ಭದ್ರಾವತಿ: ಕಾರಿಗೆ ಟಿಪ್ಪರ್ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ, ಜ.27: ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಡೈರಿಯ ಬಳಿ ಇಂದು ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ ಷಣ್ಮುಖ(39) ಹಾಗೂ ರಾಮಚಂದ್ರ(40) ಎಂಬವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಟಿಪ್ಪರ್ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಷಣ್ಮುಖ ಹಾಗೂ ರಾಮಚಂದ್ರ ಅವರು ಕೆಲಸದ ನಿಮಿತ್ತ ಭದ್ರಾವತಿಯಿಂದ ತೀರ್ಥಹಳ್ಳಿಗೆ ಕಾರಿನಲ್ಲಿ ಹೊರಟಿದ್ದರು. ಇವರು ಸಂಚರಿಸುತ್ತಿದ್ದ ಕಾರು ಮಾಚೇನಹಳ್ಳಿ ಡೈರಿಯ ಬಳಿ ತಲುಪಿದಾಗ ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಾಗುತ್ತಿದ್ದ ಟಿಪ್ಪರ್ ಲಾರಿ ಡಿವೈಡರ್ ದಾಟಿ ಬಂದು ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರೂ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಬಗ್ಗೆ ಭದ್ರಾವತಿಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






.gif)
.gif)
.gif)

