ಉಡುಪಿ : ವಿವಿಧೆಡೆ ಗಣರಾಜ್ಯೋತ್ಸವ ಆಚರಣೆ
ಅಜ್ಜರಕಾಡು ಹುತಾತ್ಮ ಸ್ಮಾರಕ : ಉಡುಪಿ ಅಜ್ಜರಕಾಡಿನಲ್ಲಿರುವ ಹುತಾತ್ಮ ಸೈನಿಕರ ಸ್ಮಾರಕ ಬಳಿ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸ್ಮಾರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಶಾಸಕ ರಘುಪತಿ ಭಟ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೆಕರ್, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲೆಯ ಮಾಜಿ ಸೈನಿಕರು ಮತ್ತಿತರರು ಉಪಸ್ಥಿತರಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ: ವಾರ್ತಾ ಸಹಾಯಕರಾದ ಬಿ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು. ಸಿಬ್ಬಂದಿ ಗಳಾದ ಸತೀಶ್ ಶೇಟ್ ಹಾಗೂ ಅಪ್ರೆಂಟಿಸ್ ಸಂದೀಪ್ ಭಾಗವಹಿಸಿದ್ದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರ) ಡಾ.ರಾಮರಾವ್ ಧ್ವಜಾರೋಹಣ ನೆರವೇರಿಸಿದರು. ಅರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಠಾ ನಾಧಿ ಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಸರಕಾರಿ ನೌಕರರ ವಸತಿ ಗೃಹ ಅಜ್ಜರಕಾಡು: ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜನಿಯರ್ ರವಿಕುಮಾರ್ ಧ್ವಜಾ ರೋಹಣ ನೆರವೇರಿಸಿದರು. ವಸತಿಗೃಹದ ನಿವಾಸಿಗಳು ಭಾಗವಹಿಸಿದ್ದರು.
ಜಿಲ್ಲಾ ಸರಕಾರಿ ನೌಕರರ ಸಂಘ : ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಧ್ವಜಾ ರೋಹಣ ನೆರವೇರಿಸಿದರು. ಖಜಾಂಜಿ ಶರೀಫ್ ರೋಣ, ಪ್ರವೀಣ್ ಕಾಮತ್ ಭಾಗವಹಿಸಿದ್ದರು.