ಮದ್ದೂರಿನಲ್ಲಿ ರಸ್ತೆ ಅಪಘಾತ: ಇಬ್ಬರು ಯುವಕರು ಮೃತ್ಯು

ಮಂಡ್ಯ, ಜ.29: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಬೆಸಗರಹಳ್ಳಿ ಬಳಿ ಶುಕ್ರವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.
ಮೃತರನ್ನು ಬೆಸಗರಹಳ್ಳಿ ಸಮೀಪದ ಪಣ್ಣೆದೊಡ್ಡಿ ಗ್ರಾಮದ ವಿನಯ್ (27) ಹಾಗೂ ಹರಳಹಳ್ಳಿ ಗ್ರಾಮದ ಪ್ರಸನ್ನ (29) ಎಂದು ಗುರುತಿಸಲಾಗಿದೆ.
ಯುವಕರು ಬೆಸಗರಹಳ್ಳಿ ಗ್ರಾಮದ ಮೆಡಿಕಲ್ ಸ್ಟೋರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ತಡರಾತ್ರಿ ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಬೆಸಗರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವಾಹನದ ಪತ್ತೆಗೆ ಕ್ರಮ ವಹಿಸಿದ್ದಾರೆ.
Next Story





