ವಿಕಲ ಚೇತನ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಎಎಸ್ಐ ನಾರಾಯಣ್ ಅಮಾನತು

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಎಎಸ್ಐ ನಾರಾಯಣ್ ಅಮಾನತು ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ವಾಹನಗಳ ಟೋಯಿಂಗ್ ಮಾಡುತ್ತಿದ್ದಾಗ ಕಲ್ಲು ಹೊಡೆದರು ಎಂದು ಆರೋಪಿಸಿ ವಿಕಲಚೇತನ ಮಹಿಳೆಯೊಬ್ಬರ ಮೇಲೆ ಹಲಸೂರು ಗೇಟ್ ಸಂಚಾರಿ ಠಾಣೆಯ ಎಎಸ್‌ಐ ನಾರಾಯಣ್ ವಿಕಲ ಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು.
ಈ ಕುರಿತಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಎಎಸ್ಐ ನಾರಾಯಣ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಇನ್ನು ಘಟನೆಗೆ ಸಂಬಂಧಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ತನಿಖೆಗೆ ಸೂಚಿಸಿದ್ದರು.
ಇದನ್ನೂ ಓದಿ: ವಿಕಲ ಚೇತನ ಮಹಿಳೆ ಮೇಲೆ ಎಎಸ್ಐ ಹಲ್ಲೆ ಪ್ರಕರಣ: ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ
Next Story







