Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂರು ತಿಂಗಳಲ್ಲಿ ಬ್ಯಾಕ್‍ಲಾಗ್ ಹುದ್ದೆಗಳ...

ಮೂರು ತಿಂಗಳಲ್ಲಿ ಬ್ಯಾಕ್‍ಲಾಗ್ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಗೋವಿಂದ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ29 Jan 2022 5:19 PM IST
share
ಮೂರು ತಿಂಗಳಲ್ಲಿ ಬ್ಯಾಕ್‍ಲಾಗ್ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು, ಜ. 29: `ರಾಜ್ಯ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವ ವಿದ್ಯಾಲಯಗಳು ಹಾಗೂ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‍ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕು' ಎಂದು `ಬ್ಯಾಕ್‍ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕಗೊಂಡಿರುವ ಸಂಪುಟ ಉಪಸಮಿತಿ ನಿರ್ದೇಶನ ನೀಡಿದೆ.

ಶನಿವಾರ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಉಪ ಸಮಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂ.ಟಿ.ಬಿ.ನಾಗರಾಜ್, ಮೀನುಗಾರಿಕೆ ಸಚಿವ ಎಸ್.ಅಂಗಾರ, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಆರು ಮಂದಿ ಸದಸ್ಯರಿದ್ದಾರೆ. 

ಇಲಾಖಾವಾರು, ನಿಗಮವಾರು, ವಿಶ್ವವಿದ್ಯಾಲಯವಾರು ಬ್ಯಾಕ್‍ಲಾಗ್ ಹುದ್ದೆಗಳ ನೇಮಕಾತಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಮಿತಿಯು ವಿವರವಾಗಿ ಪರಿಶೀಲಿಸಿತು. ರಾಜ್ಯ ಸರಕಾರದ ಸರಕಾರಿ ಕಾಲೇಜುಗಳಲ್ಲಿ, ಅನುದಾನಿತ ಕಾಲೇಜುಗಳಲ್ಲಿ, ಅನುದಾನಿತ ತಾಂತ್ರಿಕ ಕಾಲೇಜುಗಳಲ್ಲಿ ಮತ್ತು ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು. 

ಈ ಎಲ್ಲ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಸೂಚಿಸಿತು. ಎಲ್ಲ ಇಲಾಖೆಗಳ ಮುಖ್ಯಸ್ಥರು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕೈಗೊಳ್ಳಬೇಕಾದ ನೇಮಕಾತಿಗಳನ್ನು ಒಂದು ವಾರದಲ್ಲಿ ಅಧಿಸೂಚಿಸಿ ಮುಂದಿನ ಆರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಬೇಕೆಂದು ಲೋಕಸೇವಾ ಆಯೋಗವನ್ನು ಕೋರಲು ಕ್ರಮಕೈಗೊಳ್ಳಬೇಕೆಂದು ಎಲ್ಲ ಇಲಾಖಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X