ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಆರೋಪ; ಓರ್ವ ಸೆರೆ

ಮಂಗಳೂರು, ಜ.26: ದುಬೈಯಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿದ್ದ ಪ್ರಯಾಣಿಕನನ್ನು ತಪಾಸಣೆ ನಡೆಸಿದ ವಿಮಾನ ನಿಲ್ದಾಣದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಗೂ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ತಂಡ ಚಿನ್ನ ಅಕ್ರಮ ಸಾಗಾಟ ಪ್ರಕರಣವನ್ನು ಮಂಗಳವಾರ ಪತ್ತೆ ಹಚ್ಚಿದ್ದಾರೆ.
ಆರೋಪಿಯಿಂದ 29,14,160 ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮಾಡಿಟ್ಟುಕೊಂಡು ತಂದಿದ್ದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
Next Story