ಮಾಜಿ ಶಾಸಕ ಎಂ.ಎಂ ಸಜ್ಜನ್ ನಿಧನ

ಎಂ.ಎಂ ಸಜ್ಜನ್
ವಿಜಯಪುರ: ಮುದ್ದೇಬಿಹಾಳ ಕ್ಷೇತ್ರದ ಮಾಜಿ ಶಾಸಕ ಎಂ.ಎಂ ಸಜ್ಜನ್ (95) ಮಂಗಳವಾರ ನಿಧನರಾದರು.
ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿರುವ ಸಜ್ಜನ್ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದರು.
ಸಜ್ಜನ್ ಅವರು ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ 1972-78 ರವರೆಗೆ ಸೇವೆ ಸಲ್ಲಿಸಿದ್ದರು. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಮುದ್ದೇಬಿಹಾಳದ ಪಟ್ಟಣದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Next Story





