Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆಯಲ್ಲಿ ಕೃಷಿ, ಉದ್ಯಮ,...

ದ.ಕ.ಜಿಲ್ಲೆಯಲ್ಲಿ ಕೃಷಿ, ಉದ್ಯಮ, ಪ್ರವಾಸೋದ್ಯಮ, ಸಂಸ್ಕೃತಿ ಸ್ನೇಹಿ ಅಭಿವೃದ್ಧಿ: ಉಸ್ತುವಾರಿ ಸಚಿವ ಸುನಿಲ್ ಕುಮಾರ್

ಜಿಲ್ಲಾಡಳಿತ ವತಿಯಿಂದ 73ನೇ ಗಣರಾಜ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ26 Jan 2022 10:05 AM IST
share
ದ.ಕ.ಜಿಲ್ಲೆಯಲ್ಲಿ ಕೃಷಿ, ಉದ್ಯಮ, ಪ್ರವಾಸೋದ್ಯಮ, ಸಂಸ್ಕೃತಿ ಸ್ನೇಹಿ ಅಭಿವೃದ್ಧಿ: ಉಸ್ತುವಾರಿ ಸಚಿವ ಸುನಿಲ್ ಕುಮಾರ್

ಮಂಗಳೂರು : ಇಲ್ಲಿನ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.

ಜಿಲ್ಲೆಯಲ್ಲಿ 20 ವರ್ಷಗಳಿಂದ ಜೀವಂತ ಸಮಸ್ಯೆ ಆಗಿರುವ ಡೀಮ್ಡ್ ಫಾರೆಸ್ಟ್ ಸಮಸ್ಯೆ ಯನ್ನು ಪರಿಹರಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಜಿಲ್ಲೆಯಲ್ಲಿ ಗುರುತಿಸಲಾಗಿರುವ 66000 ಹೆಕ್ಟೇರ್ ಗೂ ಅಧಿಕ ಡೀಮ್ಡ್ ಫಾರೆಸ್ಟ್ ಭೂಮಿಯಲ್ಲಿ 34000 ಹೆಕ್ಟೇರ್ ಭೂಮಿ ಕೈಬಿಡಲು ಸರಕಾರ ನಿರ್ಧರಿಸಿದೆ ಎಂದು ಅವರು ತಮ್ಮ ಗಣರಾಜ್ಯೋತ್ಸವ ಸಂದೇಶದಲ್ಲಿ ತಿಳಿಸಿದರು. ರಾಮಕುಂಜದಲ್ಲಿ 98 ಎಕರೆ ಭೂಮಿಯಲ್ಲಿ ಸರಕಾರಿ ಗೋಶಾಲೆ ನಿರ್ಮಿಸಲು ಜಿಲ್ಲಾಡಳಿತ ಮುಂದಾಗುವ ಮೂಲಕ ಗೋಪ್ರೇಮಿ ಸರಕಾರ ಎಂಬುದನ್ನು ತೋರ್ಪಡಿಸಿದೆ ಎಂದವರು ಹೇಳಿದರು.

''ಸಾಮಾನ್ಯ ಶಿಕ್ಷಕನ ಮಗ ಇಂದು ಮಂಗಳೂರು ಉಸ್ತುವಾರಿ ಆಗಲು ಅಂಬೇಡ್ಕರ್ ಅವರ ಸಂವಿಧಾನವೇ ಕಾರಣ. ಸಂವಿಧಾನವನ್ನು ಗಟ್ಟಿ ಗೊಳಿಸುವ ನಡವಳಿಕೆ, ಚಟುವಟಿಕೆ ಇಂದಿನ ಅನಿವಾರ್ಯ. ತುರ್ತು ಪರಿಸ್ಥಿತಿ, ಭಯೋತ್ಪಾದನೆ, ನಕ್ಸಲ್ ಚಟುವಟಿಕೆ ಮೂಲಕ ಸಂವಿಧಾನವನ್ನು ದುರ್ಬಲಗೊಳಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದರೂ ಅದನ್ನು ಯಶಸ್ವಿಯಾಗಿ ಹತ್ತಿಕ್ಕುವ ಮೂಲಕ ಸಂವಿಧಾನವೇ ಶ್ರೇಷ್ಠ ಅನ್ನುವುದನ್ನು ಸಾಬೀತು ಪಡಿಸಲಾಗುತ್ತಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು,    ಜನಪ್ರತಿನಿಧಿಗಳು, ಅಧಿಕಾರಿಗಳು, ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಹರೇಹಳ ಹಾಜಬ್ಬ ಹಾಗೂ ಅಮೈ ಮಹಾಲಿಂಗ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X