ಯಾದಗಿರಿ: ಬಾಲಕಿಯ ಅತ್ಯಾಚಾರಕ್ಕೆ ಯತ್ನ ಪ್ರಕರಣ; ಆರೋಪಿ ವೃದ್ಧನ ಬಂಧನ

ಸಾಂದರ್ಭಿಕ ಚಿತ್ರ
ಯಾದಗಿರಿ: 7 ವರ್ಷದ ಬಾಲಕಿ ಮೇಲೆ ವೃದ್ಧನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 27 ರಂದು ಜಿಲ್ಲೆಯ ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು, ಜ.29 ರಂದು ಸಂತ್ರಸ್ತೆ ತಾಯಿ ಯಾದಗಿರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
'ತಾಯಿ ತನ್ನ ಇಬ್ಬರು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಹತ್ತಿ ಬಿಡಿಸುವ ಕೂಲಿ ಕೆಲಸಕ್ಕೆ ತಾಯಿ ತೆರಳಿದ್ದಾಗ 68 ವರ್ಷದ ವೃದ್ಧ ಬಾಲಕಿ ಮೇಲೆ ಅತ್ಯಾಚಾರಕ್ಕೆ ಪ್ರಯತ್ನ ಮಾಡಿದ್ದಾನೆ' ಎಂದು ಆರೋಪಿಸಲಾಗಿದೆ.
'ಬಾಲಕಿಯ ತಮ್ಮನಿಗೆ ಕತ್ತು ಹಿಸಕಿ ಕೊಲೆ ಮಾಡುತ್ತೇನೆ ಎಂದು ಜೀವ ಬೆದರಿಕೆ ಹಾಕಿದ್ದಾನೆ. ನಂತರ ಬಾಲಕಿಯ ಮೇಲೆ ದೌರ್ಜನ್ಯ ಎಸೆಗಲು ಮುಂದಾದಾಗ ಅಕ್ಕಪಕ್ಕದವರು ಚೀರಾಟ ಕೇಳಿ ವೃದ್ಧನಿಗೆ ಬೈದು ಬುದ್ದಿವಾದ ಹೇಳಿದ್ದಾರೆ' ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಮಹಿಳಾ ಪೊಲೀಸ್ ಯಾದಗಿರಿಯಲ್ಲಿ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನನ್ನು ವಶಕ್ಕೆ ಪಡೆಯಲಾಗಿದೆ.
- ಡಾ. C. B ವೇದಮೂರ್ತಿ IPS, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಯಾದಗಿರಿ ಜಿಲ್ಲೆ







