Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುವ ಸಮೂಹಕ್ಕೆ ಡ್ರೈವಿಂಗ್ ಲೈಸನ್ಸ್...

ಯುವ ಸಮೂಹಕ್ಕೆ ಡ್ರೈವಿಂಗ್ ಲೈಸನ್ಸ್ ಪಡೆಯಲಿರುವ ಆಸಕ್ತಿ ಎಪಿಕ್ ಕಾರ್ಡ್ ಪಡೆಯುವುದರಲ್ಲಿಲ್ಲ: ದ.ಕ.ಜಿಲ್ಲಾಧಿಕಾರಿ

ರಾಷ್ಟ್ರೀಯ ಮತದಾರರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ25 Jan 2022 11:12 PM IST
share
ಯುವ ಸಮೂಹಕ್ಕೆ ಡ್ರೈವಿಂಗ್ ಲೈಸನ್ಸ್ ಪಡೆಯಲಿರುವ ಆಸಕ್ತಿ ಎಪಿಕ್ ಕಾರ್ಡ್ ಪಡೆಯುವುದರಲ್ಲಿಲ್ಲ: ದ.ಕ.ಜಿಲ್ಲಾಧಿಕಾರಿ

ಮಂಗಳೂರು, ಜ. 25: ಭ್ರಷ್ಟಾಚಾರದ ಬಗ್ಗೆ ಎಲ್ಲೆಡೆಯೂ ಮಾತುಗಳು ಕೇಳಿ ಬರುತ್ತವೆ. ಹಾಗಾಗಿ ಚುನಾವಣೆಯ ಸಂದರ್ಭ ಆಮಿಷಕ್ಕೊಳಗಾಗದೆ ಮತ ಚಲಾವಣೆ ಮಾಡಿದ್ದಲ್ಲಿ ಭ್ರಷ್ಟಾಚಾರವನ್ನು ಹೊಡೆದೋಡಿಸಬಹುದು. ಜಿಲ್ಲೆಯಲ್ಲಿ 18 ವರ್ಷ ಪ್ರಾಯ ಪೂರೈಸಿದ ಅಂದಾಜು 30 ಸಾವಿರಕ್ಕೂ ಹೆಚ್ಚು ಯುವಕ, ಯುವತಿಯರಿದ್ದಾರೆ. ಅವರಿಗೆ ಚಾಲನಾ ಪರವಾನಿಗೆ ಪಡೆಯು ದರಲ್ಲಿರುವ ಆಸಕ್ತಿ ಎಪಿಕ್ ಕಾರ್ಡ್ ಪಡೆಯುವುದರಲ್ಲಿ ಇಲ್ಲದಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಜಿಲ್ಲಾ ಚುನಾವಣಾ ಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ದ.ಕ. ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದೀಗ ವೋಟರ್ ಹೆಲ್ಪ್ಲೈನ್‌ಗಳ ಮೂಲಕವೂ ಮತದಾರರ ಗುರುತಿನ ಚೀಟಿಯಲ್ಲಿರುವ ದೋಷಗಳನ್ನು ತಿದ್ದಿಕೊಳ್ಳಬಹುದಾಗಿದೆ, ಅದೇ ರೀತಿ ಮತದಾನದ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಗರುಡಾ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶವಿದೆ. ವಿದೇಶಗಳಲ್ಲಿರುವ ಜಿಲ್ಲೆಯ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಬದಲಾವಣೆಗಳಿದ್ದರೆ ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಡಿಸಿ ಹೇಳಿದರು.

ಮತದಾರರ ಸಾಕ್ಷರತಾ ಕ್ಲಬ್ಗಳು ಎಲ್ಲಾ ಕಾಲೇಜುಗಳಲ್ಲೂ ಚಟುವಟಿಕೆಯಿಂದ ಕಾರ್ಯನಿರ್ವಹಿಸಬೇಕು. 18 ವರ್ಷ ಮೇಲ್ಪಟ್ಟ ವರನ್ನು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಬೇಕು ಎಂದು ಡಿಸಿ ಸೂಚಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪೃಥ್ವಿರಾಜ್ ವರ್ಣೇಕರ್ ಮಾತನಾಡಿ 2011ರಲ್ಲಿ ದೇಶದಾದ್ಯಂತ ಮತದಾರರ ದಿನಾಚರಣೆ ಆರಂಭವಾಯಿತು. ಆ ಮೂಲಕ ಮತದಾರರನ್ನು ಪ್ರೇರೇಪಿಸುವ ಕೆಲಸ ಮಾಡಲಾಗುತ್ತಿದೆ. ಶೇ.40ರಷ್ಟು ಮತದಾನವಾದಲ್ಲಿ ಸೂಕ್ತ ಅಭ್ಯರ್ಥಿಯ ಆಯ್ಕೆ ನಡೆಯುವುದಿಲ್ಲ. ಜನರ ಬೇಡಿಕೆಗಳನ್ನು ಈಡೇರಿಸುವ ಮತ್ತು ಉತ್ತಮ ಸಮಾಜ ನಿರ್ಮಿಸುವ ರಾಜಕಾರಣಿಯ ಉಗಮಕ್ಕೆ ದೇಶದ ಎಲ್ಲ ಪ್ರಜೆಗಳೂ ಕೂಡ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಅನಿವಾರ್ಯವಿದೆ. ಆ ಮೂಲಕ ಜನರು ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ಡಾ. ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಧರ್ಮಗಿರಿ ರಾಮಸ್ವಾಮಿ ಸುಬ್ಬಣ್ಣ, ಅಪರ ಜಿಲ್ಲಾಧಿಕಾರಿ ಮಾಣಿಕ್ಯ ಎನ್, ಮತದಾರರ ನೋಂದಣಾಧಿಕಾರಿ ಹಾಗೂ ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ಮದನ್ ಮೋಹನ್ ಹಾಗೂ ನಗರದ ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ರಾಜಶೇಖರ್ ಹೆಬ್ಬಾರ್ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ-ಕಾಲೇಜು ವಿದ್ಯಾಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X