ನಂಜನಗೂಡು: ಸ್ಕೂಟರ್ ಗೆ ಬಸ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಮೈಸೂರು,ಜ.30: ನಂಜನಗೂಡು ತಾಲೂಕು ಚಿಕ್ಕಯ್ಯನಛತ್ರ ಗ್ರಾಮದ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದ ಬಳಿ ನಂಜನಗೂಡಿನಿಂದ ಬರುತ್ತಿದ್ದ ಸಾರಿಗೆ ಬಸ್ಸು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡು ಮೈಸೂರು ಊಟಿ ರಸ್ತೆ ಚಿಕ್ಕಯ್ಯನ ಛತ್ರ ಗ್ರಾಮದ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದ ಬಳಿ ನಡೆದಿದೆ.
ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ನಂದಿಗುಂದ ಗ್ರಾಮದ ಸುರೇಶ ಎಂಬವರೇ ಮೃತರು. ಚಿಕ್ಕಯ್ಯನಛತ್ರ ನಾಡಕಚೇರಿಗೆ ಬಂದು ನಂತರ ಊರಿಗೆ ವಾಪಸಾಗುವಾಗ ದೇವಾಲಯದ ಬಳಿ ನಂಜಗೂಡು ಕಡೆಯಿಂದ ಬಂದ ಸಾರಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸುದ್ದಿ ತಿಳಿದ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಹಿರಿಯ ಅಧಿಕಾರಿಗಳು ಹಾಗೂ ಸಂಚಾರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





