Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗಣರಾಜ್ಯೋತ್ಸವ ಆಚರಿಸದ ಬಂಟ್ವಾಳ ಪುರಸಭೆ:...

ಗಣರಾಜ್ಯೋತ್ಸವ ಆಚರಿಸದ ಬಂಟ್ವಾಳ ಪುರಸಭೆ: ಅಧಿಕಾರಿಗಳ ವಿರುದ್ಧ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ27 Jan 2022 12:03 AM IST
share
ಗಣರಾಜ್ಯೋತ್ಸವ ಆಚರಿಸದ ಬಂಟ್ವಾಳ ಪುರಸಭೆ: ಅಧಿಕಾರಿಗಳ ವಿರುದ್ಧ ಅಸಮಾಧಾನ

ಬಂಟ್ವಾಳ, ಜ.26: ಗಣರಾಜ್ಯೋತ್ಸವ ದಿನವನ್ನು ದೇಶಾದ್ಯಂತ ಸಂಭ್ರಮ ಸಡಗರದಿಂದ ಆಚರಣೆ ಮಾಡಿದರೆ ಬಂಟ್ವಾಳ ಪುರಸಭೆ‌ಯಲ್ಲಿ ಯಾವುದೇ ಆಚರಣೆ ಇಲ್ಲದೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ. 

ಬಂಟ್ವಾಳ ಪುರಸಭೆಯಲ್ಲಿ ಇತ್ತೀಚಿನ ಕೆಲವು ಸಮಯದಿಂದ ಯಾವುದೇ ರಾಷ್ಟ್ರೀಯ ಹಬ್ಬಗಳನ್ನು ಶಿಷ್ಟಾಚಾರದಂತೆ ಆಚರಣೆ ಮಾಡದೆ ನಿರ್ಲಕ್ಷ್ಯ ಮಾಡಲಾಗುತ್ತಿರುವ ಬಗ್ಗೆ ಅರೋಪಗಳಿವೆ. 

ಬುಧವಾರ ನಡೆದ ಗಣರಾಜ್ಯೋತ್ಸವವನ್ನು ಕೂಡಾ ಶಿಷ್ಟಾಚಾರದಂತೆ ಆಚರಣೆ ಮಾಡದೆ ಸಿಬ್ಬಂದಿಯೊಬ್ಬರಲ್ಲಿ ಕಾಟಚಾರಕ್ಕೆ ಕಂಬಕ್ಕೆ ಧ್ವಜವನ್ನು ಕಟ್ಟಿ ಬಿಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೆಳಗ್ಗೆ ಪುರಸಭೆಯ ಸಿಬ್ಬಂದಿಯೊಬ್ಬರು ಧ್ವಜ ಕಂಬಕ್ಕೆ ತ್ರಿವರ್ಣ ಧ್ವಜವನ್ನು ಕಟ್ಟಿದ್ದು ಬಿಟ್ಟರೆ ಯಾವುದೇ ಸರಳ ಕಾರ್ಯಕ್ರಮ ಕೂಡಾ ನಡೆದಿಲ್ಲ. ಪುರಸಭೆಯ ಮುಖ್ಯಾಧಿಕಾರಿಯಾಗಲೀ, ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡಾ ಸ್ಥಳದಲ್ಲಿ ಇರಲಿಲ್ಲ. ಗಣರಾಜ್ಯೋತ್ಸವ ಆಚರಣೆ ನಡೆಸದ ಬಗ್ಗೆ ಮಾಹಿತಿ ಕೇಳಲು ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರಿಗೆ ಮೊಬೈಲ್ ಮೂಲಕ ಸಂಪರ್ಕಿಸಿದರೆ ಅವರು ಕರೆ ಸ್ವೀಕರಿಸದೆ ಸಂಪರ್ಕಕ್ಕೆ ಸಿಕ್ಕಿಲ್ಲ. ಇತರ ಕೆಲವು ಅಧಿಕಾರಿಗಳು ನಾವು ರಜೆಯಲ್ಲಿ ಇದ್ದೇವೆ ಎಂದು ಸಬೂಬು ನೀಡಿದ್ದಾರೆ.

ಪುರಸಭೆಯ ಅಧ್ಯಕ್ಷ ಮುಹಮ್ಮದ್ ಶರೀಫ್ ಅವರನ್ನು ಸಂಪರ್ಕಿಸಿದಾಗ, ಜ.22ರಿಂದ ಮುಖ್ಯಾಧಿಕಾರಿ ಪುರಸಭೆಯಲ್ಲಿ ಇಲ್ಲ. ಈ ಬಗ್ಗೆ ಅವರನ್ನು ಕೇಳಿದರೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಯಾವುದೋ ಕೆಲಸಕ್ಕೆ ಜಿಲ್ಲಾಧಿಕಾರಿ ನೇಮಿಸಿದ್ದಾರೆ ಎಂದು ಉತ್ತರಿಸುತ್ತಾರೆ ಎಂದು ತಿಳಿಸಿದ್ದಾರೆ. 

ಪುರಸಭೆಯಲ್ಲಿ ಮುಖ್ಯಾಧಿಕಾರಿ ಇಲ್ಲದಿದ್ದರೆ ಗಣರಾಜ್ಯೋತ್ಸವ ಆಚರಣೆಗೆ ಇತರ ಯಾವುದಾದರೂ ಅಧಿಕಾರಿಗೆ ಅವರು ಅದರ ಉಸ್ತುವಾರಿ ವಹಿಸಬೇಕಿತ್ತು. ಪುರಸಭೆಯ ಇತರ ಎಲ್ಲಾ ಅಧಿಕಾರಿಗಳ ಬಳಿ ವಿಚಾರಿಸಿದಾಗ ನಮಗೆ ಗೊತ್ತಿಲ್ಲ ಎಂದಿದ್ದಾರೆ. ಬೆಳಗ್ಗೆ ಪುರಸಭೆಯ ಸಿಬ್ಬಂದಿ ಒಬ್ಬರು ಬಂದು ಕಂಬಕ್ಕೆ ಧ್ವಜ ಕಟ್ಟಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಇದು ದೇಶಕ್ಕೆ ಮತ್ತು ದೇಶದ ಸಂವಿಧಾನಕ್ಕೆ ಮಾಡಿರುವ ಅಪಮಾನ ಎಂದು ಶರೀಫ್ ಪ್ರತಿಕ್ರಿಯಿಸಿದ್ದಾರೆ.

ಪುರಸಭೆಯ ಕೆಲವು ಸದಸ್ಯರಲ್ಲಿ ಮಾಹಿತಿ ಕೇಳಿದಾಗ ನಮಗೆ ಆಮಂತ್ರಣ ಇರಲಿಲ್ಲ. ಪುರಸಭೆಯಲ್ಲಿ ನಡೆಯುವ ಯಾವುದೇ ಕಾರ್ಯಕ್ರಮ ಶಿಷ್ಟಾಚಾರದಂತೆ ನಡೆಯುತ್ತಿಲ್ಲ. ಎಲ್ಲವೂ ಕಾಟಾಚಾರಕ್ಕೆ ಎಂಬಂತೆ ನಡೆಯುತ್ತದೆ. ಸಣ್ಣಪುಟ್ಟ ಕಾರ್ಯಕ್ರಮಗಳು ನಡೆಯದಿದ್ದರೆ ಸಮಸ್ಯೆ ಇಲ್ಲ. ಗಣರಾಜ್ಯೋತ್ಸವ ಅಂತಹ ಕಾರ್ಯಕ್ರಮವೇ ಅಧಿಕಾರಿಗಳು ಆಯೋಜಿಸುತ್ತಿಲ್ಲ ಎಂಬುದು ದೇಶಕ್ಕೆ ಮಾಡುವ ಅವಮಾನವಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸದ ಬಗ್ಗೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಕೊನೆಗೆ ಕಾರ್ಮಿಕರೇ ಸೇರಿ ಬಿರಿಯಾನಿ ತರಿಸಿ ಪೌರ ಕಾರ್ಮಿಕರ ದಿನಾಚರಣೆ ಆಚರಣೆ ಮಾಡಿದ್ದರು. ಈ ವೇಳೆ ಮುಖ್ಯಾಧಿಕಾರಿ ಬಿರಿಯಾನಿ ಸ್ವೀಕರಿಸದೆ ಹೊರಟು ಹೋಗಿದ್ದು, ಈ ವಿಷಯ ಮಾಸಿಕ ಸಭೆಯಲ್ಲಿ ಪ್ರಸ್ತಾಪ ಆದಾಗ ಸಭೆಯಲ್ಲಿಯೇ ಮುಸ್ಲಿಮರು ಮಾಡಿದ ಬಿರಿಯಾನಿ ನಾನು ತಿನ್ನುವುದಿಲ್ಲ ಎನ್ನುವ ಮೂಲಕ ಸದಸ್ಯರ ಅಸಮಾಧಾನ, ಆಕ್ರೋಶಕ್ಕೆ ಈಡಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X