ಉಡುಪಿ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ
ಉಡುಪಿ, ಜ.28: ವೇಶ್ಯಾವಾಟಿಕೆಗೆ ಸಂಬಂಧಿಸಿ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಎಸ್.ಆರ್.ಯಾತ್ರಿ ನಿವಾಸ್ ಲಾಡ್ಜ್‌ಗೆ ಜ.27ರಂದು ಮಧ್ಯಾಹ್ನ ವೇಳೆ ದಾಳಿ ನಡೆಸಿದ ಉಡುಪಿ ನಗರ ಹಾಗೂ ಮಹಿಳಾ ಠಾಣೆಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ, ಸೊತ್ತುಗಳನ್ನು ವಶಪಡಿಸಿ ಕೊಂಡಿದ್ದಾರೆ.
ಲಾಡ್ಜ್‌ನ ಕ್ಯಾಶಿಯರ್‌ಗಳಾದ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಗುರುರಾಜ್ (30), ಹೆಬ್ರಿ ಸೀತಾನದಿಯ ವಿಜಯ ಶೆಟ್ಟಿ(26) ಮತ್ತು ಗಿರಾಕಿ ಗಳಾದ ಪಶ್ಚಿಮ ಬಂಗಾಳ ಮೂಲದ ಹೇಮಂತ್ ಕುಮಾರ್ (24), ಕಟಪಾಡಿ ಇಂದಿರಾನಗರದ ಸಂದೀಪ್ ಮೊಗವೀರ(31) ಬಂಧಿತ ಆರೋಪಿಗಳು.
ಪ್ರಕರಣದ ಆರೋಪಿ ಲಾಡ್ಜ್ ಮಾಲಕ ರಮೇಶ್ ಶೆಟ್ಟಿ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ರಮೇಶ್ ಶೆಟ್ಟಿ ನಗರಸಭೆಯಿಂದ ವಹಿಸಿಕೊಂಡ ಲಾಡ್ಜ್‌ನಲ್ಲಿ ಗುರುರಾಜ್ ಮತ್ತು ವಿಜಯ ಶೆಟ್ಟಿ, ರಮೇಶ್ ಶೆಟ್ಟಿ ಜೊತೆ ಸೇರಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರೆಂದು ದೂರಲಾಗಿದೆ. ಬಂಧಿತರಿಂದ 2750ರೂ. ನಗದು ಹಾಗೂ ಐದು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ಮಹಿಳಾ ಠಾಣೆಯ ಪೊಲೀಸ್ ನಿರೀಕ್ಷಕ ಜಯಂತ್ ಎಂ. ಹಾಗೂ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆಸ ಲಾಗಿದೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.