ವಾಣಿಜ್ಯ ಬಳಕೆಯ ಸಿಲಿಂಡರ್ ದರ 91.50 ರೂಪಾಯಿ ಇಳಿಕೆ

ಹೊಸದಿಲ್ಲಿ: ಕೇಂದ್ರ ಬಜೆಟ್ ಗೂ ಮೊದಲು ಮಂಗಳವಾರ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 91.50 ರೂಪಾಯಿ ಇಳಿಕೆಯಾಗಿದೆ.
ಗ್ರಾಹಕರಿಗೆ ಪರಿಹಾರವಾಗಿ ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಫೆಬ್ರವರಿ 1, 2022 ರಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ರೂ 91.50 ರಷ್ಟು ಕಡಿತಗೊಳಿಸಿದೆ. ಇಂದಿನಿಂದ ದಿಲ್ಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ರೂ 1, 907 ಆಗಲಿದೆ ಎಂದು ಮೂಲಗಳು ಎಎನ್ಐಗೆ ತಿಳಿಸಿವೆ.
Next Story





