Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತಾಂತರ ನಿಷೇಧ ಕಾಯಿದೆ ಮನುಷ್ಯ, ಸಂವಿಧಾನ...

ಮತಾಂತರ ನಿಷೇಧ ಕಾಯಿದೆ ಮನುಷ್ಯ, ಸಂವಿಧಾನ ವಿರೋಧಿ: ಸಂವರ್ಥ

ವಾರ್ತಾಭಾರತಿವಾರ್ತಾಭಾರತಿ26 Jan 2022 8:07 PM IST
share
ಮತಾಂತರ ನಿಷೇಧ ಕಾಯಿದೆ ಮನುಷ್ಯ, ಸಂವಿಧಾನ ವಿರೋಧಿ: ಸಂವರ್ಥ

ಉಡುಪಿ, ಜ.26: ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ಕಾಯಿದೆ(ಮತಾಂತರ ನಿಷೇಧ ಕಾಯಿದೆ)ಯು ಮನುಷ್ಯ ವಿರೋಧಿ ಹಾಗೂ ಸಂವಿಧಾನ ವಿರೋಧಿ ಯಾಗಿದೆ ಎಂದು ಬರಹಗಾರ ಸಂವರ್ಥ ಆರೋಪಿಸಿದ್ದಾರೆ.

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು) ಹಾಗೂ ಭಾರತ ಕಮ್ಯುನಿಷ್ಟ್ ಪಕ್ಷ(ಮಾರ್ಕ್ಸ್‌ವಾದಿ) ಉಡುಪಿ ಜಿಲ್ಲಾ ಸಮಿತಿಗಳ ಆಶ್ರಯ ದಲ್ಲಿ ಬುಧವಾರ ನಗರದ ಹೊಟೇಲ್ ಸಾಯಿ ರೆಸಿಡೆನ್ಸಿ ಸಭಾಂಗಣದಲ್ಲಿ ಆಯೋಜಿಸಲಾದ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ ಹಕ್ಕು ಸಂರಕ್ಷಣಾ ಕಾಯಿದೆ 2021 ಹಾಗೂ ನಮ್ಮ ಸಂವಿಧಾನ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ವಿಷಯ ಮಂಡಿಸಿದರು.

ತಮಗೆ ಬೇಕಾದ ಧರ್ಮ, ನಂಬಿಕೆ, ಮತವನ್ನು ಸ್ವೀಕರಿಸುವ ಹಾಗೂ ಪ್ರಚಾರ ಮಾಡುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಆದರೆ ಅಲ್ಪಸಂಖ್ಯಾತರಿಗೆ ಕಿರುಕುಳ ನೀಡುವ ಉದ್ದೇಶದಿಂದ ಜಾರಿಗೆ ತರುತ್ತಿರುವ ಈ ಕಾಯಿದೆಯು  ಆಯ್ಕೆ ಸ್ವಾತಂತ್ರ ಹಾಗೂ ವ್ಯಕ್ತಿ ಸ್ವಾತಂತ್ರವನ್ನು ಕಸಿದುಕೊಳ್ಳುತ್ತಿದೆ ಎಂದು ಅವರು ದೂರಿದರು.ಈ ಕಾಯಿದೆಯಲ್ಲಿ ಹಣ ನೀಡುವುದು ಮಾತ್ರವಲ್ಲ ಉಚಿತ ಶಿಕ್ಷಣ ನೀಡು ವುದು ಕೂಡ ಆಮಿಷ ಎಂದು ಹೇಳಲಾಗುತ್ತದೆ. ಇದು ಅತ್ಯಂತ ಬಾಲಿಷ ವಾಗಿದೆ. ಉತ್ತಮ ಜೀವನ ಶೈಲಿಗಾಗಿ ಧರ್ಮ ಬದಲಾಯಿಸುವುದು ಕೂಡ ಮತಾಂತರ ಎಂದು ಹೇಳಲಾಗುತ್ತಿದೆ. ಇಂದು ಎಷ್ಟೋ ಮಂದಿ ತಮ್ಮ ಉತ್ತಮ ಜೀವನ ಶೈಲಿಗಾಗಿ ದೇಶವನ್ನೇ ಬದಲಾಯಿಸುತ್ತಾರೆ. ಹಾಗಿರುವಾಗ ಧರ್ಮ ಬದಲಾಯಿಸುವುದು ಹೇಗೆ ತಪ್ಪು ಆಗುತ್ತದೆ ಎಂದು ಅವರು ಪ್ರಶ್ನಿಸಿದರು.

ಈ ಮಸೂದೆ ಮನುಷ್ಯನ ನಂಬಿಕೆಯನ್ನು ಸರಿಯಾಗಿ ಅರ್ಥ ಮಾಡಿ ಕೊಂಡಿಲ್ಲ. ಮತಾಂತರಕ್ಕೆ ಕೇವಲ ಆಮಿಷ ಮಾತ್ರ ಕಾರಣವಾಗಿರುವುದಿಲ್ಲ. ಅದರ ಹಿಂದೆ ಅಪಮಾನ, ನೋವು, ನಂಬಿಕೆ ಕೂಡ ಇರುತ್ತದೆ. ಅದು ತನ್ನ ನಂಬಿಕೆಯನ್ನು ಬದಲಾಯಿಸುವುದೇ ಹೊರತು ಮತಾಂತರ ಅಲ್ಲ. ಈ ಮಸೂದೆ ಜಾರಿಗೆ ತರುವುದರ ಹಿಂದೆ ಕೆಲವು ಧರ್ಮದವರವನ್ನು ಅಪರಾಧಿಗಳನ್ನಾಗಿಸುವ ಹುನ್ನಾರ ಅಡಗಿದೆ ಎಂದು ಅವರು ಆರೋಪಿಸಿದರು. ಜನರಲ್ಲಿ ಭಯದ ವಾತಾವರಣ ಸೃಷ್ಠಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಲಸ ವನ್ನು ಬಿಜೆಪಿ ಸರಕಾರ ಮಾಡುತ್ತಿದೆ. ಈ ಕಾಯಿದೆಯಲ್ಲಿ ಮದುವೆಗಾಗಿ ಮತಾಂತರ ಆಗುವುದು ತಪ್ಪು ಎಂದು ಹೇಳುವ ಮೂಲಕ ಒಬ್ಬ ವ್ಯಕ್ತಿಯ ಆಯ್ಕೆ ಸ್ವಾತಂತ್ರವನ್ನೇ ಕಸಿದುಕೊಳ್ಳಲಾಗು ತ್ತಿದೆ. ಈ ಕಾಯಿದೆ ಪ್ರಕಾರ ಮತಾಂತರ ಆಗುವುದು ತಪ್ಪು. ಆದರೆ ಮರು ಮತಾಂತರ ಆಗುವುದು ತಪ್ಪಲ್ಲ. ಇದು ಯಾವ ನ್ಯಾಯ ಎಂದು ಅವರು ಪ್ರಶ್ನಿಸಿದರು.

ಈ ಮಸೂದೆಯಿಂದ ವ್ಯಕ್ತಿ ಸ್ವಾತಂತ್ರದ ಹರಣವಾಗುತ್ತಿದೆ. ಈ ಕಾಯಿದೆ ಪ್ರಕಾರ ಮತಾಂತರ ಆಗುವವರು 30 ದಿನಗಳ ಹಿಂದೆ ಘೋಷಣೆ ಮಾಡಬೇಕು ಮತ್ತು ಮತಾಂತರ ಆರೋಪ ಒಬ್ಬ ವ್ಯಕ್ತಿಯ ಮೇಲೆ ಬಂದರೆ, ಆ ವ್ಯಕ್ತಿಯೇ ನಾನು ಅಪರಾಧಿ ಅಲ್ಲ ಎಂಬುದನ್ನು ಸಾಬೀತುಪಡಿಸಬೇಕು. ಇದು ಎರಡು ಅತ್ಯಂತ ಭಯಾನಕವಾದ ಅಂಶಗಳು ಎಂದು ಅವರು ಕಟುವಾಗಿ ಟೀಕಿಸಿದರು. ಅಧ್ಯಕ್ಷತೆಯನ್ನು ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್ ವಹಿಸಿದ್ದರು. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಸ್ವಾಗತಿಸಿದರು. ಕೋಶಾಧಿಕಾರಿ ಶಶಿಧರ ಗೊಲ್ಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X