Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತದಾರರಿಂದ ಪ್ರಜಾಪ್ರಭುತ್ವ ವ್ಯವಸ್ಥೆ...

ಮತದಾರರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢ: ಉಡುಪಿ ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ25 Jan 2022 10:16 PM IST
share
ಮತದಾರರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ, ಜ.25: ಪ್ರಜಾಪ್ರಭುತ್ವ ವ್ಯವಸ್ಥೆಯ ಮೊದಲ ಮತ್ತು ಪ್ರಮುಖ ಹೆಜ್ಜೆ ಮತದಾನ. ಆದ್ದರಿಂದ ಪ್ರತಿಯೊಬ್ಬ ಮತದಾರರು ತಮಗೆ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮತದಾರರು ತಮಗೆ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸುವ ಜೊತೆಗೆ ಅದನ್ನು ಯಾವುದೇ ಆಸೆ, ಅಮಿಷಗಳಿಗೆ ಒಳಗಾಗದೇ ಮತ ಚಲಾಯಿಸುವ ಭಾದ್ಯತೆಯನ್ನೂ ಸಹ ನಿಭಾಯಿಸಬೇಕು. ಇದರಿಂದ ಉತ್ತಮ ಸದೃಢ ಸರಕಾರ ರಚನೆ ಸಾಧ್ಯವಾಗುವುದರ ಜೊತೆಗೆ ಸಾರ್ವಜನಿಕರ ಸಮಸ್ಯೆ ಗಳಿಗೆ ಸೂಕ್ತ ಪರಿಹಾರ ಪಡೆಯಲು ಸಾಧ್ಯವಾಗಲಿದೆ ಎಂದರು.

ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದ ಯುವ ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗದೇ, ನಿರ್ಭಿತಿಯಿಂದ ಮತ ಚಲಾಯಿಸುವ ಮೂಲಕ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ವ್ಯಕ್ತಿಯನ್ನು ಅಯ್ಕೆ ಮಾಡಿಕೊಳ್ಳಬೇಕು. 18 ವರ್ಷ ಮೀರಿದ ತಮ್ಮ ಎಲ್ಲಾ ಸ್ನೇಹಿತರನ್ನೂ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಎಂದ ಜಿಲ್ಲಾಧಿಕಾರಿ, ಮತದಾರರ ಪಟ್ಟಿಯ ಕುರಿತು ಸಂದೇಹಗಳಿಗೆ ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1950 ಸಂಪರ್ಕಿಸುವಂತೆ ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮಾತನಾಡಿ, ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬೇಕು.ಮತದಾನವು ಸಂವಿಧಾನ ನೀಡಿರುವ ಮೂಲ ಭೂತ ಹಕ್ಕು ಆಗಿದೆ. ಆದ್ದರಿಂದ 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿ, ಚುನಾವಣೆಯಲ್ಲಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವುದರ ಮೂಲಕ ದೇಶದ ಪ್ರಗತಿಗೆ ಕಾರಣರಾಗಬೇಕು ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ನವೀನ್ ಭಟ್ ಮಾತನಾಡಿ, ಮಾದರಿ ಆಡಳಿತ ವ್ಯವಸ್ಥೆಗೆ, ಉತ್ತಮ ಚುನಾಯಿತ ಸರಕಾರ ರಚನೆ ಅಗತ್ಯವಿದ್ದು, ಇದಕ್ಕಾಗಿ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರರು ತಪ್ಪದೇ ಮತ ಚಲಾಯಿಸುವುದು ಅಗತ್ಯವಾಗಿದೆ. ಚುನಾವಣೆಯಲ್ಲಿ ಪ್ರತೀ ಮತವೂ ನಿರ್ಣಾಯಕವಾಗಿದ್ದು, ಮತದಾರರು ತನ್ನ ಒಂದು ಮತದಿಂದ ಏನಾಗುತ್ತದೆ ಎಂಬ ಉದಾಸೀನ ತೋರದೇ, ಯಾವುದೇ ಮತ, ಧರ್ಮ ಜನಾಂಗ, ಭಾಷೆ ಅಥವಾ ಪ್ರೇರೇಪಣೆಗಳಿಂದ ಪ್ರಭಾವಿತ ರಾಗದೇ ಮತದಾನ ಮಾಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾತನಾಡಿ, ಮತದಾನ ಹಕ್ಕನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಸರಕಾರ ರಚನೆಗೆ ಎಲ್ಲರೂ ಕೈ ಜೋಡಿಸಬೇಕು. ಮತದಾನ ಮಾಡಲು ಅನುಕೂಲವಾಗಲೆಂದು ಮತದಾನ ದಿನದಂದು ನೀಡುವ ರಜೆಯನ್ನು ದುರುಪಯೋಗಪಡಿಸಿಕೊಳ್ಳದೇ ಎಲ್ಲರೂ ಮತದಾನ ಕೇಂದ್ರಕ್ಕೆ ಬಂದು ಮತದಾನ ಮಾಡಬೇಕು. ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡು ಎಪಿಕ್ ಕಾರ್ಡ್ ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಉಪಸ್ಥಿತ ರಿದ್ದರು. ಮತದಾರರ ಪಟ್ಟಿಯಲ್ಲಿ ಹೊಸದಾಗಿ ನೊಂದಣಿಯಾದ ಯುವ ಮತದಾರರಿಗೆ ಎಪಿಕ್ ಕಾರ್ಡ್‌ಗಳನ್ನು ವಿತರಿಸಲಾಯಿತು. ಮತದಾರರ ದಿನದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆ, ಪೋಸ್ಟರ್ ರಚನೆ ಮತ್ತು ಕ್ವಿಝ್ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸ್ವಾಗತಿಸಿ, ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಡಯಟ್‌ನ ಅಶೋಕ್ ಕಾಮತ್ ಕಾರ್ಯಕ್ರಮ ನಿರೂಪಿಸಿ, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X