Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇದು ಜನಸ್ನೇಹಿ ಬಜೆಟ್ ಅಲ್ಲವೇ ಅಲ್ಲ,...

ಇದು ಜನಸ್ನೇಹಿ ಬಜೆಟ್ ಅಲ್ಲವೇ ಅಲ್ಲ, ಸರ್ಕಾರ ಶ್ರೀಮಂತರ ಪರವಾಗಿದೆ: ರಾಮಲಿಂಗಾ ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ1 Feb 2022 3:40 PM IST
share
ಇದು ಜನಸ್ನೇಹಿ ಬಜೆಟ್ ಅಲ್ಲವೇ ಅಲ್ಲ, ಸರ್ಕಾರ ಶ್ರೀಮಂತರ ಪರವಾಗಿದೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: 'ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರು ಇಂದು ಬಜೆಟ್ ಮಂಡನೆ ಮಾಡಿದ್ದಾರೆ. 2 ವರ್ಷಗಳಿಂದ ಕೊರೋನದಿಂದ ಲಕ್ಷಾಂತರ ಜನ ಸತ್ತಿದ್ದು, ಕೋಟ್ಯಂತರ ಜನ ತೊಂದರೆ ಅನುಭವಿಸಿದ್ದಾರೆ. ಈ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಕೋವಿಡ್ ಸಂತ್ರಸ್ತರು ಹಾಗೂ ಸತ್ತವರಿಗೆ ಪರಿಹಾರ ನೀಡಲಿದೆ ಎಂಬ ನಿರೀಕ್ಷೆ ಮಾಡಿದ್ದೆವು. ಅವೆಲ್ಲವೂ ಸಂಪೂರ್ಣವಾಗಿ ಹುಸಿಯಾಗಿವೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. 

ಸುದ್ದಿಗಾರರ ಜೊತೆ ಮಾತನಾಡಿದ ಅವರು,  'ಇದು ಜನಸ್ನೇಹಿ ಬಜೆಟ್ ಅಲ್ಲವೇ ಅಲ್ಲ. ಬಡವರು ಹಾಗೂ ಮಧ್ಯಮ ವರ್ಗದವರ ಪರವಾಗಿ ಸರ್ಕಾರ ಇಲ್ಲ ಎಂಬುದಕ್ಕೆ ಈ ಬಜೆಟ್ ಸಾಕ್ಷಿ. ಆದಾಯ ತೆರಿಗೆ ಯಥಾಸ್ಥಿತಿ ಮುಂದುವರಿದಿದೆ. ಬಿಜೆಪಿಯ ಈ ಹಿಂದಿನ ಬಜೆಟ್ ಗಳ ರೀತಿಯಲ್ಲೇ ಈ ಬಜೆಟ್ ನಲ್ಲೂ ಅನುಕೂಲಸ್ಥರು, ಶ್ರೀಮಂತರಿಗೆ ತೆರಿಗೆ ಕಡಿಮೆ ಮಾಡಲಾಗಿದೆ. ಈ ಸರ್ಕಾರ ಬಡವರು ಹಾಗೂ ಮಧ್ಯಮವರ್ಗದವರಿಗಿಂತ ಶ್ರೀಮಂತರ ಪರವಾಗಿದೆ ಎಂಬುದು ಮತ್ತೊಮ್ಮೆ ಸಾಕ್ಷಿಯಾಗಿದೆ' ಎಂದು ಕಿಡಿಗಾರಿದರು. 

''25 ದೊಡ್ಡ ಉದ್ಯಮಿಗಳ 8 ಲಕ್ಷ ಕೋಟಿ ಮೊತ್ತದ ಎನ್ ಪಿಎ (ಕೆಟ್ಟ ಸಾಲ) ಮನ್ನಾ ಮಾಡಿದ ಸರ್ಕಾರ ಇದು. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಕೇಂದ್ರ ಸರ್ಕಾರ, ರೈತರು ಹಾಗೂ ಕಾರ್ಮಿಕರಿಗೆ ಯಾವುದೇ ಹೊಸ ಕಾರ್ಯಕ್ರಮಗಳನ್ನು ನೀಡಲಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದ ಶ್ರೀಮಂತರ ಮೇಲೆ ತೆರಿಗೆ ಹಾಕಿ ಬಡವರು, ಬಿಪಿಎಲ್ ಕಾರ್ಡುಗಳ ಮೂಲಕ ಬಡವರಿಗೆ ಆಹಾರ ಪದಾರ್ಥದಿಂದ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳಲ್ಲಿ ಸಬ್ಸಿಡಿ ನೀಡುವ ಪದ್ಧತಿ ಇತ್ತು. ಆದರೆ ಇಂದು ಬಿಜೆಪಿ ಸರ್ಕಾರ ಶ್ರೀಮಂತರಿಗೆ ಅನುಕೂಲ ಮಾಡಿಕೊಟ್ಟು, ಬಡವರು ಹಾಗೂ ಮಧ್ಯಮವರ್ಗದವರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಬಡವರು ಮತ್ತಷ್ಟು ಬಡವರಾಗಿ, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುವಂತೆ ಮಾಡುವುದೇ ಈ ಬಜೆಟ್ ತಿರುಳು'' ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿ ಅವರು 2014ರಲ್ಲಿ ಅಧಿಕಾರಕ್ಕೆ ಬರುವ ಮುನ್ನ ಅವರ ಪ್ರಣಾಳಿಕೆಯನ್ನು ಒದಿದ್ದರೋ ಇಲ್ಲವೋ, ಆದರೆ ಅವರ ಭರವಸೆಗಳನ್ನು ಮರೆತಿದ್ದಾರೆ. ಆಗ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದಿದ್ದರು. ಮುಂದಿನ ಮೇ ತಿಂಗಳಿಗೆ ಅವರು ಅಧಿಕಾರಕ್ಕೆ ಬಂದು 8 ವರ್ಷ ಪೂರ್ಣಗೊಳ್ಳುತ್ತದೆ. ಕನಿಷ್ಠ 15-16 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ ದೇಶದಲ್ಲಿ ಕೋಟ್ಯಂತರ ಉದ್ಯೋಗಗಳು ನಷ್ಟವಾಗಿವೆ ಎಂದರು.

ಮನಮೋಹನ್ ಸಿಂಗ್ ಅವರ 10 ವರ್ಷಗಳ ಆಡಳಿತ ಕಾಲದಲ್ಲಿ 24 ಕೋಟಿ ಜನ ಬಡತನ ರೇಖೆಗಿಂತ ಮೇಲೆ ಬಂದಿದ್ದರು. ಇವರ ಆಡಳಿತ ಅವಧಿಯಲ್ಲಿ 22 ಕೋಟಿ ಜನ ಬಡತನ ರೇಖೆಗಿಂತ ಕೆಳಕ್ಕೆ ಕುಸಿದಿದ್ದಾರೆ. ಇದೇ ಮೋದಿ ಅವರ ಸರ್ಕಾರದ ಸಾಧನೆ.

ನದಿ ಜೋಡಣೆ ಮಾಡುತ್ತೇವೆ ಎಂದರೆ ಎಲ್ಲ ಪಕ್ಷಗಳು ಸ್ವಾಗತ ಮಾಡುತ್ತೇವೆ. ಎಲ್ಲ ರಾಜ್ಯಗಳ ಒಪ್ಪಿಗೆ ಅಗತ್ಯವಿದ್ದು, ಹೆಚ್ಚುವರಿ ನೀರು ಸಿಗುವಾಗ ಕುಡಿಯುವ ನೀರಿನ ಕೊರತೆ ನೀಗಿಸಲು ನೆರವಾಗುತ್ತದೆ. ನಮ್ಮ ದೇಶದಲ್ಲಿ ರಸ್ತೆಗಳ ಜೋಡಣೆಗೂ ಮುನ್ನ ನದಿಗಳ ಜೋಡಣೆ ಮಾಡಬೇಕು ಎಂಬ ಉದ್ದೇಶವಿತ್ತು. ಆದರೆ ವಾಜಪೇಯಿ ಅವರು ಹಾಗೂ ನಂತರದ ಸರ್ಕಾರ ರಸ್ತೆಗಳಿಗೆ ಆದ್ಯತೆ ನೀಡಿದ್ದವು. ಹೀಗಾಗಿ ಈ ನದಿ ಜೋಡಣೆ ನೆನೆಗುದಿಗೆ ಬಿದ್ದಿತ್ತು. ಈಗ ಅದನ್ನು ಕೈಗೆತ್ತಿಕೊಂಡರೆ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಬಜೆಟ್ ನಲ್ಲಿ ಒನ್ ನೇಷನ್ ಎಂಬುದ್ದೆಲ್ಲ ಇಲ್ಲ. ಇದರಲ್ಲಿ ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ. ಕೇಂದ್ರದವರು ರಾಜ್ಯಗಳಿಗೆ ಇದ್ದ ಅಧಿಕಾರವನ್ನು ಒಂದೊಂದಾಗಿ ಕಸಿಯುತ್ತಿದ್ದು, ಎಲ್ಲವೂ ತಮ್ಮ ನಿಯಂತ್ರಣದಲ್ಲೇ ಇರಬೇಕು ಎಂದು ವರ್ತಿಸುತ್ತಿದ್ದಾರೆ. ಐಎಎಸ್ ಅಧಿಕಾರಿಗಳ ವಿಚಾರ, ಜಿಎಸ್ ಟಿ, ಚುನಾವಣಾ ಆಯೋಗ, ಸಿಬಿಐ, ಆರ್ ಬಿಐನಂತಹ ಸ್ವಾಯತ್ತ ಸಂಸ್ಥೆಗಳು ಹಲ್ಲು ಕಿತ್ತ ಹಾವಿನಂತಾಗಿವೆ ಎಂದು ವ್ಯಂಗ್ಯವಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X