ಪಂಜಾಬ್ ವಿಧಾನಸಭಾ ಚುನಾವಣೆ: ಎರಡು ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಸ್ಪರ್ಧೆ

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ
ಹೊಸದಿಲ್ಲಿ,ಜ.30: ಪಂಜಾಬ್ ವಿಧಾನಸಭಾ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ರವಿವಾರ ಬಿಡುಗಡೆಗೊಳಿಸಿದ್ದು, ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರು ಬಹಾದುರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಕಾಂಗ್ರೆಸ್ ಈಗಾಗಲೇ ಚಮಕೌರ್ ಸಾಹಿಬ್ ಕ್ಷೇತ್ರದಿಂದ ಚನ್ನಿ ಉಮೇದುವಾರಿಕೆಯನ್ನು ಪ್ರಕಟಿಸಿದೆ. ಈ ಕ್ಷೇತ್ರದ ಹಾಲಿ ಶಾಸಕರಾಗಿರುವ ಚನ್ನಿ 2007ರಿಂದಲೂ ಅದನ್ನು ಪ್ರತಿನಿಧಿಸುತ್ತಿದ್ದಾರೆ.
ಚನ್ನಿ ಎರಡು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿರುವುದನ್ನು ಟೀಕಿಸಿರುವ ಆಪ್ ಮುಖ್ಯಸ್ಥ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು,‘ನಮ್ಮ ಸಮೀಕ್ಷೆಯಂತೆ ಚನ್ನಿ ಚಮಕೌರ್ ಸಾಹಿಬ್ನಲ್ಲಿ ಸೋಲುತ್ತಾರೆ ಎಂದು ನಾನು ಹೇಳಿದ್ದೆ. ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಾರೆ ಎಂದು ಕಾಂಗ್ರೆಸ್ ಪ್ರಕಟಿಸಿದೆ. ನಮ್ಮ ಸಮೀಕ್ಷೆ ನಿಜ ಎನ್ನುವುದು ಇದರ ಅರ್ಥವೇ ?’ಎಂದು ಟ್ವೀಟಿಸಿದ್ದಾರೆ.
Next Story





