ಆಸ್ಟ್ರೇಲಿಯನ್ ಓಪನ್: ದಾಖಲೆಯ 21ನೇ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಜಯಿಸಿದ ರಫೆಲ್ ನಡಾಲ್
ಫೈನಲ್‌ನಲ್ಲಿ ರಶ್ಯದ ಮೆಡ್ವೆಡೆವ್ ವಿರುದ್ಧ ರೋಚಕ ಜಯ

ಮೆಲ್ಬೋರ್ನ್, ಜ.31: ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ರಶ್ಯದ ಡೇನಿಯಲ್ ಮೆಡ್ವೆಡೆವ್ ವಿರುದ್ಧ 3-2 ಸೆಟ್‌ಗಳ ಅಂತರದಿಂದ ಜಯ ಸಾಧಿಸಿರುವ ಸ್ಪೇನ್‌ನ ಆಟಗಾರ ರಫೆಲ್ ನಡಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದರು. ಈ ಮೂಲಕ ವೃತ್ತಿಬದುಕಿನಲ್ಲಿ 21ನೇ ಬಾರಿ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಜಯಿಸಿ ನೂತನ ದಾಖಲೆ ನಿರ್ಮಿಸಿದರು.
ತಲಾ 20 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಜಯಿಸಿರುವ ರೋಜರ್ ಫೆಡರರ್ ಹಾಗೂ ನೊವಾಕ್ ಜೊಕೊವಿಕ್‌ರನ್ನು ನಡಾಲ್ ಹಿಂದಿಕ್ಕಿದರು.
ರವಿವಾರ 5 ಗಂಟೆ, 24 ನಿಮಿಷಗಳ ಕಾಲ ನಡೆದ ಫೈನಲ್ ಹಣಾಹಣಿಯಲ್ಲಿ ನಡಾಲ್ ಅವರು ಮೆಡ್ವೆಡೆವ್ ರನ್ನು 2-6, 6-7(5), 6-4, 6-4, 7-5 ಸೆಟ್‌ಗಳ ಅಂತರದಿಂದ ಮಣಿಸಿದರು. ಈ ಮೂಲಕ ಎರಡನೇ ಬಾರಿ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಗೆದ್ದುಕೊಂಡರು.
Next Story