ನೂತನ ಉಡುಪಿ ಹೆಚ್ಚುವರಿ ಎಸ್ಪಿಯಾಗಿ ಎಸ್.ಟಿ. ಸಿದ್ಧಲಿಂಗಪ್ಪ
ಉಡುಪಿ, ಜ.30: ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಎಸ್.ಟಿ.ಸಿದ್ಧಲಿಂಗಪ್ಪ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
2017ರ ಸೆಪ್ಟೆಂಬರ್‌ನಿಂದ ನಾಲ್ಕು ವರ್ಷಗಳ ಕಾಲ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಚಂದ್ರ ಅವರ್ನು ದ.ಕ.ಜಿಲ್ಲಾ ಹೆಚ್ಚುವರಿ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಈ ಹಿಂದೆ ಎಸ್.ಟಿ.ಸಿದ್ಧಲಿಂಗಪ್ಪ ಅವರನ್ನು ದ.ಕ. ಜಿಲ್ಲಾ ಹೆಚ್ಚುವರಿ ಎಸ್ಪಿ ಯಾಗಿ ಸರಕಾರ ವರ್ಗಾವಣೆಗೊಳಿಸಿತ್ತು. ಆದರೆ ಅವರು ಅಧಿಕಾರ ಸ್ವೀಕರಿಸಿ ರಲಿಲ್ಲ. ಹಾಗಾಗಿ ಅವರ ಸ್ಥಾನಕ್ಕೆ ಕುಮಾರಚಂದ್ರ ಅವರನ್ನು ವರ್ಗಾವಣೆ ಗೊಳಿಸಿ, ಉಡುಪಿಯಲ್ಲಿ ತೆರವಾದ ಸ್ಥಾನಕ್ಕೆ ಎಸ್.ಟಿ.ಸಿದ್ಧಲಿಂಗಪ್ಪ ಅವರನ್ನು ನಿಯೋಜಿಸಲಾಗಿದೆ.
Next Story





