Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈರತ್ವದ ನಡುವೆಯೇ 2021ರಲ್ಲಿ ಚೀನಾದಿಂದ...

ವೈರತ್ವದ ನಡುವೆಯೇ 2021ರಲ್ಲಿ ಚೀನಾದಿಂದ 100 ಬಿಲಿಯನ್ ಡಾಲರ್ ಮೌಲ್ಯದ ಉತ್ಪನ್ನಗಳ ದಾಖಲೆ ಆಮದು ಮಾಡಿದ ಭಾರತ; ವರದಿ

ವಾರ್ತಾಭಾರತಿವಾರ್ತಾಭಾರತಿ25 Jan 2022 2:21 PM IST
share
ವೈರತ್ವದ ನಡುವೆಯೇ 2021ರಲ್ಲಿ ಚೀನಾದಿಂದ 100 ಬಿಲಿಯನ್ ಡಾಲರ್ ಮೌಲ್ಯದ ಉತ್ಪನ್ನಗಳ ದಾಖಲೆ ಆಮದು ಮಾಡಿದ ಭಾರತ; ವರದಿ

ಹೊಸದಿಲ್ಲಿ: ಲಡಾಖ್‍ನಲ್ಲಿ ವಾಸ್ತವಿಕ ಗಡಿ ನಿಯಂತ್ರಣ ರೇಖೆ ಬಳಿ ಕಳೆದ ವರ್ಷ ಉಂಟಾದ ಉದ್ವಿಗ್ನತೆಯ ವಾತಾವರಣದ ನಂತರ ಭಾರತ ಸರಕಾರ ಹಲವಾರು ಚೀನೀ ಆ್ಯಪ್‍ಗಳಿಗೆ ನಿಷೇಧ ಹೇರಿದೆ. ಆದರೆ ಚೀನಾದಿಂದ ಆಮದು ಮಾಡುವ ವಸ್ತುಗಳ ಮೇಲೆ ಯಾವುದೇ ನಿಯಂತ್ರಣ ಹೇರುವ ಗೋಜಿಗೆ ಹೋಗಿಲ್ಲ. ಕಳೆದ ವರ್ಷ ಚೀನಾದಿಂದ ಸುಮಾರು 100 ಬಿಲಿಯನ್ ಡಾಲರ್ ಮೌಲ್ಯದ ಉತ್ಪನ್ನಗಳನ್ನು ಭಾರತ ಆಮದು ಮಾಡಿದ್ದು ಇದೊಂದು ದಾಖಲೆಯಾಗಿದೆ. ಹೀಗೆ ಆಮದು ಮಾಡಲಾದ ವಸ್ತುಗಳಲ್ಲಿ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ ಉತ್ಪನ್ನಗಳು, ಪ್ರಮುಖವಾಗಿ ಸ್ಮಾರ್ಟ್ ಫೋನ್‍ಗಳು, ಯಂತ್ರಗಳು, ರಸಗೊಬ್ಬರ, ರಾಸಾಯನಿಕ ಹಾಗೂ ಔಷಧಿ ತಯಾರಿಕಾ ವಸ್ತುಗಳು ಸೇರಿವೆ ಎಂದು theprint.in ವರದಿ ಮಾಡಿದೆ.

ಚೀನಾದ ಜನರಲ್ ಅಡ್ಮಿನಿಸ್ಟ್ರೇಶನ್ ಆಫ್ ಕಸ್ಟಮ್ಸ್  ಅಂಕಿಅಂಶಗಳ ಪ್ರಕಾರ ಚೀನಾ 2021ರಲ್ಲಿ ಭಾರತಕ್ಕೆ 97.52 ಬಿಲಿಯನ್ ಡಾಲರ್ ಮೌಲ್ಯದ ಉತ್ಪನ್ನಗಳನ್ನು ರಫ್ತುಗೊಳಿಸಿದ್ದರೆ, ಉಭಯ ದೇಶಗಳ ದ್ವಿಪಕ್ಷೀಯ ವ್ಯಾಪಾರ 125.66 ಬಿಲಿಯನ್ ಡಾಲರ್ ಆಗಿದೆ.

ಭಾರತಕ್ಕೆ ರಫ್ತುಗೊಳಿಸಲಾಗಿರುವ ಉತ್ಪನ್ನಗಳಲ್ಲಿ ಗರಿಷ್ಠ ಉತ್ಪನ್ನಗಳು ಇಲೆಕ್ಟ್ರಿಕ್ ಮತ್ತು ಇಲೆಕ್ಟ್ರಾನಿಕ್ ಉತ್ಪನ್ನಗಳು, ಸ್ಮಾರ್ಟ್‍ಫೋನ್‍ಗಳು, ಟೆಲಿಕಾಂ ಉತ್ಪನ್ನಗಳು, ಆಟೋ ಬಿಡಿಭಾಗಗಳು, ಸೇರಿವೆ.

ಭಾರತದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಮಾಹಿತಿ ಪ್ರಕಾರ 2021ರ ಮೊದಲ ಎಂಟು ತಿಂಗಳುಗಳಲ್ಲಿ ಚೀನಾದಿಂದ ಆಮದು ಮಾಡಲಾದ ಉತ್ಪನ್ನಗಳಲ್ಲಿ ಕಚ್ಛಾ ಪೆಟ್ರೋಲಿಯಂ, ಪೆಟ್ರೋಲಿಯಂ ಉತ್ಪನ್ನಗಳು,  ಮುತ್ತುಗಳು, ಬೆಲೆಬಾಳುವ ಹರಳುಗಳು, ಕಲ್ಲಿದ್ದಲು, ಸೇರಿವೆ. ಇವುಗಳ ಒಟ್ಟು ಮೊತ್ತ 60 ಬಿಲಿಯನ್ ಡಾಲರ್ ಆಗಿದೆ.

ಎರಡು ದೇಶಗಳ ನಡುವೆ ಉದ್ವಿಗ್ನತೆಯ ಹೊರತಾಗಿಯೂ ಭಾರತಕ್ಕೆ ಚೀನೀ ಉತ್ಪನ್ನಗಳ ಅವಲಂಬನೆಯನ್ನು ಕಡಿಮೆಗೊಳಿಸಲು ಸಾಧ್ಯವಾಗುತ್ತಿಲ್ಲ ಎಂಬುದಕ್ಕೆ ಉಭಯ ದೇಶಗಳ ನಡುವಿನ ವ್ಯಾಪಾರ ವಹಿವಾಟಿನಲ್ಲಿ ಏರಿಕೆಯೇ ಸಾಕ್ಷಿ ಎಂದು ಚೀನಾದ ಸರಕಾರಿ ಸುದ್ದಿ ಸಂಸ್ಥೆ ಗ್ಲೋಬಲ್ ಟೈಮ್ಸ್ ಹೇಳಿದೆ.

ಭಾರತದಿಂದ ಚೀನಾಗೆ ರಫ್ತು ಕೂಡ ಏರಿಕೆಯಾಗಿದೆ. 2021ರಲ್ಲಿ ಈ ಮೊತ್ತ 24 ಬಿಲಿಯನ್ ಡಾಲರ್ ಆಗಿದ್ದರೆ 2020ರಲ್ಲಿ ಈ ಮೊತ್ತ 19 ಬಿಲಿಯನ್ ಡಾಲರ್ ಆಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X