Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಫ್.ಐ.ಆರ್. ದಾಖಲಾಗಿರುವ ಬಸವರಾಜ...

ಎಫ್.ಐ.ಆರ್. ದಾಖಲಾಗಿರುವ ಬಸವರಾಜ ಹೊರಟ್ಟಿಯವರನ್ನು ಸಭಾಪತಿ ಸ್ಥಾನದಿಂದ ವಜಾಗೊಳಿಸಿ: ದಲಿತಪರ ಸಂಘಟನೆಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Jan 2022 3:03 PM IST
share
ಎಫ್.ಐ.ಆರ್. ದಾಖಲಾಗಿರುವ ಬಸವರಾಜ ಹೊರಟ್ಟಿಯವರನ್ನು ಸಭಾಪತಿ ಸ್ಥಾನದಿಂದ ವಜಾಗೊಳಿಸಿ: ದಲಿತಪರ ಸಂಘಟನೆಗಳ ಆಗ್ರಹ

ಬೆಂಗಳೂರು, ಜ.28: ಧಾರವಾಡದ ಮಹರ್ಷಿ ವಾಲ್ಮೀಕಿ ಗುರುಪೀಠಕ್ಕೆ ಸೇರಿದ್ದ ಧಾರವಾಡ ತಾಲೂಕಿನ ಮುಗದ್ ಗ್ರಾಮದ ಸರ್ವೋದಯ ಶಿಕ್ಷಣ ಟ್ರಸ್ಟಿನ ಶಾಲೆಯಲ್ಲಿ ಭಾರೀ ಅಕ್ರಮಗಳು ನಡೆಯುತ್ತಿವೆ. ಇದರ ಹಿಂದೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿದ್ದು, ಕೂಡಲೇ ಅವರನ್ನು ಸಭಾಪತಿ ಸ್ಥಾನದಿಂದ ವಜಾಗೊಳಿಸಬೇಕು ಎಂದು ದಲಿತಪರ ಸಂಘಟನೆಗಳು ಒತ್ತಾಯಿಸಿವೆ.

ನಗರದ ಪ್ರೆಸ್ ಕ್ಲಬ್ ನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕರಾದ ಮಾರಸಂದ್ರ ಮುನಿಯಪ್ಪ ಮತ್ತು ಎಂ.ಗೋಪಿನಾಥ್,  ಕರ್ನಾಟಕ ರಾಜ್ಯ ವಾಲ್ಮೀಕಿ ಮಹಾ ಪರಿಷತ್ ನ ರಾಜ್ಯಾಧ್ಯಕ್ಷ ಬಸವರಾಜ ನಾಯಕ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಎಂ.ವೆಂಕಟಸ್ವಾಮಿ, ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ ಮತ್ತಿತರರು ಸಭಾಪತಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ರಾಜ್ಯಪಾಲರ ನಂತರ ಪರಮೋಚ್ಚ ಸ್ಥಾನ ಹೊಂದಿರುವ ಹೊರಟ್ಟಿ ಅವರಿಂದ ವಿಧಾನಪರಿಷತ್ತಿನ ಗೌರವಕ್ಕೆ ಚ್ಯುತಿಯಾಗುತ್ತಿದೆ. ಸಭಾಪತಿ ಸ್ಥಾನದಲ್ಲಿರುವವರ ಮೇಲೆ ಎಫ್.ಐ.ಆರ್. ದಾಖಲಾಗಿದ್ದು, ಅವರು ಈ ಮಹತ್ವದ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆ ಕಳೆದುಕೊಂಡಿದ್ದಾರೆ. ನೈತಿಕ ಹೊಣೆ ಹೊತ್ತು ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಬೇಕು. ಇಲ್ಲವಾದಲ್ಲಿ ರಾಜ್ಯಪಾಲರು ಸಭಾಪತಿ ಸ್ಥಾನದಿಂದ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಜನವರಿ 26ರಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾ ಸಭಾದ ಧಾರವಾಡ ಜಿಲ್ಲಾ ಅಧ್ಯಕ್ಷ ಮೋಹನ ಗುಡಸಲಮನೆ, ಭರತ್ ಮಗದೂರು, ಪರಶುರಾಮ ಮತ್ತು ಇತರರು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಸವರಾಜ ಹೊರಟ್ಟಿ ಅವರು ಕಾನೂನುಬಾಹಿರವಾಗಿ ನೇಮಕಗೊಂಡ ಶಿಕ್ಷಕರುಗಳ ಮೂಲಕ ದಾಂಧಲೆ ನಡೆಸಿದ್ದಾರೆ. ಆಗ ಸ್ಥಳಕ್ಕೆ ದಾವಿಸಿ ಸಭಾಪತಿಯ ಕುಮ್ಮಕ್ಕಿನ ಮೇರೆಗೆ ಮೋಹನ ಗುಡಸಲಮನಿ ಮತ್ತು ಅವರ ಸಂಗಡಿಗರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅವರ ಕಾರನ್ನು ಸಂಪೂರ್ಣವಾಗಿ ಜಖಂಗೊಳಿಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ನೀಡಿದ ದೂರಿನನ್ವಯ ಧಾರವಾಡ ಜಿಲ್ಲಾ ಸೆಷನ್ಸ್ ಕೋರ್ಟಿನಲ್ಲಿ ಎಫ್.ಐ.ಆರ್, ದಾಖಲಾಗಿದೆ ಎಂದರು.

ಸರ್ವೋದಯ ಶಿಕ್ಷಣ ಟ್ರಸ್ಟಿನ ವಿವಾದಕ್ಕೆ ಸಂಬಂಧಿಸಿದಂತೆ, ಸಭಾಪತಿ ಅವರ ಹಸ್ತಕ್ಷೇಪದಿಂದಾಗಿ ಈಗಾಗಲೇ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿ, ಅನೇಕ ವಂಚನೆ ಮತ್ತು ಅಹಿತಕರ ಬೆಳವಣಿಗೆಗಳು ನಡೆದಿವೆ. ಆರೋಪಿ ಸ್ಥಾನದಲ್ಲಿರುವ ಬಸವರಾಜ ಹೊರಟ್ಟಿಯವರು ವಿಧಾನಪರಿಷತ್ ಸಭಾಪತಿಯಾದಂತಹ ಪ್ರಭಾವಶಾಲಿ ಸ್ಥಾನದಲ್ಲಿರುವುದರಿಂದ ನ್ಯಾಯಯುತವಾದ ತನಿಖೆ ನಡೆಯುವುದು ಅಸಂಭವವಾಗಿದೆ. ಆದ ಕಾರಣ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕರ್ ಭಾವಚಿತ್ರ  ತೆರವಿಗೆ ಖಂಡನೆ:

ರಾಯಚೂರು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರು ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ಅವರ ಭಾವ ಚಿತ್ರವನ್ನು ಕಡೆಗಣಿಸಿರುವ ಅವಮಾನಕರ ಘಟನೆ ಖಂಡನೀಯ. ರಾಜ್ಯದ ಜನತೆ ಮತ್ತು ನ್ಯಾಯಾಂಗಗಳು ತಲೆತಗ್ಗಿಸುವಂತ ಘಟನೆ ಇದಾಗಿದೆ. ಎಲ್ಲರನ್ನು ಇದು ದಿಗ್ಭ್ರಮೆಗೊಳಿಸಿದೆ ಎಂದು ಹೇಳಿದರು.

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ್‌ ನ್ಯಾಯಾಲಯದ ಸಂಕೀರ್ಣದಲ್ಲಿ ದ್ವಜೋರೋಹಣ ನೆರವೇರಿಸಬೇಕಾದ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ರವರ ಭಾವ ಚಿತ್ರವನ್ನು ತೆಗೆದಿರಿಸಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ಜಾತಿವಾದಿ ಮನಸ್ಥಿತಿಯುಳ್ಳ ವ್ಯಕ್ತಿಯ ಜಿಲ್ಲಾ ನ್ಯಾಯಾಧೀಶರ ಸ್ಥಾನದಲ್ಲಿರುವುದು ಸರಿಯಲ್ಲ. ನ್ಯಾಯಾಧೀಶರಂತಹ ಸಂವಿಧಾನಾತ್ಮಕ ಹುದ್ದೆಗೆ ಮಾತ್ರವಲ್ಲದೆ ಇಡೀ ನ್ಯಾಯಾಂಗ ವ್ಯವಸ್ಥೆಗೆ ಮತ್ತು ರಾಷ್ಟ್ರಕ್ಕೆ ಇವರು ಅಪಮಾನ ಮಾಡಿದ್ದಾರೆ. ಇದರಿಂದ ನ್ಯಾಯಾಧೀಶರಾಗಿರಲು ಅನರ್ಹರಾಗಿದ್ದಾರೆ. ಶ್ರೀಮಲ್ಲಿಕಾರ್ಜುನ ಗೌಡರ್ ಅವರನ್ನು ಸಹ ಕೂಡಲೇ ತಮ್ಮ ಸ್ಥಾನದಿಂದ ವಜಾಗೊಳಿಸಬೇಕೆಂದು ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X