Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೋವಿಡ್ 19 ಲಸಿಕೆ; ಉಡುಪಿ ಜಿಲ್ಲೆಯಲ್ಲಿ...

ಕೋವಿಡ್ 19 ಲಸಿಕೆ; ಉಡುಪಿ ಜಿಲ್ಲೆಯಲ್ಲಿ ವಾರದೊಳಗೆ ಶೇ.100 ಸಾಧನೆ ಗುರಿ

ವಾರ್ತಾಭಾರತಿವಾರ್ತಾಭಾರತಿ31 Jan 2022 8:06 PM IST
share
ಕೋವಿಡ್ 19 ಲಸಿಕೆ; ಉಡುಪಿ ಜಿಲ್ಲೆಯಲ್ಲಿ ವಾರದೊಳಗೆ ಶೇ.100 ಸಾಧನೆ ಗುರಿ

ಉಡುಪಿ, ಜ.31: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ನೀಡುವಲ್ಲಿ ಪ್ರಥಮ ಡೋಸ್ ಶೇ.98.55 ಹಾಗೂ ಎರಡನೇ ಡೋಸ್ ಶೇ.87.22 ಸಾಧನೆ ಆಗಿದ್ದು, ಒಂದು ವಾರದ ಅವಧಿಯಲ್ಲಿ ಎರಡೂ ವಿಭಾಗದಲ್ಲಿ ಶೇ.100 ಲಸಿಕೆ ನೀಡುವ ಯೋಜನೆಯನ್ನು ರೂಪಿಸಲಾಗಿದೆ.

ಇದಕ್ಕಾಗಿ ಫೆಬ್ರವರಿ 2ರ ಬುಧವಾರ ಮತ್ತು ಫೆ.4 ಶುಕ್ರವಾರದಂದು ಕೋವಿಡ್ ಲಸಿಕಾ ಪ್ರಗತಿ ಹೆಚ್ಚಿಸಲು ವಿಶೇಷ ಲಸಿಕಾ ಅಭಿಯಾನ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಗ್ರಾಪಂ ಮತ್ತು ನಗರ ವ್ಯಾಪ್ತಿಯಲ್ಲಿ ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆಯದವರನ್ನು ಮತ್ತು ಪ್ರಥಮ ಡೋಸ್ ಕೋವಿಶೀಲ್ಡ್ ಪಡೆದು 84 ದಿನ ದಾಟಿದವರಲ್ಲಿ ಮತ್ತು ಪ್ರಥಮ ಡೋಸ್ ಕೋವಾಕ್ಸಿನ್ ಲಸಿಕೆ ಪಡೆದು 28 ದಿನ ದಾಟಿದವರಲ್ಲಿ 2ನೇ ಡೋಸ್ ಪಡೆಯದವರಿಗೆ ಹಾಗೂ 60 ವರ್ಷ ಮೇಲ್ಪಟ್ಟವರು, ಮುಂಚೂಣಿ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತಯರು 2ನೇ ಡೋಸ್ ಲಸಿಕೆ ಪಡೆದು 9 ತಿಂಗಳು ದಾಟಿದವರಿಗೆ ಮುನ್ನೆಚ್ಚರಿಕೆ ಡೋಸ್ ನೀಡಲಾಗುತ್ತದೆ.

ಜಿಲ್ಲೆಯಲ್ಲಿ ಒಂದು ವಾರದ ಅವಧಿಯಲ್ಲಿ ಪ್ರಥಮ ಮತ್ತು ಎರಡನೇ ಡೋಸ್ ಕೋವಿಡ್ ಲಸಿಕಾಕರಣದಲ್ಲಿ ಶೇ.100 ಸಾಧನೆ ಮಾಡಲು ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಹಾಗೂ ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಾರ್ಡ್‌ವಾರು ನೋಡೆಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿ ಧ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಈ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಸಂಬಂಧಪಟ್ಟ ಆರೋಗ್ಯ ಸಂಸ್ಥೆಗಳಿಗೆ ಮತ್ತು ಆರೋಗ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಪಂಚಾಯತ್ / ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ಮಾಡಿ ವೈದ್ಯಾಧಿಕಾರಿಗಳಿಗೆ ಮತ್ತು ಲಸಿಕಾ ತಂಡಕ್ಕೆ ಮತ್ತು ಪಂಚಾಯತ್ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿ ಕೋವಿಡ್ ಲಸಿಕಾಕರಣದಲ್ಲಿ ಶೇ.100 ಪಗತಿ ಸಾಧಿಸಲು ಸಹಕರಿಸುವಂತೆ ಸೂಚನೆಗಳನ್ನು ನೀಡಲಾಗಿದೆ.

ಗ್ರಾಪಂ ಮತ್ತು ನಗರ ವ್ಯಾಪ್ತಿಯಲ್ಲಿ 18 ವರ್ಷ ಮೇಲ್ಪಟ್ಟವರಲ್ಲಿ 1ನೇ ಡೋಸ್ ಕೋವಿಡ್ ಲಸಿಕೆ ಪಡೆಯಲು ಬಾಕಿ ಇರುವವರನ್ನು ಮತ್ತು 2ನೇ ಡೋಸ್ ಕೋವಿಡ್ ಲಸಿಕೆ ಪಡೆಯಲು ಬಾಕಿ ಇರುವವರನ್ನು ಗುರುತಿಸಿ ಮನವೊಲಿಸಿ ಲಸಿಕೆ ಪಡೆಯಲು ಪ್ರೇರೇಪಿಸಿ ಲಸಿಕೆ ನೀಡಲು ಕ್ರಮ ವಹಿಸ ಬೇಕಾಗಿದ್ದು, ಲಸಿಕೆ ವಂಚಿತರನ್ನು ಹಾಗೂ ನಿರಾಕರಿಸುವವರ ಮನವೊಲಿಸು ವಂತೆ ಸೂಚನೆ ನೀಡಲಾಗಿದೆ.

ಗ್ರಾಪಂ ಮತ್ತು ನಗರ ವ್ಯಾಪ್ತಿಯಲ್ಲಿ ಲಸಿಕೆ ಪಡೆಯಲು ಬಾಕಿ ಇರುವ 15 ರಿಂದ 18 ವರ್ಷದ ವಿದ್ಯಾರ್ಥಿಗಳು ಮತ್ತು ಅದೇ ವಯಸ್ಸಿನ ಶಾಲೆಗಳಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಗ್ರಾಮ/ನಗರ ಕಾರ್ಯಪಡೆ ಅಧ್ಯಕ್ಷರು ಮತ್ತು ಸದಸ್ಯರ ಸಹಕಾರದಿಂದ ಲಸಿಕೆ ಪಡೆಯುವಂತೆ ಕ್ರಮ ವಹಿಸಬೇಕಾಗಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಮೊಬೈಲ್ ಲಸಿಕಾ ಶಿಬಿರಗಳ ಮೂಲಕ ಹಿರಿಯರು ಮತ್ತು ಅಸ್ವಸ್ಥರಿರುವ ಮತ್ತು ಲಸಿಕೆ ಪಡೆಯಲು ನಿರಾಕರಿಸು ವವರ ಮನೆಗಳಿಗೆ ತಂಡದೊಂದಿಗೆ ತೆರಳಿ ಮನವೊಲಿಸಿ ಲಸಿಕೆ ನೀಡುವಂತೆ ತಿಳಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಂದ ಆರೋಗ್ಯ ಇಲಾಖೆಗೆ ವಾಹನ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ.

ಗುರಿ 9.99ಲಕ್ಷ- ಸಾಧನೆ 9.84ಲಕ್ಷ

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಗುರಿ 9,99,000 ಆಗಿದ್ದು, ಇಂದಿನವರೆಗೆ 9,84,551 ಮಂದಿಗೆ ಪ್ರಥಮ ಡೋಸ್ ನೀಡಿದ್ದು, ಶೇ.98.55 ರಷ್ಟು ಗುರಿ ಸಾಧಿಸಲಾಗಿದೆ. ಎರಡನೇ ಡೋಸ್‌ನಲ್ಲಿ ಈವರೆಗೆ 8,71,317 ಮಂದಿಗೆ ಲಸಿಕೆ ನೀಡಿದ್ದು, ಶೇ.87.22 ಸಾಧನೆ ಆಗಿದೆ. ಒಟ್ಟು 18,55,868 ಡೋಸ್ ಲಸಿಕೆ ನೀಡಲಾಗಿದೆ. 15-18 ವರ್ಷದೊಳಗಿನ ಗುರಿ 53,555 ಆಗಿದ್ದು, ಇದುವರೆಗೆ 47,185 ವಿದ್ಯಾರ್ಥಿಗಳು ಲಸಿಕೆ ಪಡೆದಿದ್ದು, ಶೇ. 88.11 ಸಾಧನೆ ಆಗಿದೆ. 25,797 ಮಂದಿಗೆ ಮುನ್ನೆಚ್ಚರಿಕಾ ಡೋಸ್ ನೀಡಲಾಗಿದೆ.

''ಜಿಲ್ಲೆಯ ಅರ್ಹ ಎಲ್ಲರಿಗೂ ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ನೀಡಲು ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಹಾಗೂ ಲಸಿಕೆ ಪಡೆಯಲು ನಿರಾಕರಣೆ ಇರುವವರ ಮನೆಗೆ ತೆರಳಿ ಮನವೊಲಿಸಿ ಲಸಿಕೆ ನೀಡಲು ಮೊಬೈಲ್ ತಂಡಗಳನ್ನು ರಚಿಸಲಾಗಿದೆ. ಜಿಲ್ಲೆಯಲ್ಲಿ ಶೇ.100 ಲಸಿಕಾಕರಣ ಪ್ರಗತಿ ಸಾಧಿಸಲು ವಿಶೇಷ ಲಸಿಕಾ ಶಿಬಿರ ಗಳನ್ನು ಆಯೋಜಿಸಲಾಗುತ್ತಿದ್ದು, ಒಂದು ವಾರದ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಅರ್ಹರಿಗೂಲಸಿಕೆ ನೀಡಿ ಶೇ.100 ಸಾಧನೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ''.
-ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X