ಜ.26: ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ನಿಂದ ರಕ್ತದಾನ ಶಿಬಿರ
ಮಂಗಳೂರು, ಜ.24: ಯುವ ಜನರಲ್ಲಿ ರಾಷ್ಟ್ರಪ್ರೇಮ ಹಾಗೂ ಸಾಮಾಜಿಕ ಕಳಕಳಿಯ ಜಾಗೃತಿ ಮೂಡಿಸುವ ಉದ್ದೇಶದಿಂದ ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಂದು ದ.ಕ. ಯುವ ಕಾಂಗ್ರೆಸ್ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಸಹಯೋಗದೊಂದಿಗೆ ಜಿಲ್ಲೆಯ ವಿವಿಧ 16 ಸ್ಥಳಗಳಲ್ಲಿ ’ದೇಶಕ್ಕಾಗಿ ಸಂವಿಧಾನ ಜೀವಕ್ಕಾಗಿ ರಕ್ತ’ ಧ್ಯೇಯದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ, ಫಳ್ನೀರ್, ಬಜಾಲ್, ದೇರಳಕಟ್ಟೆ, ಮುಡಿಪು, ಉಳ್ಳಾಲ, ಬಿಸಿ ರೋಡ್ ಕೈಕಂಬ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಬೆಳ್ತಂಗಡಿಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





