Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅವಿಭಜಿತ ದ.ಕ ಜಿಲ್ಲೆಯಲ್ಲಿ 1400 ಕಿಂಡಿ...

ಅವಿಭಜಿತ ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ: ಸಚಿವ ಮಾಧುಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 Jan 2022 5:59 PM IST
share
ಅವಿಭಜಿತ ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ: ಸಚಿವ ಮಾಧುಸ್ವಾಮಿ

ಉಡುಪಿ, ಜ.30: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 1400 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು, ಅದಕ್ಕಾಗಿ ಈ ವರ್ಷ 500 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿ ಕಾರ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಹೆಬ್ರಿ ತಾಲೂಕಿನ ಶಿವಪುರ ಗ್ರಾಪಂ ವ್ಯಾಪ್ತಿಯಲ್ಲಿ 5.60ಕೋಟಿ ರೂ. ವೆಚ್ಚ ದಲ್ಲಿ ನಿರ್ಮಿಸಲಾದ ನಾಲ್ಕು ಕಿಂಡಿ ಅಣೆಕಟ್ಟುಗಳ ಕಾಮಗಾರಿಗಳನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು. ಈ ಎರಡು ಜಿಲ್ಲೆಗಳಲ್ಲಿ ಹರಿದು ಸಮುದ್ರ ಸೇರುವ ನೀರನ್ನು ತಡೆದು ಕೃಷಿ, ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲು ಅನುಕೂಲವಾಗುವಂತೆ ಪಶ್ಚಿಮ ವಾಹಿನಿ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದ್ದು, 1400 ಕಿಂಡಿ ಅಣೆಕಟ್ಟು ಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಇದರಿಂದ ಈ ಭಾಗದಲ್ಲಿ ಅಂತ ರ್ಜಲ ವೃದ್ಧಿಯ ಜೊತೆಗೆ, ಮಣ್ಣಿನ ಫಲವತ್ತತೆ ಕೂಡ ವೃದ್ಧಿಯಾಗುತ್ತದೆ. ರಾಜ್ಯದಲ್ಲಿ ನೀರು ಹರಿಯುವ ಹಳ್ಳಗಳಲ್ಲಿ ಶೇಖರಣೆಯಾಗುವ ಹೂಳು ತೆಗೆಯಲೂ ಕೂಡ ಯೋಜನೆ ರೂಪಿಸಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾತನಾಡಿ, ಈ ಭಾಗದಲ್ಲಿ ಅಂರ್ತಜಲ ವೃದ್ದಿಗೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುತ್ತಿದ್ದು, 2018ರಿಂದ 2023ರ ಅವಧಿಯೊಳಗೆ 100 ಕಿಂಡಿ ಅಣೆಕಟ್ಟು ನಿರ್ಮಿಸುವ ಯೋಜನೆಯಿದೆ ಎಂದು ತಿಳಿಸಿದರು.

ಡೀಮ್ಡ್ ಫಾರೆಸ್ಟ್‌ನಿಂದ ಈ ಭಾಗದಲ್ಲಿ ಅಭಿವೃದ್ದಿ ಕುಂಠಿತವಾಗಿದ್ದು, ಪ್ರಸ್ತುತ ಸರಕಾರ ಡೀಮ್ಡ್ ಫಾರೆಸ್ಟ್‌ನಿಂದ ಭೂಮಿಯನ್ನು ಕೈಬಿಡುವ ಕುರಿತಂತೆ ಸುಪ್ರೀಂ ಕೋಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಈ ಬಗ್ಗೆ ಶೀಘ್ರದಲ್ಲಿ ಸರಕಾರದ ಸುತ್ತೋಲೆ ಹೊರಡಿಸಲಿದ್ದು, ಈ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಅವರು ತಿಳಿಸಿದರು.

ಶಿವಪುರ ಗ್ರಾಮದ ದೇವಸ್ಥಾನಬೆಟ್ಟುನಲ್ಲಿ 150 ಲಕ್ಷ ರೂ, ಪುತ್ತಿಬೆಟ್ಟುನಲ್ಲಿ 150 ಲಕ್ಷ ರೂ., ಮುಕ್ಕಾಣಿ ಗೋನುಮಾರುನಲ್ಲಿ 155 ಲಕ್ಷ ರೂ., ಕುಂಟೆಬೆಟ್ಟು ನಲ್ಲಿ 105 ಲಕ್ಷ ರೂ. ಸೇರಿದಂತೆ ಒಟ್ಟು 560 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 4 ಕಿಂಡಿ ಅಣೆಕಟ್ಟುಗಳ ಕಾಮಗಾರಿಗಳನ್ನು ಸಚಿವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಿವಪುರ ಗ್ರಾಪಂ ಅಧ್ಯಕ್ಷ ಶೇಖರ್ ಶೆಟ್ಟಿ, ವರಂಗ ಗ್ರಾಪಂ ಅಧ್ಯಕ್ಷೆ ಉಷಾ ಹೆಬ್ಬಾರ್, ಸಣ್ಣ ನೀರಾವರಿ ಇಲಾಖೆ ಮುಖ್ಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಮೆಸ್ಕಾಂನ ನಿರ್ದೇಶಕ ದಿನೇಶ್ ಪೈ ಮೊದಲಾದವರು ಉಪಸ್ಥಿತರಿದ್ದರು.

ಡೀಮ್ಡ್ ಫಾರೆಸ್ಟ್: ಅಫಿಡವಿಟ್ ಸಲ್ಲಿಕೆ

ಕರಾವಳಿ ಭಾಗದ ಡೀಮ್ಡ್ ಫಾರೆಸ್ಟ್ ಸಮಸ್ಯೆಗೆ ಸಂಬಂದಿಸಿದಂತೆ ಈಗಾಗಲೇ ರಾಜ್ಯದಲ್ಲಿ 7.70 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಮುಂದೆ ಈ ಭೂಮಿಯನ್ನು ಅರ್ಹ ಭೂರಹಿತರಿಗೆ ನೀಡಲಾಗುವುದು. ಈಗಾಗಲೇ ಅರಣ್ಯ ವ್ಯಾಪ್ತಿಯಲ್ಲಿನ ಸಣ್ಣ ಹಿಡುವಳಿದಾರರು ಮತ್ತು ಮನೆ ಕಟ್ಟಿಕೊಂಡಿರುವವರು ಎದುರಿಸುತ್ತಿರುವ ಡೀಮ್ಡ್ ಅರಣ್ಯದ ಸಮಸ್ಯೆ ಶೀಘ್ರ ದಲ್ಲಿ ಬಗೆಹರಿಯಲಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X