Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ.31ರಿಂದ ರಾಜ್ಯಾದ್ಯಂತ ನೈಟ್‍ ಕರ್ಫ್ಯೂ...

ಜ.31ರಿಂದ ರಾಜ್ಯಾದ್ಯಂತ ನೈಟ್‍ ಕರ್ಫ್ಯೂ ರದ್ದು: ಸಚಿವ ಆರ್. ಅಶೋಕ್

ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳು ಪುನರಾರಂಭ

ವಾರ್ತಾಭಾರತಿವಾರ್ತಾಭಾರತಿ29 Jan 2022 1:45 PM IST
share
ಜ.31ರಿಂದ ರಾಜ್ಯಾದ್ಯಂತ ನೈಟ್‍ ಕರ್ಫ್ಯೂ ರದ್ದು: ಸಚಿವ ಆರ್. ಅಶೋಕ್

ಬೆಂಗಳೂರು, ಜ.29: ರಾಜ್ಯಾದ್ಯಂತ ಜ.31ರಿಂದ ನೈಟ್ ಕರ್ಫ್ಯೂ ಇರುವುದಿಲ್ಲ. ಅದೇರೀತಿ ಸೋಮವಾರದಿಂದ ಬೆಂಗಳೂರಿನಲ್ಲಿ ಶಾಲೆಗಳು ಪುನಾರಂಭಗೊಳ್ಳಲಿದೆ ಎಂದು  ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಕೋವಿಡ್‌-19ರ ಸ್ಥಿತಿಗತಿಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ನಡೆಸಿ ನಂತರ ಕಂದಾಯ ಸಚಿವ ಆರ್. ಅಶೋಕ್‌  ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ದೇವಾಲಯ, ಮಸೀದಿ, ಚರ್ಚ್ ಗಳಲ್ಲಿ ಎಲ್ಲ ಧಾರ್ಮಿಕ ಸೇವೆಗಳಿಗೆ ಅವಕಾಶ ಇರುತ್ತದೆ. ಆದರೆ ಏಕಕಾಲದಲ್ಲಿ 50 ಜನರಷ್ಟೇ ಸೇರಲು ಅವಕಾಶವಿರುತ್ತದೆ. ಚಿತ್ರಮಂದಿರಗಳಲ್ಲಿ ಶೇ.50ರ ನಿಯಮ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ ಜಾತ್ರೆಗಳು, ಧರಣಿ, ಪ್ರತಿಭಟನೆಗಳಿಗೆ ನಿರ್ಬಂಧ ಮುಂದುವರಿಯಲಿದೆ. ಕಚೇರಿಗಳಲ್ಲಿ 100 ಶೇ. ಸಿಬ್ಬಂದಿಯೊಂದಿಗೆ ಕಾರ್ಯಾಚರಿಸಲು ಅವಕಾಶ ಇರುತ್ತದೆ. ಸ್ವಿಮ್ಮಿಂಗ್ ಫುಲ್, ಜಿಮ್ ಗಳಲ್ಲಿ ಶೇ.50ರಷ್ಟು ಅವಕಾಶ ನೀಡಲಾಗಿದೆ. ಹೋಟೆಲ್, ಪಬ್‍, ರೆಸ್ಟೋರೆಂಟ್ ಗಳು ತೆರೆಯಲು ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದರು.

ತೆರೆದ ಪ್ರದೇಶದಲ್ಲಿ ನಡೆಯುವ ಮದುವೆ ಸಮಾರಂಭದಲ್ಲಿ 300 ಜನರು ಹಾಗೂ ಒಳಾಂಗಣದಲ್ಲಿ ನಡೆಯುವ ಮದುವೆಗಳಲ್ಲಿ 200 ಜನರು ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಅದೇರೀತಿ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ.2ಕ್ಕೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಕೋವಿಡ್ 19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದವರು ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಎಲ್ಲಾ ತರಗತಿಗಳು ಪುನರಾರಂಭ: ಬಿ.ಸಿ.ನಾಗೇಶ್

ಬೆಂಗಳೂರಿನಲ್ಲಿ ಸೋಮವಾರದಿಂದ ಶಾಲೆಗಳನ್ನು ಪುನರಾರಂಭಿಸಲು‌ ನಿರ್ಧರಿಸಲಾಗಿದೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಲ್ಲ ತರಗತಿಗಳು ಸೋಮವಾರದಿಂದ ಕಾರ್ಯಾ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಸಭೆಯ ಮುಖ್ಯಾಂಶ 

►ಜ.31ರಿಂದ ರಾತ್ರಿ ಕರ್ಫ್ಯೂ ರದ್ದು

►ಬೆಂಗಳೂರು ನಗರದಲ್ಲಿ ಜ.31ರಿಂದ ಶಾಲೆ, ಕಾಲೇಜುಗಳನ್ನು ಪುನಾರರಂಭ.

►ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ತಮ್ಮ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರೊಂದಿಗೆ ಕಾರ್ಯಾಚರಣೆ

►ಪಬ್ ಗಳು, ಕ್ಲಬ್ ಗಳು, ರೆಸ್ಟೋರೆಂಟ್ ಗಳು, ಬಾರ್, ಹೋಟೆಲ್ ಗಳಲ್ಲಿ ಶೇ.50 ಆಸನ ಸಾಮರ್ಥ್ಯದಡಿ ಕಾರ್ಯ ನಿರ್ವಹಿಸುವ ನಿರ್ಬಂಧ ತೆರವು.

►ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್ ಗಳು, ರಂಗಮಂದಿರಗಳು, ಆಡಿಟೋರಿಯಂ ಗಳು ಮತ್ತು ಇತರ ಸ್ಥಳಗಳಲ್ಲಿ ಶೇ. 50ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅವಕಾಶ.

►ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಅವಕಾಶ.

►ಸರ್ಕಾರದ ಸಚಿವಾಲಯದಲ್ಲಿ ಶೇ.50ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದನ್ನು ರದ್ದು ಪಡಿಸಿ ಶೇ.ನೂರರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ಅವಕಾಶ

►ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ. ಶೇ.50ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ

►ಯಾವುದೇ ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ರ್ಯಾಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.

►ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ.50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.

►ಸ್ಪೋಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.

►ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು.

►ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧಾರ

►ಕೋವಿಡ್ ಹೊರತುಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X