ದ.ಕ.ಜಿಲ್ಲೆ: ಕೋವಿಡ್‌ಗೆ ನಾಲ್ವರು ಬಲಿ; 667 ಮಂದಿಗೆ ಕೊರೋನ ಸೋಂಕು

ಮಂಗಳೂರು, ಜ.25: ದ.ಕ.ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ಗೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಆ ಪೈಕಿ ಇಬ್ಬರು ಮಂಗಳೂರು ತಾಲೂಕು ಮತ್ತು ತಲಾ ಒಬ್ಬರು ಪುತ್ತೂರು ಮತ್ತು ಬಂಟ್ವಾಳ ತಾಲೂಕಿಗೆ ಸೇರಿದವರಾಗಿದ್ದಾರೆ. ಮೃತ ನಾಲ್ವರೂ ಪುರುಷರಾಗಿದ್ದಾರೆ.
ಮಂಗಳವಾರ 667 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.10.04 ದಾಖಲಾಗಿದೆ. ಅಲ್ಲದೆ 773 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,29,046 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,21,980 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,727 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಸದ್ಯ 5,345 ಸಕ್ರಿಯ ಪ್ರಕರಣವಿದೆ.
ದ.ಕ.ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣಕ್ಕೆ ಸಂಬಂಧಿಸಿದಂತೆ ಮಂಗಳವಾರ 1 ಕಂಟೈನ್ಮೆಂಟ್ ವಲಯವನ್ನು ಗುರುತಿಸಲಾಗಿದೆ. ವೇಣೂರಿನ ಶಾಲೆಯೊಂದರಲ್ಲಿ 74 ಮಂದಿ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 74 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 94,177 ಪ್ರಕರಣ ದಾಖಲಿಸಿ, 1,13,94,080 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.







