Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಫ್‌ಎಂ ರೇನ್ ಬೋ ವಿಲೀನಕ್ಕೆ ಆಕ್ಷೇಪ: ...

ಎಫ್‌ಎಂ ರೇನ್ ಬೋ ವಿಲೀನಕ್ಕೆ ಆಕ್ಷೇಪ: ಕೇಂದ್ರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

"ಕನ್ನಡಿಗರು ಸೌಮ್ಯರು ಹಾಗೆಂದು, 'ಭಾಷಾಂತಕ'ರನ್ನು ನೋಡುತ್ತಾ ಸುಮ್ಮನೆ ಕೂರಲಾರರು"

ವಾರ್ತಾಭಾರತಿವಾರ್ತಾಭಾರತಿ28 Jan 2022 11:18 PM IST
share
ಎಫ್‌ಎಂ ರೇನ್ ಬೋ ವಿಲೀನಕ್ಕೆ ಆಕ್ಷೇಪ:  ಕೇಂದ್ರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಜ. 28: `ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, `ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ `101.3 ಎಫ್‌ಎಂ ರೇನ್‌ಬೋ ಕನ್ನಡ ಕಾಮನಬಿಲ್ಲು' ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರಕಾರ ಹೊರಟಿರುವುದು ಅಕ್ಷಮ್ಯ. ಕನ್ನಡಕ್ಕೆ ಕೊಡಲಿ ಪೆಟ್ಟು' ಎಂದು ಆಕ್ಷೇಪಿಸಿದ್ದಾರೆ.

`ರೇನ್ ಬೋ ಕನ್ನಡ ಕಾಮನಬಿಲ್ಲು' ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯಬಡಿತ, ಕನ್ನಡದ ಅಸ್ಮಿತೆ. ಆದರೆ, ಕೇಂದ್ರ ಸರಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ. ಈ ಹಿಂದೆ ಕನ್ನಡಿಗರ ಮನೆಮನದಲ್ಲಿ ತುಂಬಿದ್ದ `ಅಮೃತವರ್ಷಿಣಿ'ಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ. ಕನ್ನಡ ವಿರೋಧಿ ಕೇಂದ್ರ ಸರಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ' ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

`ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿಕಾರಿಗಳು ಕಸಾಯಿಗಳಂತೆ ಸಾವಿರಾರು ವರ್ಷಗಳ ಅಭಿಜಾತ ಭಾಷೆ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡನಾಡನ್ನು ಉದ್ಧಾರ ಮಾಡುತ್ತೇವೆಂದು ಗೆದ್ದುಹೋದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ. ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಹೌದು. ಹಾಗೆಂದು, ತಾಯಿಭಾಷೆಗೆ ಕೊಳ್ಳಿ ಇಡುತ್ತಿರುವ `ಭಾಷಾಂತಕ'ರನ್ನು ನೋಡುತ್ತಾ ಸುಮ್ಮನೆ ಕೂರಲಾರರು, ನೆನಪಿರಲಿ' ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

`ಸಂಸದರೆಲ್ಲರೂ ದನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೆ ಇಲ್ಲ. ಎಫ್‌ಎಂ ರೇನ್ ಬೋದ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ. ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ. ಆ ಆಶಯಕ್ಕೆ ಮುಕ್ಕಾಗುವುದು ಖಂಡಿತಾ ಬೇಡ. ಕನ್ನಡದ ಹಂತಕರಿಗೆ ಧಿಕ್ಕಾರ' ಎಂದು ಅವರು ಕಿಡಿಕಾರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X