Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೈಪುಂಜಾಲು: ಕಡಲ್ಕೊರೆತ ಭೀತಿಯಲ್ಲಿ...

ಕೈಪುಂಜಾಲು: ಕಡಲ್ಕೊರೆತ ಭೀತಿಯಲ್ಲಿ ಸ್ಥಳೀಯ ನಿವಾಸಿಗಳು

ವಾರ್ತಾಭಾರತಿವಾರ್ತಾಭಾರತಿ25 Jan 2022 11:15 PM IST
share
ಕೈಪುಂಜಾಲು: ಕಡಲ್ಕೊರೆತ ಭೀತಿಯಲ್ಲಿ ಸ್ಥಳೀಯ ನಿವಾಸಿಗಳು

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಪೊಲಿಪು ಪಡು ಯಾರ್ಡ್ ಬೀಚ್‍ನಿಂದ ಪೊಲಿಪು ಸುಮಾರು 1.25 ಕಿಮೀ ಭಾಗದ ನಿವಾಸಿಗಳಿಗೆ ಕಡಲ್ಕೊರೆತ ಭೀತಿ ಉಂಟಾಗಿದೆ.

ಕಳೆದ ಮಳೆಗಾಲ ಸಂದರ್ಭದಲ್ಲಿ ತಡೆಗೋಡೆ ನಿರ್ಮಾಣ ಮಾಡುವಂತೆ ಜನರು, ಜನಪ್ರತಿನಿಧಿಗಳಿಗೆ ಒತ್ತಡ ಹೇರಿದ್ದರು. ಶಾಸಕ, ಸಂಸದರು, ಜಿಲ್ಲಾಧಿಕಾರಿ ಸಹಿತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತಡೆಗೋಡೆ ನಿರ್ಮಾಣದ ಭರವಸೆ ನೀಡಿದ್ದರು. ಆದರೆ ಅನುದಾನ ಮಂಜೂರಾಗದೆ ಮುಂಚಿತ ಕಾಮಗಾರಿ ನಡೆಸಲು ಇಲಾಖೆ ಹಾಗೂ ಗುತ್ತಿಗೆದಾರರು ಹಿಂದೇಟು ಹಾಕಿದ ಪರಿಣಾಮ ಅದು ನೆನೆಗುದಿಗೆ ಬಿದ್ದಿದೆ ಎಂದು ಸ್ಥಳೀಯರು ದೂರಿದ್ದಾರೆ.

ನಾಲ್ಕು ತಿಂಗಳ ಹಿಂದೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶೀಘ್ರ ತಡೆಗೋಡೆ ನಿರ್ಮಾಣದ ಭರವಸೆಯನ್ನು ನೀಡಿದ್ದರು. ಅವರು ನೀಡಿದ ಭರವಸೆಯಂತೆ ಕಾಮಗಾರಿಗೆ ಮುಂದಡಿ ಇಡಲಾಗಿತ್ತು. ಕಾಮಗಾರಿಗಾಗಿ ರಸ್ತೆ ನಿರ್ಮಾಣಕ್ಕೆ ಖಾಸಗಿ ಜಮೀನಿನವರು ಅವಕಾಶ ನೀಡದ ಕಾರಣ ಗುತ್ತಿಗೆದಾರರೊಬ್ಬರು 10 ವರ್ಷಗಳ ಹಿಂದೆ ನಿರ್ಮಿಸಿರುವ ತಡೆಗೋಡೆಯನ್ನೇ ತೆರವುಗೊಳಿಸಿ ರಸ್ತೆ ನಿರ್ಮಾಣ ಮಾಡಿದ್ದರು. ಆದರೆ ತೆರವುಗೊಳಿಸಿ ತಿಂಗಳು ನಾಲ್ಕು ಆದರೂ ಶಾಶ್ವತ ತಡೆಗೋಡೆ ನಿರ್ಮಾಣ ಮಾಡಲಿಲ್ಲ ಸ್ಥಳೀಯ ಮೀನುಗಾರ ಮುಖಂಡ ವಿಜಯ ಕರ್ಕೇರ ಹೇಳುತ್ತಾರೆ.

ಶಾಶ್ವತ ತಡೆಗೋಡೆ ನಿರ್ಮಿಸುತ್ತೇವೆ ಎಂದು ಹೇಳಿ 4 ಅಡಿ ಎತ್ತರವಿದ್ದ ತಡೆಗೋಡೆಯನ್ನು ತೆರವುಗೊಳಿಸಿ ತಿಂಗಳು ನಾಲ್ಕು ಆದರೂ ಇದುವರೆಗೆ ಯಾವುದೇ ಕಾಮಗಾರಿಗೆ ಮುಂದಾಗಲಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದು, 8 ಕೋಟಿ ರೂ. ಅನುದಾನ ದೊರಕಿಸಿ ಕಾಮಗಾರಿ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಆದೆ ಇದುವರೆಗೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯರಾದ ಮನೋಜ್ ಪುತ್ರನ್ ನೋವು ತೋಡಿಕೊಂಡರು.

ಹಲವು ವರ್ಷಗಳಿಂದ ಇಲ್ಲಿ ವಾಸಿಸುತಿದ್ದೆವು. ಸಮುದ್ರ ಕೊರತೆಯಿಂದಾಗಿ ನಾವು ಜಾಗ ಈಗಾಗಲೇ ಕಳೆದುಕೊಂಡಿದ್ದೇವೆ. ಈಗಿನ ಪರಿಸ್ಥಿತಿಯಲ್ಲಿ ಮತ್ತಷ್ಟು ಭಯ ಉಂಟಾಗಿದೆ. ಕಲ್ಲು ತೆಗೆದು ಕೆಳಗೆ ಹಾಕಿರುವುದರಿಂದ ಮುಂದಿನ ಮಳೆಗಾಲದಲ್ಲಿ ಕಡಲ್ಕೊರೆತ ಉಂಟಾಗುವ ಸಾಧ್ಯತೆ ಇದೆ. ಮನೆಯಲ್ಲಿ ಭಯದ ವಾತಾವರಣದಲ್ಲಿ ಜೀವನ ನಡೆಸುತಿದ್ದೇನೆ. ನಾನೊಬ್ಬಳ ಇದ್ದೇನೆ ಎಂದು ಸ್ಥಳೀಯ ನಿವಾಸಿ ಕಮಲ ಹೇಳುತ್ತಾರೆ.

ಕಳೆದ ಚಂಡುಮಾರುತದಿಂದ ಅಪಾರ ಹಾನಿಯಾಗಿದ್ದು, ಪ್ರಾಕೃತಿಕ ವಿಕೋಪದ ತುರ್ತು ಸಂದರ್ಭದಲ್ಲಿ ಶಾಸಕರ ಶಿಫಾರಸಿನಂತೆ ಜಿಲ್ಲಾಧಿಕಾರಿಯವರ ಅನುಮತಿ ಮೇರೆಗೆ ತಾತ್ಕಾಲಿಕ ತಡೆಗೋಡೆಯನ್ನು ನಿರ್ಮಿಸಲಾಗಿದೆ. ಅಂದು ಗುತ್ತಿಗೆದಾರರು ನಿರ್ಮಿಸಿದ್ದ ತಡೆಗೋಡೆಯನ್ನು ಸರಿಪಡಿಸಲಾಗುವುದು. ಮುಂದಿನ ಬಜೆಟ್‍ನಲ್ಲಿ ಈ ಭಾಗದ ಶಾಶ್ವತ ತಡೆಗೋಡೆಗೆ ಕಾಮಗಾರಿಗೆ ಮಂಜೂರಾತಿ ದೊರಕಲಿದೆ. ಎರ್ಮಾಳಿನಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣವಾಗಿದ್ದು, ಈ ಭಾಗದಲ್ಲೂ ಶಾಶ್ವತ ತಡೆಗೋಡೆ ನಿರ್ಮಾಣದಿಂದ ಕಡಲ್ಕೊರೆತ ಭೀತಿ ದೂರವಾಗಲಿದೆ ಎಂದು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X