ಉಡುಪಿಗೆ ಎಸ್.ಅಂಗಾರ ಉಸ್ತುವಾರಿ ಸಚಿವ
ಎಸ್. ಅಂಗಾರ
ಉಡುಪಿ, ಜ.24: ರಾಜ್ಯ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಜಿಲ್ಲಾ ಕೋವಿಡ್ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಿಸಿ ಆದೇಶ ಹೊರಡಿಸಿದ್ದು, ಇದರಂತೆ ದಕ್ಷಿಣ ಕನ್ನಡಕ್ಕೆ ಸಚಿವ ವಿ.ಸುನೀಲ್ ಕುಮಾರ್ ಉಸ್ತುವಾರಿ ಸಚಿವರಾಗಿರುವರು. ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉತ್ತರ ಕನ್ನಡದ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ.
Next Story