ಉಪ್ಪಿನಂಗಡಿ: ಕಾರು ಢಿಕ್ಕಿ; ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಅಜಾಗರೂಕತೆಯ ಚಾಲನೆಯಿಂದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಅಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾ ಚಾಲಕ ಹಾಗೂ ಅದರ ಸವಾರ ಗಂಭೀರ ಗಾಯಗೊಂಡ ಘಟನೆ 34 ನೆಕ್ಕಿಲಾಡಿಯಲ್ಲಿ ಜ.28ರಂದು ನಡೆದಿದೆ.
ಘಟನೆಯಿಂದ ಅಟೋ ಚಾಲಕ ನೆಕ್ಕಿಲಾಡಿಯ ನಿವಾಸಿ, ಉಪ್ಪಿನಂಗಡಿಯ ನೇತ್ರಾವತಿ ಅಟೋ ರಿಕ್ಷಾ ಚಾಲಕ- ಮಾಲಕರ ಸಂಘದ ಉಪಾಧ್ಯಕ್ಷ ಕಲಂದರ್ ಶಾಫಿ (41) ಹಾಗೂ ಅಸ್ಲಾಂ ಮೂಲದ ಶಹಾಬುದ್ದೀನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.
Next Story





