Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಭಾರತದ ಗಣರಾಜ್ಯೋತ್ಸವಕ್ಕೆ ಗೂಗಲ್ ಡೂಡಲ್...

​ಭಾರತದ ಗಣರಾಜ್ಯೋತ್ಸವಕ್ಕೆ ಗೂಗಲ್ ಡೂಡಲ್ ಗೌರವ

ವಾರ್ತಾಭಾರತಿವಾರ್ತಾಭಾರತಿ26 Jan 2022 7:42 AM IST
share
​ಭಾರತದ ಗಣರಾಜ್ಯೋತ್ಸವಕ್ಕೆ ಗೂಗಲ್ ಡೂಡಲ್ ಗೌರವ

ಹೊಸದಿಲ್ಲಿ: ಭಾರತ 73ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಗೂಗಲ್ ಸರ್ಚ್‌ ಎಂಜಿನ್‌ನ ಕಲಾತ್ಮಕ ಅಭಿವ್ಯಕ್ತಿಯಾದ ಡೂಡಲ್ ಇಂದು ಗಣರಾಜ್ಯೋತ್ಸವ ಪರೇಡ್‌ನ ಪ್ರಮುಖ ಅಂಶಗಳನ್ನು ಬಿಂಬಿಸುವ ಮೂಲಕ ಗೌರವ ಸಲ್ಲಿಸಿದೆ.

ಡೂಡಲ್ ಇಂದು ಪರೇಡ್ ಪ್ರಾಣಿಗಳಾದ ಒಂದು ಆನೆ, ಕುದುರೆ, ಶ್ವಾನ, ಒಂಟೆ ಮತ್ತು ಕೆಂಪು ತಬಲಾ ಹಾಗೂ ಪರೇಡ್ ಪಥವನ್ನು ಬಿಂಬಿಸಿದೆ. ಒಂಟೆಯಿಂದ ಕೂಡಿದ ಬ್ಯಾಂಡ್‌ನಲ್ಲಿ ಸ್ಯಾಕ್ಸೋಫೋನ್ ಚಿತ್ರಿಸಲಾಗಿದೆ. ಇದರ ಜತೆಗೆ ಪಾರಿವಾಳಗಳು ಹಾಗೂ ಭಾರತದ ರಾಷ್ಟ್ರಧ್ವಜವಾದ ತಿರಂಗ ಡೂಡಲ್ ಗೌರವ ಪಡೆದಿವೆ.

ಭಾರತದ ಸ್ವತಂತ್ರವಾದ ಬಳಿಕ ಸಂವಿಧಾನ ಅಸ್ತಿತ್ವಕ್ಕೆ ಬಂದು 72 ವರ್ಷಗಳು ಪೂರ್ಣಗೊಂಡ ದಿನವನ್ನು 73ನೇ ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತಿದೆ. ಭಾರತದ ಸಂವಿಧಾನವನ್ನು 1949ರ ನವೆಂಬರ್ 26ರಂದು ಆಂಗೀಕರಿಸಿದರೂ, ಅಧಿಕೃತವಾಗಿ ಇದು 1950ರ ಜನವರಿ 26ರಂದು ಅಸ್ತಿತ್ವಕ್ಕೆ ಬಂದಿತ್ತು. ಭಾರತ ರಾಷ್ಟ್ರೀಯ ಕಾಂಗ್ರೆಸ್ ಪೂರ್ಣ ಸ್ವರಾಜ್ಯ ದಿವಸವನ್ನು ಘೋಷಿಸಿದ ನೆನಪಿಗಾಗಿ ಈ ದಿನವನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಇದೀಗ ಗಣರಾಜ್ಯೋತ್ಸವವನ್ನು ನಾಲ್ಕು ದಿನಗಳ ಅವಧಿಯ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದ್ದು, ಸ್ವಾತಂತ್ರ್ಯ ಯೋಧ ಸುಭಾಸ್‌ ಚಂದ್ರ ಬೋಸ್ ಅವರ ಜನ್ಮ ದಿನವಾದ ಜನವರಿ 23ರಿಂದ ಆರಂಭಿಸಲಾಗುತ್ತದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದ ಸ್ಥಿತಿಸ್ಥಾಪಕತ್ವ, ಇತಿಹಾಸ, ವೈವಿಧ್ಯಮಯ ಸಾಮಾಜಿಕ ಬಂಧವನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಇದರ ಅಂಗವಾಗಿ ನಡೆಯುತ್ತವೆ. ಸಾಂಪ್ರದಾಯಿಕ ಆಕರ್ಷಕ ಸಮಾರಂಭ ಹೊಸದಿಲ್ಲಿಯಲ್ಲಿ ನಡೆಯುತ್ತದೆ. ಪ್ರತಿ ರಾಜ್ಯಗಳ ಸ್ತಬ್ಧಚಿತ್ರಗಳು, ಹಲವಾರು ಬ್ಯಾಂಡ್‌ಗಳು, ಜಾನಪದ ನೃತ್ಯ ತಂಡಗಳು ಮತ್ತು ಸರ್ಕಾರದ ಉನ್ನತ ಅಧಿಕಾರಿಗಳು ಇದರ ಭಾಗವಾಗಿರುತ್ತಾರೆ.

ಪ್ರಧಾನಿಯವರು ರಾಷ್ಟ್ರ ಯುದ್ಧಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮರಾದ ಯೋಧರಿಗೆ ಗೌರವ ಸಮರ್ಪಿಸುವ ಮೂಲಕ ಪರೇಡ್ ಆರಂಭವಾಗುತ್ತದೆ. ಕೆಂಪುಕೋಟೆಯಲ್ಲಿ ರಾಷ್ಟ್ರಪತಿಯವರು ತ್ರಿವರ್ಣ ಧ್ವಜಾರೋಹಣ ನೆರವೇರಿಸುತ್ತಾರೆ. ಬಳಿಕ ರಾಷ್ಟ್ರಗೀತೆ ಹಾಗೂ 21 ಸುತ್ತು ಬಂದೂಕು ನಮನ ಸಲ್ಲಿಸಲಾಗುತ್ತದೆ. ಬಳಿಕ ರಾಷ್ಟ್ರಪತಿಗಳು ಭದ್ರತಾ ಪಡೆಗಳ ಯೋಧರಿಗೆ ಶೌರ್ಯ ಪ್ರಶಸ್ತಿ ನೀಡಿ ಗೌರವಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X