Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮ ಒನ್: ಫೆಬ್ರವರಿ ಅಂತ್ಯದೊಳಗೆ...

ಗ್ರಾಮ ಒನ್: ಫೆಬ್ರವರಿ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Jan 2022 6:52 PM IST
share
ಗ್ರಾಮ ಒನ್: ಫೆಬ್ರವರಿ ಅಂತ್ಯದೊಳಗೆ ರಾಜ್ಯಾದ್ಯಂತ  ವಿಸ್ತರಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

ಬೆಂಗಳೂರು,ಜ. 29 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’  ಜನವರಿ 26 ರಂದು  ಲೋಕಾರ್ಪಣೆಗೊಂಡಿದ್ದು,  ಫೆಬ್ರವರಿ ಅಂತ್ಯದೊಳಗೆ ಗ್ರಾಮ ಒನ್ ರಾಜ್ಯದಾದ್ಯಂತ ವಿಸ್ತರಿಸಲು ಅಗತ್ಯ    ಕ್ರಮಗಳನ್ನು ಕೈಗೊಳ್ಳಲು   ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. 

ಈ ಕುರಿತು  ಇ-ಆಡಳಿತ, ಆರ್ ಡಿ ಪಿ ಆರ್, ಕಂದಾಯ ಇಲಾಖೆಗಳ ಅಧಿಕಾರಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರಮುಖೇನ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಗ್ರಾಮ ಒನ್ ಪರಿಶೀಲನೆಗೆ ವಾರಕ್ಕೊಮ್ಮೆ ಖುದ್ದು  ಗ್ರಾಮ ಒನ್ ಆಪರೇಟರ್ ಗಳು, ತಹಶೀಲ್ದಾರರು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 

ಗ್ರಾಮ ಒನ್ ಅರ್ಜಿಗಳ ಶೀಘ್ರ ವಿಲೇವಾರಿ:

ಗ್ರಾಮ ಒನ್ ನಿಂದ ಸ್ವೀಕರಿಸಿದ ಅರ್ಜಿಗಳ ಶೀಘ್ರ ವಿಲೇವಾರಿ ,  ಅರ್ಜಿಗಳ ತಿರಸ್ಕಾರಕ್ಕೆ  ಕಾರಣಗಳನ್ನು ಎಲ್ಲಾ ಇಲಾಖೆಗಳ ಡ್ರಾಪ್ ಡೌನ್ ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು.  ಜಿಲ್ಲಾಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ತಿರಸ್ಕೃತ ಅರ್ಜಿಗಳನ್ನು ಪರಿಶೀಲಿಸಿ, ತಪ್ಪಾಗಿ ತಿರಸ್ಕೃತ ಮಾಡುತ್ತಿರುವ ಅಧಿಕಾರಿ/ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ವಹಿಸಬೇಕು ಹಾಗು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ನಡೆಯುವ ಎಂಪಿಕ್/ ಕೆಡಿಪಿ ಸಭೆಯಲ್ಲಿ ಪರಿಶೀಲಿಸಬೇಕು ಎಂದು ಸೂಚಿಸಿದ್ದಾರೆ.

ಗ್ರಾಮ ಒನ್ ಆಪರೇಟರ್ ಗಳಿಗೆ ಅನ್ವಯಿಸುವ ನೀತಿಸಂಹಿತೆಯ ಕಡ್ಡಾಯ ಪಾಲನೆ :

ಎಲ್ಲಾ ಗ್ರಾಮ ಒನ್ ಆಪರೇಟರ್ ಗಳಿಗೆ ಅನ್ವಯಿಸುವಂತೆ ಇ-ಆಡಳಿತ ಇಲಾಖೆಯಿಂದ ನೀತಿ ಸಂಹಿತೆ ಪ್ರಕಟಿಸಿ, ಇದರ ಕಡ್ಡಾಯ ಪಾಲನೆಯನ್ನು ಜಿಲ್ಲಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ತಾಂತ್ರಿಕ, ಆಡಳಿತಾತ್ಮಕ ಮತ್ತು ಕಾನೂನು ಸಮಸ್ಯೆಗಳ ಬಗ್ಗೆ ಗ್ರಾಮ ಒನ್ ಆಪರೇಟರ್ ಗಳಿಗೆ ತರಬೇತಿ ನೀಡಬೇಕು.ಸೇವೆಗಳನ್ನು ವಿತರಿಸುವ ಆಡಳಿತಾತ್ಮಕ ಕಾರ್ಯವಿಧಾನ, ಕಾನೂನು ಪರಂತುಕಗಳ ತಿಳುವಳಿಕೆ  ಇರಬೇಕು. ಇದರಿಂದ ಗ್ರಾಮ ಒನ್ ಆಪರೇಟರ್ ಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ ಅಲ್ಲದೇ ಗ್ರಾಮಒನ್ ಹೆಚ್ಚು ಜನಪ್ರಿಯ ಮತ್ತು ಯಶಸ್ವಿಯಾಗುತ್ತದೆ ಎಂದು ತಿಳಿಸಿದ್ದಾರೆ. 

ಗ್ರಾಮ ಒನ್ ಆಪರೇಟರ್ ಗಳಿಗೆ ತರಬೇತಿ:

ಗ್ರಾಮ ಒನ್ ಆಪರೇಟರ್ ಗಳಿಗೆ ಕಾಲಕಾಲಕ್ಕೆ ತರಬೇತಿ ಆಯೋಜಿಸಿ, ಅವರ ಪ್ರಾವೀಣ್ಯತೆಯನ್ನು ನಿಯಮಿತವಾಗಿ ಪರೀಕ್ಷಿಸಬೇಕು. ಅಸಮರ್ಥ ಆಪರೇಟರ್ ಗಳ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ಗ್ರಾಮ ಒನ್ ಅನುಷ್ಠಾನಕ್ಕಾಗಿ ಇ-ಆಡಳಿತ ಸಭೆ :

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇ-ಆಡಳಿತ ಇಲಾಖೆ ಕನಿಷ್ಠ ಮುಂದಿನ 2 ತಿಂಗಳವರೆಗೆ ಪ್ರತಿ ವಾರ ಸಭೆಯನ್ನು ಆಯೋಜಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X