Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಯಣ್ಣನ ಹೆಸರಿನಲ್ಲಿ 180 ಕೋಟಿ ರೂ....

ರಾಯಣ್ಣನ ಹೆಸರಿನಲ್ಲಿ 180 ಕೋಟಿ ರೂ. ವೆಚ್ಚದಲ್ಲಿ ಮಿಲಿಟರಿ ಶಾಲೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ26 Jan 2022 4:26 PM IST
share
ರಾಯಣ್ಣನ ಹೆಸರಿನಲ್ಲಿ 180 ಕೋಟಿ ರೂ. ವೆಚ್ಚದಲ್ಲಿ ಮಿಲಿಟರಿ ಶಾಲೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಜನವರಿ 26: ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್  ಮಿಲಿಟರಿ  ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 191 ನೇ  ಸ್ಮರಣೋತ್ಸವ ಅಂಗವಾಗಿ  ರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡುತ್ತಿದ್ದರು.  

ಈ  ಉದ್ದೇಶಕ್ಕಾಗಿ  55 ಕೋಟಿ ರೂ.ಗಳನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ.  ಈ ವರ್ಷ ಶಾಲೆಯ ಕಾಮಗಾರಿ ಪೂರ್ಣಗೊಳ್ಳಲಿದೆ. ರಕ್ಷಣಾ ಇಲಾಖೆ ಶಾಲೆಯ ಉಸ್ತುವಾರಿಯನ್ನು ವಹಿಸಿಕೊಳ್ಳಲು ಮಾತುಕತೆ ನಡೆದಿದೆ. ಪರಿಶೀಲನಾ ಕಾರ್ಯವೂ ನಡೆದಿದ್ದು, ರಕ್ಷಣಾ ಇಲಾಖೆ ಅದನ್ನು ಬಹುತೇಕವಾಗಿ ಮಿಲಿಟರಿ ಶಾಲೆಯಾಗಿ ಪರಿವರ್ತನೆ ಮಾಡಲಿದೆ. ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು 100 ಎಕರೆ ಪ್ರದೇಶದಲ್ಲಿ ಮಾಡಲಾಗುತ್ತಿದೆ ಎಂದರು. 

ರಾಯಣ್ಣ ಹುತಾತ್ಮರಾದ  ನಂದಗಡದಲ್ಲಿ ಅವರ ಸಮಾಧಿಯ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗುವುದು. ಅವರ ಹುಟ್ಟೂರು ಸಂಗೊಳ್ಳಿಯಲ್ಲಿ  10 ಎಕರೆ ಜಮೀನು  ರಾಕ್ ಗಾರ್ಡನ್ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ.  ಮುಂದಿನ ಪೀಳಿಗೆಗೆ ರಾಯಣ್ಣನ ಜೀವನದ ಪರಿಚಯ ಮಾಡಿಕೊಡಲು ಈ ಸ್ಮಾರಕಗಳ ನಿರ್ಮಾಣವಾಗುತ್ತಿದೆ ಎಂದರು. 

ರಾಯಣ್ಣನ ಧ್ಯೇಯ ಜೀವಂತವಾಗಿಡಲು ಕ್ರಮ: 

ಸಂಗೊಳ್ಳಿ ರಾಯಣ್ಣನ ಗುಣಧರ್ಮಗಳಾದ ದೇಶಭಕ್ತಿ, ಸ್ವಾಮಿ ಭಕ್ತಿ, ನಿಷ್ಠೆ, ಧೈರ್ಯ ಶೌರ್ಯ, ಸಾಹಸ ಗುರಿಗಳನ್ನು ಪ್ರಚಲಿತ ಸಮಾಜದಲ್ಲಿ ಜೀವಂತವಾಗಿಡಲು ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರ ಬದ್ಧವಾಗಿದೆ. ಅವರ ಧ್ಯೇಯವನ್ನು ಮುಂದಿಟ್ಟುಕೊಂಡು ನಮ್ಮ ಆಡಳಿತ ನಡೆಯಲಿದೆ. ಕಳೆದ ಬಾರಿ ಸರ್ಕಾರವೇ ರಾಯಣ್ಣನ ಜನ್ಮದಿನಾಚರಣೆ ಮಾಡಲು ಮನವಿ ಬಂದ ಒಂದು ಗಂಟೆಯಲ್ಲಿ ಆದೇಶ ಹೊರಡಿಸಲಾಯಿತು ಎಂದರು.  

ಶಾಲಾ ಕಾಲೇಜುಗಳಲ್ಲಿ ಭಾವಚಿತ್ರ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಹಾಕಿಸಲು ಇಂದೇ ಆದೇಶ ಹೊರಡಿಸಲಾಗುವುದು ಎಂದು ಪ್ರಕಟಿಸಿದರು.  

ಬೆಂಗಳೂರಿನ ರಸ್ತೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರು: ಸಂಗೊಳ್ಳಿ ರಾಯಣ್ಣನ ವಿಚಾರಧಾರೆಯನ್ನು ಪ್ರಚುರಪಡಿಸಲು ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಕರ್ನಾಟಕದಲ್ಲಿ ಸ್ವತಂತ್ರ ಹೋರಾಟಗಾರರ ದೊಡ್ಡ ಇತಿಹಾಸವಿದೆ.  ಬೆಂಗಳೂರಿನ ರಸ್ತೆಗಳಿಗೆ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನು ಇಡಬೇಕು ಎಂಬ ಪ್ರಸ್ತಾಪವನ್ನು ಸಂಸದ ಪಿ.ಸಿ.ಮೋಹನ್ ಮಾಡಿದ್ದು  ಈ ಬಗ್ಗೆ  ಸಭೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದರು. 

ನವದೆಹಲಿಯಲ್ಲಿ ರಾಯಣ್ಣನ ಪ್ರತಿಮೆ : ನವದೆಹಲಿಯಲ್ಲಿ ಕಿತ್ತೂರು  ರಾಣಿ ಚನ್ನಮ್ಮನ ಪ್ರತಿಮೆಯಿದೆ. ಚನ್ನಮ್ಮ ಇದ್ದ ಕಡೆ ರಾಯಣ್ಣ ಸಹ ಇರಬೇಕು.  ನವದೆಹಲಿಯ ಸೂಕ್ತ ಸ್ಥಳದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಈಗಾಗಲೇ ಸಂಬಂಧ ಪಟ್ಟವರಿಗೆ ಪತ್ರ ಬರೆಯಲಾಗಿದೆ ಎಂದರು. 

ಬೆಳಗಾವಿಯಲ್ಲಿ ಪ್ರತಿಮೆಗಳು ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುವರ್ಣ ಸೌಧದ ಮುಂದೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆ ಮಾಡುವುದಾಗಿ ಘೋಷಿಸಲಾಗಿದೆ. ಮೂರ್ತಿ ಮಾಡುವವರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಆದಷ್ಟು ಶೀಘ್ರದಲ್ಲಿ ಈ ಮೂರ್ತಿಗಳು ಸ್ಥಾಪನೆಯಾಗಲಿವೆ ಎಂದರು.

ಅವರ ತ್ಯಾಗ, ಬಲಿದಾನ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ. ಸ್ವಾತಂತ್ರ್ಯದ ನಂತರ ಹುಟ್ಟಿರುವ ನಾವು ದೇಶ ಕಟ್ಟಲು ಆದರ್ಶ ಬದುಕನ್ನು  ಬದುಕುವ ಮೂಲಕ ದೇಶಕ್ಕೆ ಸೇವೆ ಮಾಡಬೇಕು. ದೇಶಕ್ಕಾಗಿ ನಾನೇನು ಮಾಡಿದ್ದೇನೆ ಎಂದು ಪ್ರಶ್ನಿಸಿಕೊಳ್ಳಬೇಕಾದ ದಿನವಿದು. ನಮ್ಮ ಹಕ್ಕುಗಳನ್ನು ಅರ್ಹತೆಯಿಂದ ಪಡೆದುಕೊಳ್ಳಬೇಕು ಎಂದರು. 

ಕಾಗಿನೆಲೆ ಪೀಠದ  ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಸಚಿವ ಆರ್.ಅಶೋಕ್, ಸಂಸದ ಪಿ.ಸಿ.ಮೋಹನ್,ಮಾಜಿ ಶಾಸಕರಾದ ವಾಟಾಳ್ ನಾಗರಾಜ್, ಮಾಜಿ ಸಚಿವ  ಹೆಚ್.ಎಂ.ರೇವಣ್ಣ  ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X