ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು, ಜ.31: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಕೆಲ ದಿನಗಳವರೆಗೆ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಕೆಲ ದಿನಗಳಿಂದ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಶಿವಮೊಗ್ಗದ ಕೆಲವು ಪ್ರದೇಶ ಸೇರಿ ರಾಜ್ಯದ ಕೆಲವು ಊರುಗಳಲ್ಲಿ ತುಂತುರು ಮಳೆ ಬಿದ್ದಿದ್ದು, ಇದು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಇದೇ ವೇಳೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಎಂದಿನಂತೆ ಒಣ ಹವೆ ಮುಂದುವರಿಯಲಿದೆ. ಸೋಮವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಬೆಂಗಳೂರು ಸೇರಿ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯೂ ಆಗಿದೆ.
Next Story





