Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೆಣ್ಣುಮಕ್ಕಳಿಗೆ ಸುರಕ್ಷಿತ ವಾತಾವರಣ...

ಹೆಣ್ಣುಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಾಣಗೊಳ್ಳಬೇಕು: ನ್ಯಾ. ಶರ್ಮಿಳಾ

ವಾರ್ತಾಭಾರತಿವಾರ್ತಾಭಾರತಿ24 Jan 2022 8:45 PM IST
share
ಹೆಣ್ಣುಮಕ್ಕಳಿಗೆ ಸುರಕ್ಷಿತ ವಾತಾವರಣ ನಿರ್ಮಾಣಗೊಳ್ಳಬೇಕು: ನ್ಯಾ. ಶರ್ಮಿಳಾ

ಉಡುಪಿ, ಜ.24: ಹೆಣ್ಣು ಮಕ್ಕಳ ಬೆಳವಣಿಗೆಗೆ ಸುರಕ್ಷಿತ ವಾತಾವರಣ ನಿರ್ಮಿಸುವುದರ ಮೂಲಕ ಸಮಾಜದಲ್ಲಿರುವ ಲಿಂಗ ತಾರತಮ್ಯ ಸಮಸ್ಯೆಯನ್ನು ಸರಿಪಡಿಸಲು ಸಾಧ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾಯದರ್ಶಿ ಶರ್ಮಿಳಾ ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ ನಗರದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಚೈಲ್ಡ್‌ಲೈನ್-1098 ಉಡುಪಿ ಮತ್ತು ಶ್ರೀಕೃಷ್ಣ ರೋಟರ್ಯಾಕ್ಟ್ ಕ್ಲಬ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪ್ರತೀ ಹೆಣ್ಣು ಕೂಡಾ ಸಾಧಕಿ. ಪ್ರಸ್ತುತ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರದಲ್ಲೂ ಗಮನಾರ್ಹ ಸಾಧನೆ ಮಾಡಿದ್ದಾರೆ. ಆರೋಗ್ಯ, ಪೋಷಣೆ, ಶಿಕ್ಷಣದಲ್ಲಿ ಹೆಣ್ಣು ಮಕ್ಕಳಿಗೂ ಸಮಾನ ಅವಕಾಶ ನೀಡಬೇಕು ಹಾಗೂ ಅವರ ಸುರಕ್ಷತೆ ಬಗ್ಗೆ ಸಮಾಜದಲ್ಲಿ ಗರಿಷ್ಠ ಜಾಗೃತಿ ಮೂಡಿಸಬೇಕು ಎಂದು ಅವರು ಕರೆ ನೀಡಿದರು.

ಹೆಣ್ಣು ಮಕ್ಕಳು ತಮಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಬೇಕು. ಮಹಿಳಾ ಸಾಧಕಿಯರ ಬಗ್ಗೆ ತಿಳಿದು ಅವರಿಂದ ಪ್ರೇರೇಪಣೆ ಪಡೆಯಬೇಕು. ಕಾನೂನಿನಲ್ಲಿ ತಮಗೆ ನೀಡಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶರ್ಮಿಳಾ ಹೆಣು್ಣ ಮಕ್ಕಳಿಗೆ ಕಿವಿಮಾತು ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಮಾತನಾಡಿ, ಹೆಣ್ಣು ಮಕ್ಕಳು ತಮ್ಮ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿಮಗಾಗಿಯೇ ಜಾರಿಗೊಳಿಸುವ ಹಲವಾರು ಯೋಜನೆಗಳ ಬಗ್ಗೆ ಅರಿತು ಅವುಗಳ ಪ್ರಯೋಜನ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಹೆಣ್ಣುಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಶೋಭಾ ಶೆಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಹೇಶ್, ಉಡುಪಿ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಜಯಲಕ್ಷ್ಮಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ 1098ರ ಪ್ರಯೋಜನಗಳ ಕುರಿತು ಮಾಹಿತಿಗಳನ್ನು ನೀಡಲಾಯಿತು. ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ವಿಶೇಷ ಉಪನ್ಯಾಸ ನೀಡಿದರು. ಉಡುಪಿ ಚೈಲ್ಡ್‌ಲೈನ್-1098ರ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಸ್ವಾಗತಿಸಿದರು. ಜ್ಯೋತಿ ಕಾರ್ಯಕ್ರಮ ನಿರೂಪಿಸಿ ರೋಟರ್ಯಾಕ್ಟ್ ಕ್ಲಬ್‌ನ ಕಾರ್ಯದರ್ಶಿ ತನ್ವಿ ವಿಶಿಷ್ಠ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X