Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯರಾತ್ರಿಯಲ್ಲಿ ಆನ್‌ಲೈನ್ ವಿಚಾರಣೆ...

ಮಧ್ಯರಾತ್ರಿಯಲ್ಲಿ ಆನ್‌ಲೈನ್ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್‌ ನಿಂದ ಹೊಸ ಇತಿಹಾಸ ಸೃಷ್ಟಿ

ವಾರ್ತಾಭಾರತಿವಾರ್ತಾಭಾರತಿ25 Jan 2022 8:10 PM IST
share
ಮಧ್ಯರಾತ್ರಿಯಲ್ಲಿ ಆನ್‌ಲೈನ್ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್‌ ನಿಂದ ಹೊಸ ಇತಿಹಾಸ ಸೃಷ್ಟಿ

ಕೊಚ್ಚಿ,ಜ.25: ಭಾರತದ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಕೇರಳ ಹೈಕೋರ್ಟ್ ಸೋಮವಾರ ರಾತ್ರಿ ಆನ್‌ಲೈನ್‌ನಲ್ಲಿ ವಿಚಾರಣೆ ನಡೆಸಿದ್ದು, ನೀರು ಪೂರೈಕೆದಾರ ಸಂಸ್ಥೆಗೆ ಬಾಕಿ ಇದ್ದ ಹಣವನ್ನು ಪಾವತಿಸಲು ನಿರಾಕರಿಸಿದ್ದಕ್ಕಾಗಿ ಕೊಚ್ಚಿ ಬಂದರಿನಲ್ಲಿ ಲಂಗರುಹಾಕಿರುವ ಹಡಗನ್ನು ವಶಕ್ಕೆ ತೆಗೆದುಕೊಳ್ಳುವಂತೆ ಆದೇಶಿಸಿದೆ.

ಕೇರಳ ಹೈಕೋರ್ಟ್ ನ್ಯಾಯಾಧೀಶ ದೇವನ್ ರಾಮಚಂದ್ರನ್ ಅವರು ಸೋಮವಾರ ರಾತ್ರಿ 11:30ರ ವೇಳೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವುದರೊಂದಿಗೆ ಇತಿಹಾಸವನ್ನು ಸೃಷ್ಟಿಸಿದರು. ನ್ಯಾಯಾಲಯದ ಸಿಬ್ಬಂದಿ ಹಾಗೂ ವಕೀಲರು ಕೂಡಾ ವಿಚಾರಣಾ ಕಲಾಪದಲ್ಲಿ ಪಾಲ್ಗೊಂಡಿದ್ದರು.

ಮಧ್ಯರಾತ್ರಿಯವರೆಗೂ ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಎಂ.ವಿ.ಒಶಿಯನ್ ರೋಸ್ ಹಡಗನ್ನು ಮುಟ್ಟುಗೋಲು ಹಾಕಲು ಆದೇಶವನ್ನು ಜಾರಿಗೊಳಿಸುವಂತೆ ರಿಜಿಸ್ಟ್ರಾರ್ ಅವರಿಗೆ ನಿರ್ದೇಶನ ನೀಡಿತು. ಹಡಗಿಗೆ ಸಂಬಂಧಿಸಿದ ಎಂಜಿನ್‌ಗಳು, ಯಂತ್ರೋಪಕರಣ, ದೋಣಿಗಳು, ಬಂಕರ್ಗಳು ಹಾಗೂ ಸಲಕರಣೆಗಳನ್ನು ಕೂಡಾ ವಶಕ್ಕೆ ತೆಗೆದುಕೊಳ್ಳಲು ಸೂಚನೆ ನೀಡಿತು. ಎ.ವಿ.ಓಶಿಯನ್ ರೋಸ್ ಹಡಗು ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿತ್ತು. ಹಡಗನ್ನು ಮುಟ್ಟುಗೋಲು ಹಾಕಲು ಅಥವಾ ಹಡಗಿನ ಮಾಲಕರನ್ನು ಬಂಧಿಸುವಂತೆಯೂ ನ್ಯಾಯಾಲಯವು ಕೊಚ್ಚಿ ಬಂದರಿನ ಉಪ ಸಂರಕ್ಷಣಾಧಿಕಾರಿಗೆ ಸೂಚಿಸಿತು.

ಹಡಗಿನ ಮಾಲಕರು 2 ಕೋಟಿ ರೂ. ಹಣವನ್ನು ನೀರು ಪೂರೈಕೆ ಮಾಡುವ ಸಂಸ್ಥೆಗೆ ನೀಡಬೇಕಿತ್ತು. ಕೊಚ್ಚಿಯ ಫ್ಯಾಕ್ಟ್ ರಸಗೊಬ್ಬರ ಕಾರ್ಖಾನೆಗೆ ಬೇಕಾದ ರಂಜಕವನ್ನು ಈ ಹಡಗು ಹೊತ್ತು ತಂದಿತ್ತು. ಮಂಗಳವಾರ ಬೆಳಗ್ಗೆ 5:00 ಗಂಟೆಗೆ ಈ ಹಡಗು ಕೊಚ್ಚಿಯ ಬಂದರಿನಿಂದ ನಿರ್ಗಮಿಸುವುದರಲ್ಲಿ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ರಾತ್ರಿ 11:30ರ ವೇಳೆಗೆ ವಿಚಾರಣೆಗೆ ಆದೇಶಿಸಿತು

ಒಂದು ವೇಳೆ ಹಡಗಿನ ಮಾಲಕರು 2,43,75,000 ರೂ.ಗಳನ್ನು ತಾವು ಹಣ ಪಾವತಿಸಲು ಬಾಕಿಯಿರುವ ಕಂಪೆನಿಯಲ್ಲಿ ಬಡ್ಡಿ ಸಮೇತವಾಗಿ ಠೇವಣಿಯಿರಿಸಿದಲ್ಲಿ ಹಾಗೂ 25 ಸಾವಿರ ರೂ. ವೆಚ್ಚವನ್ನು ಭರಿಸಿದಲ್ಲಿ ಅವರ ವಿರುದ್ಧದ ಬಂಧನ ವಾರಂಟ್ ಅನ್ನು ಹಿಂಪಡೆಯುವಂತೆಯೂ ಕೋರ್ಟ್ ಆದೇಶಿಸಿತು.

ಬಂಧನದ ವಾರಂಟ್ ಜಾರಿಗೊಳಿಸಿದ ಬಳಿಕ ಹಡಗು ಹದಿನೈದು ದಿನಗಳೊಳಗೆ ಭದ್ರತಾ ಖಾತರಿಯನ್ನು ಸಲ್ಲಿಸದೆ ಇದ್ದಲ್ಲಿ ಅಥವಾ ಬಂಧನ ವಾರಂಟ್ ತೆರವುಗೊಳಿಸುವಂತೆ ಕೋರುವ ಅರ್ಜಿಯನ್ನು ಸಲ್ಲಿಸದೆ ಇದ್ದಲ್ಲಿ, ಆನಂತರದ ಏಳು ದಿನಗಳೊಳಗೆ ಹಡಗಿನ ಹರಾಜು ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಪ್ರಕರಣದ ಮುಂದಿನ ಆಲಿಕೆಯನ್ನು ನ್ಯಾಯಾಲಯವು ಜನವರಿ 27ರಂದು ನಡೆಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X