ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿಗೆ ಡಾ. ಶಿವರಾಜ ವಿ. ಪಾಟೀಲ ಆಯ್ಕೆ
ಬೆಂಗಳೂರು, ಜ.28: ಕನ್ನಡ ಸಾಹಿತ್ಯ ಪರಿಷತ್ ನೀಡುವ 2021ನೇ ಸಾಲಿನ ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿಗೆ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 25 ಸಾವಿರ ರೂಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಪರಿಷತ್ತು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪ್ರಕಾಶಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ನೇ.ಭ ರಾಮಲಿಂಗಶೆಟ್ಟಿ, ಕೋಶಾಧ್ಯಕ್ಷ ಪಟೇಲ್ ಪಾಂಡು ಉಪಸ್ಥಿತರಿದ್ದರು ಎಂದು ಪ್ರಕಟನೆ ತಿಳಿಸಿದೆ.
Next Story





