Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಾಂಧೀಜಿ ತತ್ವ-ಸಿದ್ಧಾಂತಗಳನ್ನು...

ಗಾಂಧೀಜಿ ತತ್ವ-ಸಿದ್ಧಾಂತಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳೋಣ: ಸಿದ್ಧರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ30 Jan 2022 9:29 PM IST
share
ಗಾಂಧೀಜಿ ತತ್ವ-ಸಿದ್ಧಾಂತಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳೋಣ: ಸಿದ್ಧರಾಮಯ್ಯ

ಬೆಂಗಳೂರು, ಜ. 30: `ಮತಾಂಧತೆಯ ವಿರುದ್ಧ ಮನುಕುಲದ ಒಳಿತಿಗಾಗಿ ಶ್ರಮಿಸುತ್ತಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಮತಾಂಧನೊಬ್ಬ ಕೊಂದು ಹಾಕಿದ. ಆಗಿನ ಬ್ರಿಟಿಷ್ ಅಧಿಕಾರಿಯೇ ಗಾಂಧಿ ಅವರನ್ನು, `ಆರ್ಮಿ ಆಫ್ ಪೀಸ್' ಎಂದು ಕರೆದಿದ್ದರು. ಹುತಾತ್ಮ ಮಹಾತ್ಮ ಗಾಂಧಿ ಅವರ ವಿಚಾರಧಾರೆಗಳು ಹಿಂದೆಂದಿಗಿಂತ ಇಂದು ಹೆಚ್ಚು ಅಗತ್ಯವಾಗಿದ್ದು ಗಾಂಧಿ ಅವರ ಬದುಕಿನ ಹೋರಾಟ ಮತ್ತು ಸಂದೇಶವೇ ನಮಗೆಲ್ಲರಿಗೂ ಸ್ಫೂರ್ತಿ ಆಗಬೇಕು' ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಇಂದಿಲ್ಲಿ ಪ್ರತಿಪಾದಿಸಿದ್ದಾರೆ.

ರವಿವಾರ ಹುತಾತ್ಮರ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, `ಆತ್ಮಬಲ ಗಾಂಧಿ ಅವರಿಗೆ ಹೆಚ್ಚಾಗಿತ್ತು. ಗಾಂಧಿ ಅವರ ವಿಚಾರಗಳಿಂದ ಪ್ರಭಾವಿತರಾದ ಯುವಕರು ನೀವು ನೂರು ವರ್ಷ ಬದುಕಬೇಕೆಂದು ಹಾರೈಸಿದರೆ, ಇಲ್ಲ ನಾನು ನೂರಾ ಇಪ್ಪತ್ತು ವರ್ಷ ಬದುಕುತ್ತೇನೆ, ನೀವು ನನ್ನ ಆಯಸ್ಸನ್ನು ಕಡಿಮೆ ಮಾಡಿದ್ದೀರಿ ಎಂದು ಯುವಕರಿಗೆ ಹೇಳುತ್ತಿದ್ದರು. ಆ ಮಟ್ಟದ ಆತ್ಮಬಲ ಗಾಂಧಿ ಅವರಲ್ಲಿತ್ತು. ಅವರು ಕೊಲೆ ಆಗುವ ವೇಳೆಯಲ್ಲೂ ಆರೋಗ್ಯ ತುಂಬಾ ಚೆನ್ನಾಗಿತ್ತು. ಅವರು ಇಚ್ಚಿಸಿದಷ್ಟು ವರ್ಷ ಬದುಕುವ ಚೈತನ್ಯ ಮತ್ತು ಆತ್ಮಬಲದ ಜತೆಗೆ ಆರೋಗ್ಯವನ್ನೂ ಹೊಂದಿದ್ದರು' ಎಂದು ಸ್ಮರಿಸಿದರು.

`ಮಹಾತ್ಮ ಗಾಂಧೀಜಿಯವರು ಹುತಾತ್ಮರಾದರೂ ಅವರ ವಿಚಾರಧಾರೆಗಳು ಇಂದಿಗೂ ನಮ್ಮೊಂದಿಗಿವೆ. ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಹೋರಾಟವನ್ನು ಮುನ್ನಡೆಸಿದ ಗಾಂಧಿ ಅವರು ಸ್ವಾತಂತ್ರ್ಯ ಸಿಕ್ಕ ಐದಾರು ತಿಂಗಳಲ್ಲೇ ತಾವೇ ದೊರಕಿಸಿಕೊಟ್ಟ ಸ್ವಾತಂತ್ರ್ಯದ ಮಣ್ಣಿನಲ್ಲೇ ಕೊಲೆ ಆಗಿ ಹುತಾತ್ಮರಾದರು. ಹುತಾತ್ಮ ಮಹಾತ್ಮ ಅವರು ಇಂದು ನಮ್ಮ ಜತೆಗೆ ಇಲ್ಲದಿರಬಹುದು. ಆದರೆ, ಅವರ ವಿಚಾರಗಳು ಮತ್ತು ಅವರ ಬದುಕಿನ ಸಂದೇಶಗಳು ನಮ್ಮ ಜತೆಗೆ ಇವೆ. ಅವರು ಗಾಂಧಿಯನ್ನು ಕೊಂದರೇ ಹೊರತು ಅವರ ವಿಚಾರಗಳನ್ನು ಕೊಲ್ಲಲು ಸಾಧ್ಯವಾಗಿಲ್ಲ. ಇಡೀ ವಿಶ್ವ ಗೌರವಿಸುವ ವ್ಯಕ್ತಿ ಮತ್ತು ವ್ಯಕ್ತಿತ್ವ ಗಾಂಧಿ ಅವರದ್ದು' ಎಂದು ಸಿದ್ದರಾಮಯ್ಯ ಬಣ್ಣಿಸಿದರು.

`ದೇಶ ವಿಭಜನೆಯ ಸಂದರ್ಭದಲ್ಲಿ ಗಾಂಧಿ ಅವರು ನಿರ್ವಹಿಸಿದ ಪಾತ್ರವನ್ನು ಬೇರೆ ಯಾರಿಂದಲೂ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ವಿಭಜನೆ ಸಂದರ್ಭದಲ್ಲಿ ನಡೆದ ಕೋಮುಗಲಭೆಗಳು, ಹಿಂಸೆ ಮತ್ತು ಕ್ರೌರ್ಯದ ಘಟನೆಗಳನ್ನು ನಾನು ಓದಿದ್ದೇನೆ. ಆ ಘಟನೆಗಳನ್ನು ನೆನಪಿಸಿಕೊಂಡರೆ ಈಗಲೂ ಮೈನಡುಗುತ್ತದೆ. ಲಾಹೋರ್, ದಿಲ್ಲಿ, ಪಶ್ಚಿಮಬಂಗಾಳ ಮುಂತಾದ ಕಡೆಗಳಲ್ಲಿ ನಡೆಯುತ್ತಿದ್ದ ಭೀಕರ ಕೋಮುಗಲಭೆಗಳ ಸಂದರ್ಭದಲ್ಲಿ ಜನರ ಬಳಿಗೆ ಹೋಗಿ ಅವರಿಗೆ ಸಾಂತ್ವನ ಹೇಳಿ, ಸಮಾಧಾನಪಡಿಸಿ ಕೋಮುಗಲಭೆಗಳನ್ನು ನಿಲ್ಲಿಸಿದರು' ಎಂದು ಸಿದ್ದರಾಮಯ್ಯ ನೆನಪು ಮಾಡಿಕೊಂಡರು.

`ಈ ಕೆಲಸ ಮಾಡಲು ಸಾಧ್ಯ ಇದ್ದದ್ದು ಮಹಾತ್ಮಗಾಂಧಿಯವರಿಗೆ ಮಾತ್ರ. ಹೀಗಾಗಿ ಗಾಂಧಿ ಅವರಿಗೆ ಗಾಂಧಿಯೇ ಸಾಟಿ. ವಿಶ್ವದಲ್ಲಿ ಮಹಾತ್ಮ ಎಂದು ಕರೆಸಿಕೊಳ್ಳುವ ನಿಜವಾದ ಅರ್ಹತೆ ಹೊಂದಿದ್ದವರು ಗಾಂಧಿ ಮಾತ್ರ. ಬದುಕಿರುವವರೆಗೂ, ತಮ್ಮ ದೇಹದಲ್ಲಿ ರಕ್ತದ ಕೊನೆ ಹನಿ ಇರುವವರೆಗೂ ಮನುಕುಲದ ಒಳಿತಿಗಾಗಿ ಶ್ರಮಿಸಬೇಕು ಎಂದು ಬದುಕಿದ್ದವರು. ಮನುಕುಲದ ಶಾಂತಿ-ನೆಮ್ಮದಿಗಾಗಿ ದುಡಿಯುತ್ತಿದ್ದವರು. ಇವರು ಇನ್ನಷ್ಟು ವರ್ಷಗಳ ಕಾಲ ಬದುಕಿದ್ದಿದ್ದರೆ ಭಾರತದ ಚಿತ್ರಣವೇ ಇನ್ನೂ ಭಿನ್ನವಾಗಿರುತ್ತಿತ್ತು' ಎಂದು ಹೇಳಿದರು.

`ಇವತ್ತಿನ ವಿದ್ಯಾರ್ಥಿ ಯುವಜನರು ಗಾಂಧಿ ಮಹಾತ್ಮ ಏಕಾದರು ಎನ್ನುವುದನ್ನು ಅರಿತುಕೊಳ್ಳಬೇಕು. ಈ ವಿಶ್ವಕ್ಕೆ, ಈ ದೇಶಕ್ಕೆ ನೆಮ್ಮದಿ-ಶಾಂತಿಯ ಬದುಕು ಬೇಕೆಂದರೆ ಅದು ಗಾಂಧಿ ಅವರ ಬದುಕಿನ ಸಂದೇಶಗಳಿಂದ, ಬದುಕಿನ ಮಾರ್ಗದಿಂದ ಮಾತ್ರ ಸಾಧ್ಯ. ಹೀಗಾಗಿ ಮಹಾತ್ಮರ ಪುಣ್ಯತಿಥಿಯಂದು ದೇಶದ ಸ್ವಾತಂತ್ರಕ್ಕಾಗಿ ಹೋರಾಡಿ ಮಡಿದ, ಮನುಕುಲದ ಶಾಂತಿಗಾಗಿ ತ್ಯಾಗ ಬಲಿದಾನಗೈದ ಪ್ರತಿಯೊಬ್ಬರನ್ನೂ ಸ್ಮರಿಸುತ್ತಾ ಅವರೆಲ್ಲರಿಗೂ ಈ ಸಂದರ್ಭದಲ್ಲಿ ನಮನಗಳನ್ನು ಸಲ್ಲಿಸುತ್ತೇನೆ' ಎಂದು ಸಿದ್ದರಾಮಯ್ಯ ಹೇಳಿದರು.

`ಕಾಂಗ್ರೆಸ್‍ನ ಎಲ್ಲ ಸದಸ್ಯರು ಅಹಿಂಸೆ ಮೂಲಕ ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು. ಈ ದೇಶ, ಪ್ರಜಾಪ್ರಭುತ್ವ, ನಮ್ಮ ನಾಯಕರು ಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬೇಕು. ನಮ್ಮ ನಾಯಕರ ತ್ಯಾಗ, ಬಲಿದಾನ ನಮ್ಮ ಶಕ್ತಿ. ಅಹಿಂಸೆ, ತ್ಯಾಗ, ಬಲಿದಾನ ಇವೆಲ್ಲವೂ ಒಂದೊಂದು ಅಸ್ತ್ರ. ಈ ಪಕ್ಷದ ಸದಸ್ಯರಾಗಿರುವುದು ನಮ್ಮ ಭಾಗ್ಯ'

-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X