಖ್‌ಹ್, ಅಖಾಇದ್, ತಸವ್ವುಫ್ ಹಾಗೂ ಕುಟುಂಬ ಜೀವನ, ಪೇರೆಂಟಿಂಗ್, ಸೈಕಾಲಜಿ, ಇತಿಹಾಸ ಮುಂತಾದ ಸಮಗ್ರ ಪಠ್ಯ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. 

ಈ ವಿದ್ಯಾ ಕೇಂದ್ರಕ್ಕೆ ಪ್ರಿನ್ಸಿಪಾಲ್ ಸ‌ಈದಾ ಫಾತಿಮಾ ಅಲ್ ಮಾಹಿರಾ ನೇತೃತ್ವ ನೀಡುತ್ತಿದ್ದಾರೆ.

ಸಾಮಾನ್ಯ ಮಹಿಳೆಯರ ಖುರ್‌ಆನ್ ಪಾರಾಯಣವನ್ನು ಕ್ರಮಬದ್ಧಗೊಳಿಸುವುದಕ್ಕಾಗಿ ಸಮರ್ಥ ಟ್ರೈನರ್‌ಗಳನ್ನು ಸೃಷ್ಟಿಸಲು ಆರಂಭಿಸಿದ 'ಅಲ್ ಮುಜವ್ವಿದಾತ್ ತಜ್‌ವೀದ್ ಟ್ರೈನರ್ಸ್ ಕೋರ್ಸ್‌'ನ ಮೂಲಕ ಈಗಾಗಲೇ 23 ಮಹಿಳಾ  ತರಬೇತುದಾರರು ಯಶಸ್ವಿಯಾಗಿದ್ದಾರೆ. ಪ್ರಸಿದ್ಧ ಖುರ್‌ಆನ್ ತರಬೇತುದಾರ ಖಾರಿ ಅಬ್ದುಲ್‌ ಜಲೀಲ್ ಇಂದಾದಿ ಕಣ್ಣೂರು ಅವರು ಸಂಸ್ಥೆಯ ಪ್ರಿನ್ಸಿಪಾಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪದವಿ ಪ್ರದಾನ ಕಾರ್ಯಕ್ರಮಗಳಿಗೆ ಝೈನುಲ್ ಉಲಮಾ ಮಾಣಿ ಉಸ್ತಾದ್ ಹಾಗೂ ಉಜಿರೆ ಇಸ್ಮಾಯಿಲ್ ತಂಙಳ್ ನೇತೃತ್ವ ನೀಡಲಿದ್ದಾರೆ.

ನಂತರ ನಡೆಯುವ ಮಹಿಳಾ ಸಮಾವೇಶದಲ್ಲಿ ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಕೆಮಿಸ್ಟ್ರಿಯಲ್ಲಿ ಡಾಕ್ಟರೇಟ್ ಪದವಿ ಪಡೆದ, ವಿಮೆನ್ಸ್ ಇಸ್ಲಾಮಿಕ್ ಎಜುಕೇಶನ್ ಕೌನ್ಸಿಲ್‌ನ ಸಹ ಸಂಸ್ಥೆಯಾದ 'ಬುಕ್ ಮಿಷನ್'ನ ನಿರ್ದೇಶಕಿ, ಉಜಿರೆ ಎಸ್. ಡಿ.ಎಂ‌. ಕಾಲೇಜಿನ ಕೆಮಿಸ್ಟ್ರಿ ‌ಪಿಜಿ ವಿಭಾಗದ ಪ್ರೊ., ಡಾ. ನಫೀಸತ್ ಪಿ.ಚಾರ್ಮಾಡಿ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಮಂಗಳೂರಿನ 'ಮೋಟಿವಿಟಲ್ಸ್'ನ ಆಡಳಿತ ನಿರ್ದೇಶಕಿ ನಸ್ರೀನ್ ಬಿನ್ತ್ ಅಹ್ಮದ್ ಬಾವ ಸನ್ಮಾನಿಸಲಿದ್ದು ಕಾಟಿಪಳ್ಳ ಮಿಸ್ಬಾಹ್ ಕಾಲೇಜಿನ ಪ್ರಿನ್ಸಿಪಾಲ್ ಝಾಹಿದಾ ಜಲೀಲ್ ಅಭಿನಂದನಾ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮವು‌ ಖಾಸಗಿಯಾಗಿದ್ದು ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X